Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 20:3 - ಪರಿಶುದ್ದ ಬೈಬಲ್‌

3 ಆದರೆ ಅಂದು ರಾತ್ರಿ ದೇವರು ಅಬೀಮೆಲೆಕನೊಡನೆ ಕನಸಿನಲ್ಲಿ ಮಾತಾಡಿ, “ನೀನು ಸಾಯುವೆ. ನೀನು ತೆಗೆದುಕೊಂಡಿರುವ ಆ ಸ್ತ್ರೀಗೆ ಮದುವೆಯಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೆ ಆ ರಾತ್ರಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು, “ನೀನು ಆ ಸ್ತ್ರೀಯನ್ನು ಸೇರಿಸಿಕೊಂಡಿರುವುದರಿಂದ ಮರಣಕ್ಕೆ ಯೋಗ್ಯನಾಗಿದ್ದಿ; ಆಕೆ ಮತ್ತೊಬ್ಬ ಪುರುಷನ ಹೆಂಡತಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದರೆ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಆ ಮಹಿಳೆಯನ್ನು ಸೇರಿಸಿಕೊಂಡ ಕಾರಣ ಸಾಯತಕ್ಕವನು, ಆಕೆಗೆ ಗಂಡನಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದರೆ ರಾತ್ರಿಯಲ್ಲಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು - ನೀನು ಆ ಸ್ತ್ರೀಯನ್ನು ಸೇರಿಸಿಕೊಂಡದರಿಂದ ಸಾಯತಕ್ಕವನಾಗಿದ್ದಿ; ಆಕೆ ಮುತ್ತೈದೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ದೇವರು ಅಬೀಮೆಲೆಕನಿಗೆ ರಾತ್ರಿಯ ಕನಸಿನಲ್ಲಿ ಬಂದು, “ನೀನು ಆ ಸ್ರೀಯನ್ನು ತೆಗೆದುಕೊಂಡ ಕಾರಣ ಸಾಯತಕ್ಕವನಾಗಿದ್ದಿ, ಏಕೆಂದರೆ ಆಕೆಯು ಆ ಮನುಷ್ಯನ ಹೆಂಡತಿ,” ಎಂದು ಅವನಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 20:3
22 ತಿಳಿವುಗಳ ಹೋಲಿಕೆ  

ಪಿಲಾತನು ನ್ಯಾಯಸ್ಥಾನದಲ್ಲಿ ಕುಳಿತುಕೊಂಡಿದ್ದಾಗ ಅವನ ಪತ್ನಿಯು ಒಂದು ಸಂದೇಶವನ್ನು ಕಳುಹಿಸಿದ್ದಳು. “ಆ ಮನುಷ್ಯನಿಗೆ ಏನನ್ನೂ ಮಾಡಬೇಡ. ಅವನು ತಪ್ಪಿತಸ್ಥನಲ್ಲ. ಆತನ ನಿಮಿತ್ತ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ” ಎಂಬುದೇ ಆ ಸಂದೇಶ.


ಆದ್ದರಿಂದ ಅಬ್ರಹಾಮನಿಗೆ ಅವನ ಹೆಂಡತಿಯನ್ನು ಒಪ್ಪಿಸಿಬಿಡು. ಅಬ್ರಹಾಮನು ಪ್ರವಾದಿಯಾಗಿರುವುದರಿಂದ ನಿನಗೋಸ್ಕರ ಪ್ರಾರ್ಥಿಸುವನು, ಆಗ ನೀನು ಬದುಕಿಕೊಳ್ಳುವೆ. ನೀನು ಸಾರಳನ್ನು ಅಬ್ರಹಾಮನಿಗೆ ಹಿಂತಿರುಗಿಸದಿದ್ದರೆ, ನೀನೂ ನಿನ್ನ ಇಡೀ ಕುಟುಂಬದವರೂ ಸಾಯುವಿರೆಂದು ನಾನು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.


ಆದರೆ ಅವರಿಗೆ ಯಾರಿಂದಲೂ ಅನ್ಯಾಯವಾಗದಂತೆ ನೋಡಿಕೊಂಡನು. ಅವರನ್ನು ನೋಯಿಸಕೂಡದೆಂದು ಆತನು ರಾಜರುಗಳಿಗೆ ಎಚ್ಚರಿಕೆ ನೀಡಿದನು.


ಜನರು ಗಾಢನಿದ್ರೆಯಲ್ಲಿರುವಾಗ ದೇವರು ಕನಸಿನ ಮೂಲಕವಾಗಲಿ ದರ್ಶನದ ಮೂಲಕವಾಗಲಿ ಮಾತಾಡಬಹುದು.


ಯೋಸೇಫನು ಹೀಗೆ ಆಲೋಚಿಸಿಕೊಂಡನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಆ ದೂತನು, “ದಾವೀದನ ಮಗನಾದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯಾಗಿ ಸ್ವೀಕರಿಸಲು ಭಯಪಡಬೇಡ. ಆಕೆ ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಾಳೆ.


ಯಾಕೋಬನಿಗೆ ಒಂದು ಕನಸಾಯಿತು. ಆ ಕನಸಿನಲ್ಲಿ ಒಂದು ಏಣಿ ನೆಲದ ಮೇಲೆ ನಿಂತಿತ್ತು, ಅದರ ತುದಿ ಆಕಾಶವನ್ನು ಮುಟ್ಟಿತ್ತು. ದೇವದೂತರು ಅದರಲ್ಲಿ ಮೇಲೆರುತ್ತಾ ಕೆಳಗಿಳಿಯುತ್ತಾ ಇರುವುದನ್ನು ಯಾಕೋಬನು ಕಂಡನು.


ಯೋನನು ನಗರದ ಮಧ್ಯಕ್ಕೆ ಹೋಗಿ ಜನರಿಗೆ ಸಾರಲಿಕ್ಕೆ ಪ್ರಾರಂಭಿಸಿದನು. “ನಲವತ್ತು ದಿನಗಳು ಕಳೆದ ಬಳಿಕ ನಿನೆವೆಯು ನಾಶವಾಗುವದು” ಎಂದು ಜನರಿಗೆ ಸಾರಿದನು.


ಆ ಇಬ್ಬರು, “ನಾವು ಕಳೆದ ರಾತ್ರಿ ಕನಸನ್ನು ಕಂಡೆವು; ಆದರೆ ನಾವು ಕಂಡ ಕನಸು ನಮಗೆ ಅರ್ಥವಾಗುತ್ತಿಲ್ಲ. ನಮಗೆ ಕನಸುಗಳ ಅರ್ಥವನ್ನು ತಿಳಿಸುವವರಾಗಲಿ ವಿವರಿಸುವವರಾಗಲಿ ಯಾರೂ ಇಲ್ಲ” ಎಂದು ಹೇಳಿದರು. ಯೋಸೇಫನು ಅವರಿಗೆ, “ದೇವರೊಬ್ಬನು ಮಾತ್ರ ಕನಸುಗಳನ್ನು ಅರ್ಥಮಾಡಿಕೊಳ್ಳಬಲ್ಲನು ಮತ್ತು ಕನಸುಗಳ ಅರ್ಥವನ್ನು ಹೇಳಬಲ್ಲನು. ಆದ್ದರಿಂದ ದಯಮಾಡಿ ನಿಮ್ಮ ಕನಸುಗಳನ್ನು ನನಗೆ ತಿಳಿಸಿರಿ” ಎಂದು ಹೇಳಿದನು.


ಆಮೇಲೆ ಯೋಸೇಫನಿಗೆ ಮತ್ತೊಂದು ಕನಸಾಯಿತು. ಯೋಸೇಫನು ಈ ಕನಸಿನ ಬಗ್ಗೆಯೂ ತನ್ನ ಅಣ್ಣಂದಿರಿಗೆ ತಿಳಿಸಿದನು. ಯೋಸೇಫನು ಅವರಿಗೆ, “ನನಗೆ ಮತ್ತೊಂದು ಕನಸಾಯಿತು. ಸೂರ್ಯ, ಚಂದ್ರ ಮತ್ತು ಹನ್ನೊಂದು ನಕ್ಷತ್ರಗಳು ನನಗೆ ಅಡ್ಡಬೀಳುವುದನ್ನು ಕಂಡೆನು” ಎಂದು ಹೇಳಿದನು.


ಒಂದು ದಿನ ಯೋಸೇಫನು ವಿಶೇಷವಾದ ಕನಸನ್ನು ಕಂಡನು. ಯೋಸೇಫನು ಈ ಕನಸನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಮತ್ತಷ್ಟು ದ್ವೇಷಿಸತೊಡಗಿದರು.


ಆ ರಾತ್ರಿ ದೇವರು ಲಾಬಾನನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎಚ್ಚರಿಕೆಯಾಗಿರು; ನೀನು ಯಾಕೋಬನಿಗೆ ಹೇಳುವ ಪ್ರತಿಯೊಂದು ಮಾತಿನ ಬಗ್ಗೆ ಎಚ್ಚರಿಕೆಯಾಗಿರು” ಎಂದು ಹೇಳಿದನು.


ಫರೋಹನು ಅಬ್ರಾಮನ ಹೆಂಡತಿಯನ್ನು ತೆಗೆದುಕೊಂಡದ್ದರಿಂದ ಯೆಹೋವನು ಫರೋಹನಿಗೂ ಅವನ ಮನೆಯಲ್ಲಿದ್ದವರಿಗೂ ಭಯಂಕರವಾದ ರೋಗಗಳನ್ನು ಬರಮಾಡಿದನು.


ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ನನಗೆ ತುಂಬ ಕೆಟ್ಟದ್ದನ್ನು ಮಾಡಿರುವೆ; ಸಾರಯಳು ನಿನಗೆ ಹೆಂಡತಿಯಾಗಬೇಕೆಂದು ಯಾಕೆ ತಿಳಿಸಲಿಲ್ಲ?


ದೇವರು ಬಿಳಾಮನ ಬಳಿಗೆ ಬಂದು, “ನಿನ್ನ ಬಳಿಯಲ್ಲಿರುವ ಈ ಮನುಷ್ಯರು ಯಾರು?” ಎಂದು ಕೇಳಿದನು.


ಆದರೆ ಅವರಿಗೆ ಕೇಡುಮಾಡಲು ಯೆಹೋವನು ಯಾರಿಗೂ ಅವಕಾಶಕೊಡಲಿಲ್ಲ. ಅವರನ್ನು ಬಾಧಿಸದಂತೆ ಆತನು ಅರಸರುಗಳಿಗೆ ಎಚ್ಚರಿಕೆ ಕೊಟ್ಟನು.


ಒಂದು ರಾತ್ರಿ ಆ ಇಬ್ಬರು ಕೈದಿಗಳಿಗೆ ಅಂದರೆ ಭಕ್ಷ್ಯಗಾರನಿಗೂ ಪಾನದಾಯಕನಿಗೂ ಒಂದೊಂದು ಕನಸು ಬಿತ್ತು. ಮತ್ತು ಅವರಿಬ್ಬರ ಕನಸುಗಳು ತಮ್ಮದೇ ಆದ ಅರ್ಥವನ್ನು ಹೊಂದಿದ್ದವು.


ಆ ರಾತ್ರಿ ದೇವರು ಕನಸಿನಲ್ಲಿ ಅವನೊಂದಿಗೆ ಮಾತನಾಡಿದನು. ದೇವರು ಅವನನ್ನು, “ಯಾಕೋಬನೇ, ಯಾಕೋಬನೇ” ಎಂದು ಕರೆದನು. ಅದಕ್ಕೆ ಇಸ್ರೇಲನು, “ಇಗೋ, ಇದ್ದೇನೆ” ಎಂದು ಉತ್ತರಕೊಟ್ಟನು.


ಜನರು ತಪ್ಪು ಮಾಡಬಾರದೆಂದೂ ಅಹಂಕಾರಿಗಳಾಗಿರಬಾರದೆಂದೂ ದೇವರು ಅವರಿಗೆ ಎಚ್ಚರಿಕೆ ಕೊಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು