Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 20:15 - ಪರಿಶುದ್ದ ಬೈಬಲ್‌

15 ಅಬೀಮೆಲೆಕನು ಅಬ್ರಹಾಮನಿಗೆ, “ಇಗೋ, ಇದು ನನ್ನ ದೇಶ. ನಿನಗೆ ಇಷ್ಟವಾದ ಸ್ಥಳದಲ್ಲಿ ವಾಸಮಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಇಗೋ, ಇದು ನನ್ನ ದೇಶ; ಇದರೊಳಗೆ ನಿನಗೆ ಇಷ್ಟವಿದ್ದ ಕಡೆಯಲ್ಲಿ ನೀನು ವಾಸ ಮಾಡಬಹುದು” ಎಂದು ಅಬೀಮೆಲೆಕನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅದೂ ಅಲ್ಲದೆ, “ಇಗೋ, ನನ್ನ ನಾಡು ನಿನಗೆ ತೆರೆದಿದೆ; ಇಷ್ಟಬಂದ ಕಡೆ ಹೋಗಿ ವಾಸಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಗೋ ನನ್ನ ದೇಶವು; ಇದರೊಳಗೆ ನಿನಗೆ ಇಷ್ಟವಿದ್ದ ಕಡೆಯಲ್ಲಿ ವಾಸಮಾಡಬಹುದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅಬೀಮೆಲೆಕನು, “ನನ್ನ ದೇಶವು ನಿನ್ನ ಮುಂದೆ ಇದೆ, ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 20:15
5 ತಿಳಿವುಗಳ ಹೋಲಿಕೆ  

ನೀವು ನಮ್ಮೊಂದಿಗೆ ಒಂದೇ ದೇಶದಲ್ಲಿ ವಾಸವಾಗಿರಬಹುದು. ನಿಮಗೆ ಇಲ್ಲಿ ಜಮೀನು ಮಾಡಿಕೊಳ್ಳಲು ಮತ್ತು ವ್ಯಾಪಾರ ಮಾಡಲು ಸ್ವತಂತ್ರವಿದೆ” ಎಂದು ಹೇಳಿದನು.


ನಾವು ಪ್ರತ್ಯೇಕವಾಗೋಣ. ನಿನಗೆ ಬೇಕಾದ ಸ್ಥಳವನ್ನು ನೀನು ಆರಿಸಿಕೊ. ನೀನು ಎಡಗಡೆಗೆ ಹೋಗುವುದಾದರೆ, ನಾನು ಬಲಗಡೆಗೆ ಹೋಗುತ್ತೇನೆ. ನೀನು ಬಲಗಡೆಗೆ ಹೋಗುವುದಾದರೆ, ನಾನು ಎಡಗಡೆಗೆ ಹೋಗುತ್ತೇನೆ” ಎಂದು ಹೇಳಿದನು.


ಅವರ ವಾಸಕ್ಕಾಗಿ ಈಜಿಪ್ಟಿನಲ್ಲಿ ಯಾವ ಸ್ಥಳವನ್ನಾದರೂ ಆರಿಸಿಕೊಳ್ಳಬಹುದು. ನಿನ್ನ ತಂದೆಯೂ ನಿನ್ನ ಸಹೋದರರೂ ವಾಸವಾಗಿರಲು ಉತ್ತಮವಾದ ಪ್ರದೇಶವನ್ನು ಕೊಡು. ಅವರು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲಿ. ಅವರು ನಿಪುಣರಾದ ಕುರುಬರಾಗಿದ್ದರೆ, ಅವರು ನನ್ನ ದನಕರುಗಳನ್ನು ಸಹ ನೋಡಿಕೊಳ್ಳಬಹುದು” ಎಂದು ಹೇಳಿದನು.


ಯೆರೆಮೀಯನೇ, ನಾನು ಈಗ ನಿನ್ನನ್ನು ಬಿಡುಗಡೆ ಮಾಡುವೆನು. ನಾನು ನಿನ್ನ ಕೈಗಳಿಂದ ಸಂಕೋಲೆಗಳನ್ನು ಬಿಚ್ಚುವೆನು. ನೀನು ಇಷ್ಟಪಟ್ಟರೆ ನನ್ನ ಸಂಗಡ ಬಾಬಿಲೋನಿಗೆ ಬಾ, ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ನಿನಗೆ ನನ್ನ ಸಂಗಡ ಬರುವ ಇಷ್ಟವಿಲ್ಲದಿದ್ದರೆ ಬರಬೇಡ. ಇಡೀ ದೇಶದಲ್ಲಿ ನಿನಗೆ ಎಲ್ಲಿ ಇಷ್ಟವೋ ಅಲ್ಲಿಗೆ ಹೋಗು.


ಆಮೇಲೆ ನಿಮ್ಮ ಕಿರಿಯ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ. ಆಗ ನೀವು ಯಥಾರ್ಥರಾದವರೋ ಗೂಢಚಾರರೋ ಎಂದು ಗೊತ್ತಾಗುವುದು. ನೀವು ಸತ್ಯವನ್ನು ಹೇಳಿದ್ದರೆ ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು; ನಮ್ಮ ದೇಶದಲ್ಲಿ ಆಹಾರವನ್ನು ಕೊಳ್ಳಲು ನಿಮಗೆ ಯಾವ ತಡೆಯೂ ಇರುವುದಿಲ್ಲ’ ಎಂದು ಹೇಳಿದನು” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು