Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 20:2 - ಪರಿಶುದ್ದ ಬೈಬಲ್‌

2 ಅಬ್ರಹಾಮನು ಗೆರಾರಿನಲ್ಲಿದ್ದಾಗ ಸಾರಳು ತನಗೆ ತಂಗಿಯಾಗಬೇಕೆಂದು ಹೇಳಿಕೊಂಡನು. ಗೆರಾರಿನ ರಾಜನಾಗಿದ್ದ ಅಬೀಮೆಲೆಕನು ಇದನ್ನು ಕೇಳಿ ಸಾರಳನ್ನು ಪಡೆದುಕೊಳ್ಳಲು ಬಯಸಿದನು. ಬಳಿಕ ಅವನು ಕೆಲವು ಸೇವಕರನ್ನು ಕಳುಹಿಸಿ ಆಕೆಯನ್ನು ಕರೆಯಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ತನ್ನ ಹೆಂಡತಿಯಾದ ಸಾರಳನ್ನು ತಂಗಿಯೆಂದು ಹೇಳಿಕೊಂಡದ್ದರಿಂದ, ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಇರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಲ್ಲಿದ್ದಾಗ ಅಬ್ರಹಾಮನು ತನ್ನ ಹೆಂಡತಿ ಸಾರಳು ತನಗೆ ತಂಗಿಯಾಗಬೇಕೆಂದು ಹೇಳಿಕೊಂಡನು. ಈ ಕಾರಣ ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಸೇರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ತನ್ನ ಹೆಂಡತಿಯಾದ ಸಾರಳನ್ನು ತಂಗಿಯೆಂದು ಹೇಳಿದನಾದ್ದರಿಂದ ಗೆರಾರಿನ ಅರಸನಾದ ಅಬೀಮೆಲೆಕನು ಕರೇಕಳುಹಿಸಿ ಆಕೆಯನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಗೆರಾರಿನಲ್ಲಿ ಅಬ್ರಹಾಮನು ತನ್ನ ಹೆಂಡತಿ ಸಾರಳ ವಿಷಯವಾಗಿ, “ಅವಳು ನನ್ನ ತಂಗಿ,” ಎಂದು ಹೇಳಿದ್ದನು. ಆದ್ದರಿಂದ ಗೆರಾರಿನ ಅರಸ ಅಬೀಮೆಲೆಕನು ಸಾರಳನ್ನು ಕರೆಯಿಸಿ ತನ್ನ ಅರಮನೆಗೆ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 20:2
17 ತಿಳಿವುಗಳ ಹೋಲಿಕೆ  

ಈಜಿಪ್ಟಿನ ಕೆಲವು ನಾಯಕರು ಸಹ ಆಕೆಯನ್ನು ಕಂಡರು. ಅವರು ಫರೋಹನ ಬಳಿಗೆ ಹೋಗಿ ಆಕೆಯ ಅಮೋಘ ಸೌಂದರ್ಯವನ್ನು ತಿಳಿಸಿದರು. ಬಳಿಕ ಆ ನಾಯಕರು ಸಾರಯಳನ್ನು ಫರೋಹನ ಬಳಿಗೆ ಕರೆದೊಯ್ದರು.


ಇಸಾಕನ ಹೆಂಡತಿಯಾದ ರೆಬೆಕ್ಕಳು ತುಂಬ ಸೌಂದರ್ಯವತಿಯಾಗಿದ್ದಳು. ಆ ಸ್ಥಳದ ಗಂಡಸರು ರೆಬೆಕ್ಕಳ ಬಗ್ಗೆ ಇಸಾಕನನ್ನು ಕೇಳಿದರು. ಇಸಾಕನು ಅವರಿಗೆ, “ಆಕೆ ನನ್ನ ತಂಗಿ” ಎಂದು ಹೇಳಿದನು. ರೆಬೆಕ್ಕಳು ತನಗೆ ಹೆಂಡತಿಯಾಗಬೇಕೆಂದು ಅವರಿಗೆ ತಿಳಿದರೆ ಆಕೆಯನ್ನು ತೆಗೆದುಕೊಳ್ಳಲು ಅವರು ತನ್ನನ್ನು ಕೊಲ್ಲಬಹುದೆಂಬ ಹೆದರಿಕೆಯಿಂದ ಇಸಾಕನು ಹಾಗೆ ಹೇಳಿದನು.


ಒಬ್ಬರಿಗೊಬ್ಬರು ಸುಳ್ಳು ಹೇಳಬೇಡಿ. ಏಕೆಂದರೆ ನೀವು ನಿಮ್ಮ ಹಳೆಯ ಪಾಪಪೂರಿತ ಜೀವನವನ್ನು ಮತ್ತು ನಿಮ್ಮ ಮೊದಲಿನ ಕಾರ್ಯಗಳನ್ನು ಬಿಟ್ಟುಬಿಟ್ಟಿದ್ದೀರಿ.


ಆದ್ದರಿಂದ ನೀವು ಸುಳ್ಳು ಹೇಳದೆ ಒಬ್ಬರಿಗೊಬ್ಬರು ಯಾವಾಗಲೂ ಸತ್ಯವನ್ನೇ ಹೇಳಿರಿ. ಏಕೆಂದರೆ ನಾವೆಲ್ಲರೂ ಒಂದೇ ದೇಹಕ್ಕೆ ಸೇರಿದ ಅಂಗಗಳಾಗಿದ್ದೇವೆ.


ಒಳ್ಳೆಯವನು ಏಳುಸಲ ಬಿದ್ದರೂ ಅವನು ಮತ್ತೆ ಎದ್ದುನಿಲ್ಲುವನು. ಆದರೆ ಕೆಡುಕರು ಒಂದೇ ಆಪತ್ತಿನಿಂದ ಶಾಶ್ವತವಾಗಿ ಸೋತುಹೋಗುವರು.


ಒಂದು ಸಾರಿ ಬಾಬಿಲೋನಿನವರು ಹಿಜ್ಕೀಯನ ಬಳಿಗೆ ದೂತರನ್ನು ಕಳುಹಿಸಿದರು. ಅವರು ದೇಶದಲ್ಲಿ ಆದ ಅದ್ಭುತ ವಿಷಯದ ಬಗ್ಗೆ ವಿಚಾರಿಸಿದರು. ಅವರು ಹಿಜ್ಕೀಯನ ಬಳಿಗೆ ಬಂದಾಗ ದೇವರು ಅವನನ್ನು ಪರೀಕ್ಷಿಸುವುದಕ್ಕಾಗಿಯೂ ಅವನ ಹೃದಯದಲ್ಲಿದ್ದ ಪ್ರತಿಯೊಂದು ಆಲೋಚನೆಯನ್ನು ತಿಳಿದುಕೊಳ್ಳುವುದಕ್ಕಾಗಿಯೂ ಅವನನ್ನು ತೊರೆದುಬಿಟ್ಟನು.


ದೇವದರ್ಶಿಯಾದ ಯೇಹೂ ಅವನನ್ನು ಎದುರುಗೊಂಡನು. ಅವನು ಹನಾನೀಯನ ಮಗ. ರಾಜನಿಗೆ ಯೇಹುವು ಹೇಳಿದ್ದೇನೆಂದರೆ, “ನೀನು ದುಷ್ಟಜನರಿಗೆ ಸಹಾಯಮಾಡಿದ್ದೇಕೆ? ಯೆಹೋವನನ್ನು ದ್ವೇಷಿಸುವ ಜನರನ್ನು ನೀನು ಪ್ರೀತಿಸಿದ್ದೇಕೆ? ಆ ಕಾರಣಕ್ಕಾಗಿ ಯೆಹೋವನು ನಿನ್ನ ಮೇಲೆ ಕೋಪಗೊಂಡಿದ್ದಾನೆ.


ಅಬೀಮೆಲೆಕನು ಇಸಾಕನಿಗೆ, “ನಮ್ಮ ದೇಶವನ್ನು ಬಿಟ್ಟುಹೋಗು. ನೀನು ನಮಗಿಂತಲೂ ತುಂಬ ಬಲಿಷ್ಠನಾದೆ” ಎಂದು ಹೇಳಿದನು.


ಅಬ್ರಹಾಮನ ಕಾಲದಲ್ಲಿ ಬಂದಿದ್ದ ಕ್ಷಾಮದಂತೆ ಮತ್ತೊಂದು ಕ್ಷಾಮವು ಕಾನಾನ್ ದೇಶಕ್ಕೆ ಬಂದಿತು. ಆದ್ದರಿಂದ ಇಸಾಕನು ಫಿಲಿಷ್ಟಿಯರ ರಾಜನಾದ ಅಬೀಮೆಲೆಕನ ಬಳಿಗೆ ಹೋದನು. ಅಬೀಮೆಲೆಕನು ಗೆರಾರ್ ನಗರದಲ್ಲಿದ್ದನು.


ಆಕೆ ನನ್ನ ಹೆಂಡತಿಯೇನೋ ನಿಜ, ಆದರೆ ಆಕೆ ನನಗೆ ತಂಗಿಯೂ ಆಗಬೇಕು. ಆಕೆ ನನ್ನ ತಂದೆಯ ಮಗಳು; ನನ್ನ ತಾಯಿಯ ಮಗಳಲ್ಲ.


ಆಗ ಎಲಿಯೇಜರನು ಯೆಹೋಷಾಫಾಟನ ವಿರುದ್ಧವಾಗಿ ಪ್ರವಾದಿಸಿದನು. ಅವನು ದೋದಾವಾಹುವಿನ ಮಗನು. ಅವನು ಮಾರೇಷ ಎಂಬ ಪಟ್ಟಣದವನಾಗಿದ್ದನು. ಅವನು, “ಯೆಹೋಷಾಫಾಟನೇ, ನೀನು ಅಹಜ್ಯನೊಂದಿಗೆ ಸೇರಿಕೊಂಡಿರುವೆ. ಇದಕ್ಕಾಗಿ ಯೆಹೋವನು ನಿನ್ನ ಕೆಲಸಗಳನ್ನು ನಾಶಮಾಡುವನು” ಎಂದು ಹೇಳಿದನು. ಅವನ ಹಡಗುಗಳು ಸಮುದ್ರದಲ್ಲಿ ಒಡೆದುಹೋದದ್ದರಿಂದ ಅವುಗಳು ತಾರ್ಷೀಷಿಗೆ ಹೋಗಲಾಗಲಿಲ್ಲ.


ಆಮೇಲೆ ಅಬೀಮೆಲೆಕನು ಮತ್ತು ಫೀಕೋಲನು ಅಬ್ರಹಾಮನೊಡನೆ ಮಾತಾಡಿದರು. ಫೀಕೋಲನು ಅಬೀಮೆಲೆಕನ ಸೈನ್ಯಾಧಿಕಾರಿಯಾಗಿದ್ದನು. ಅಬೀಮೆಲೆಕನು ಅಬ್ರಹಾಮನಿಗೆ, “ನೀನು ಮಾಡುವ ಪ್ರತಿಯೊಂದರಲ್ಲೂ ದೇವರು ನಿನ್ನೊಡನೆ ಇದ್ದಾನೆ.


ಮನುಷ್ಯರ ಭಯ ಉರುಲಾಗಬಹುದು. ಆದರೆ ಯೆಹೋವನ ಮೇಲಿರುವ ಭರವಸೆ ಕ್ಷೇಮವಾಗಿಡುವುದು.


ಬೇರೊಬ್ಬನ ಹೆಂಡತಿಯೊಡನೆ ಮಲಗಿಕೊಳ್ಳುವವನಿಗೆ ಇದೇ ರೀತಿಯಾಗುವುದು. ಅವನು ದಂಡನೆ ಅನುಭವಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು