Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 20:14 - ಪರಿಶುದ್ದ ಬೈಬಲ್‌

14 ಆಗ ನಡೆದ ಸಂಗತಿಯನ್ನೆಲ್ಲ ಅರ್ಥಮಾಡಿಕೊಂಡು ಸಾರಳನ್ನು ಅಬ್ರಹಾಮನಿಗೆ ಒಪ್ಪಿಸಿದನು; ಅಲ್ಲದೆ ಕುರಿಗಳನ್ನೂ ದನಗಳನ್ನೂ ಸೇವಕಸೇವಕಿಯರನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಅಬೀಮೆಲೆಕನು ಅಬ್ರಹಾಮನಿಗೆ ಕುರಿದನಗಳನ್ನೂ ದಾಸದಾಸಿಯರನ್ನೂ ಕೊಟ್ಟು, ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಅಬೀಮೆಲೆಕನು ಅಬ್ರಹಾಮನಿಗೆ ದನಕುರಿಗಳನ್ನೂ ದಾಸದಾಸಿಯರನ್ನೂ ಕೊಟ್ಟು ಅವನ ಹೆಂಡತಿ ಸಾರಳನ್ನು ಅವನಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಅಬೀಮೆಲೆಕನು ಅಬ್ರಹಾಮನಿಗೆ ಕುರಿದನಗಳನ್ನೂ ದಾಸದಾಸಿಯರನ್ನೂ ಕೊಟ್ಟು ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅಬೀಮೆಲೆಕನು ಕುರಿಗಳನ್ನೂ ಎತ್ತುಗಳನ್ನೂ ದಾಸರನ್ನೂ ದಾಸಿಯರನ್ನೂ ತೆಗೆದುಕೊಂಡು ಅಬ್ರಹಾಮನಿಗೆ ಕೊಟ್ಟು, ಅವನ ಹೆಂಡತಿ ಸಾರಳನ್ನು ಅವನಿಗೆ ಒಪ್ಪಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 20:14
7 ತಿಳಿವುಗಳ ಹೋಲಿಕೆ  

ಅಬ್ರಾಮನು ಸಾರಯಳ ಸಹೋದರನೆಂದು ಭಾವಿಸಿ ಫರೋಹನು ಅಬ್ರಾಮನಿಗೆ ದಯೆತೋರಿದನು. ಫರೋಹನು ಅಬ್ರಾಮನಿಗೆ ದನಕುರಿಗಳನ್ನೂ ಕತ್ತೆಗಳನ್ನೂ ಕೊಟ್ಟನು. ಅಲ್ಲದೆ ಅಬ್ರಾಮನಿಗೆ ದಾಸದಾಸಿಯರನ್ನೂ ಒಂಟೆಗಳನ್ನೂ ಕೊಟ್ಟನು.


ಅಬ್ರಹಾಮನು ಅವನಿಗೆ, “ನನಗೆ ಹೆದರಿಕೆಯಾಗಿತ್ತು. ಈ ಸ್ಥಳದವರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದು ನಾನು ಭಾವಿಸಿಕೊಂಡೆ. ಯಾರಾದರೂ ನನ್ನನ್ನು ಕೊಂದು ಸಾರಳನ್ನು ತೆಗೆದುಕೊಳ್ಳಬಹುದೆಂದು ಯೋಚಿಸಿದೆ.


ಆದ್ದರಿಂದ ಅಬ್ರಹಾಮನಿಗೆ ಅವನ ಹೆಂಡತಿಯನ್ನು ಒಪ್ಪಿಸಿಬಿಡು. ಅಬ್ರಹಾಮನು ಪ್ರವಾದಿಯಾಗಿರುವುದರಿಂದ ನಿನಗೋಸ್ಕರ ಪ್ರಾರ್ಥಿಸುವನು, ಆಗ ನೀನು ಬದುಕಿಕೊಳ್ಳುವೆ. ನೀನು ಸಾರಳನ್ನು ಅಬ್ರಹಾಮನಿಗೆ ಹಿಂತಿರುಗಿಸದಿದ್ದರೆ, ನೀನೂ ನಿನ್ನ ಇಡೀ ಕುಟುಂಬದವರೂ ಸಾಯುವಿರೆಂದು ನಾನು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.


ಅಬ್ರಹಾಮನು ಗೆರಾರಿನಲ್ಲಿದ್ದಾಗ ಸಾರಳು ತನಗೆ ತಂಗಿಯಾಗಬೇಕೆಂದು ಹೇಳಿಕೊಂಡನು. ಗೆರಾರಿನ ರಾಜನಾಗಿದ್ದ ಅಬೀಮೆಲೆಕನು ಇದನ್ನು ಕೇಳಿ ಸಾರಳನ್ನು ಪಡೆದುಕೊಳ್ಳಲು ಬಯಸಿದನು. ಬಳಿಕ ಅವನು ಕೆಲವು ಸೇವಕರನ್ನು ಕಳುಹಿಸಿ ಆಕೆಯನ್ನು ಕರೆಯಿಸಿಕೊಂಡನು.


“ಆದರೆ ಆ ಸೇವಕನು ದುಷ್ಟನಾಗಿ ತನ್ನ ಯಜಮಾನನು ಬೇಗನೆ ಹಿಂತಿರುಗಿ ಬರುವುದಿಲ್ಲ ಎಂದುಕೊಂಡರೆ ಏನಾಗುವುದು? ಆ ಸೇವಕನು ಯಜಮಾನನ ಇತರ ದಾಸದಾಸಿಯರನ್ನು ಹೊಡೆಯುವುದಕ್ಕೂ ತಿಂದುಕುಡಿದು ಮತ್ತನಾಗುವುದಕ್ಕೂ ತೊಡಗುವನು.


ಆಮೇಲೆ ಅಬೀಮೆಲೆಕನು ಮತ್ತು ಫೀಕೋಲನು ಅಬ್ರಹಾಮನೊಡನೆ ಮಾತಾಡಿದರು. ಫೀಕೋಲನು ಅಬೀಮೆಲೆಕನ ಸೈನ್ಯಾಧಿಕಾರಿಯಾಗಿದ್ದನು. ಅಬೀಮೆಲೆಕನು ಅಬ್ರಹಾಮನಿಗೆ, “ನೀನು ಮಾಡುವ ಪ್ರತಿಯೊಂದರಲ್ಲೂ ದೇವರು ನಿನ್ನೊಡನೆ ಇದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು