ಆದಿಕಾಂಡ 20:16 - ಪರಿಶುದ್ದ ಬೈಬಲ್16 ಅಬೀಮೆಲೆಕನು ಸಾರಳಿಗೆ, “ನಾನು ನಿನ್ನ ಅಣ್ಣನಾದ ಅಬ್ರಹಾಮನಿಗೆ ಒಂದು ಸಾವಿರ ಬೆಳ್ಳಿಯ ನಾಣ್ಯಗಳನ್ನು ಕೊಡುವೆ. ನಡೆದ ಈ ಘಟನೆಗಳಿಗೆ ಇದು ಪ್ರಾಯಶ್ಚಿತ್ತವಾಗಿದೆ. ನೀನು ನಿಷ್ಕಳಂಕಳೆಂದು ಇದು ಪ್ರತಿಯೊಬ್ಬರಿಗೂ ಸಾಕ್ಷಿಯಾಗಿರಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇದಲ್ಲದೆ ಅವನು ಸಾರಳಿಗೆ, “ನಿನ್ನ ಅಣ್ಣನಿಗೆ ಸಾವಿರ ರೂಪಾಯಿ ಕೊಟ್ಟಿದ್ದೇನೆ; ನಡೆದದ್ದನ್ನು ನಿನ್ನ ಕಡೆಯವರು ಗಮನಕ್ಕೆ ತೆಗೆದುಕೊಳ್ಳದಂತೆ ಇರಲು ಇದು ಪ್ರಾಯಶ್ಚಿವಾಗಿರಲಿ; ನೀನು ಮಾನಸ್ಥಳೆಂದು ಇದರಿಂದ ಎಲ್ಲರೂ ತಿಳಿದುಕೊಳ್ಳುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸಾರಳಿಗೆ ಅವನು ಹೇಳಿದ್ದೇನೆಂದರೆ, “ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟಿದ್ದೇನೆ. ಇದರಿಂದ ನೀನು ನಿರ್ದೋಷಿಯೆಂದು ರುಜುವಾತಾಗಲಿ; ನೀನು ತಪ್ಪು ಮಾಡಿಲ್ಲವೆಂದು ಎಲ್ಲರಿಗೂ ಸ್ಪಷ್ಟವಾಗಲಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇದಲ್ಲದೆ ಅವನು ಸಾರಳಿಗೆ - ನಿನ್ನ ಅಣ್ಣನಿಗೆ ಸಾವಿರ ರೂಪಾಯಿ ಕೊಟ್ಟಿದ್ದೇನೆ; ನಡೆದದ್ದನ್ನು ನಿನ್ನ ಕಡೆಯವರು ಲಕ್ಷ್ಯಕ್ಕೆ ತೆಗೆದುಕೊಳ್ಳದಂತೆ ಇದು ಪ್ರಾಯಶ್ಚಿತ್ತವಾಗಿರಲಿ; ನೀನು ಮಾನಸ್ಥಳೆಂದು ಇದರಿಂದ ಎಲ್ಲರೂ ತಿಳಿದುಕೊಳ್ಳುವರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಸಾರಳಿಗೆ, “ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿಯ ಹಣವನ್ನು ಕೊಟ್ಟಿದ್ದೇನೆ. ನೋಡು, ನಡೆದ ಘಟನೆಗೆ ಇದು ಪ್ರಾಯಶ್ಚಿತ್ತವಾಗಿದೆ. ನಿನ್ನ ಸಂಗಡ ಇರುವವರೆಲ್ಲರಿಗೂ ಉಳಿದವರೆಲ್ಲರಿಗೂ ನೀನು ನಿರ್ದೋಷಿಯೆಂದು ಇದು ಸಾಕ್ಷಿಯಾಗಿರಲಿ,” ಎಂದನು. ಅಧ್ಯಾಯವನ್ನು ನೋಡಿ |