Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 20:4 - ಪರಿಶುದ್ದ ಬೈಬಲ್‌

4 ಅಬೀಮೆಲೆಕನು ಇನ್ನೂ ಸಾರಳೊಡನೆ ಮಲಗಿಕೊಂಡಿರಲಿಲ್ಲ. ಆದ್ದರಿಂದ ಅಬೀಮೆಲೆಕನು, “ಸ್ವಾಮಿ, ನಾನು ತಪ್ಪಿತಸ್ಥನಲ್ಲ. ಒಬ್ಬ ನಿರಪರಾಧಿಯನ್ನು ನೀನು ಕೊಲ್ಲುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅಬೀಮೆಲೆಕನು ಆಕೆಯನ್ನು ಸಂಗಮಿಸಿರಲಿಲ್ಲ. ಅವನು, “ಕರ್ತನೇ, ನೀತಿವಂತರಾದ ಜನರನ್ನೂ ನಾಶಮಾಡುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಬೀಮೆಲೆಕನು ಆಕೆಯನ್ನು ಅಲ್ಲಿಯವರೆಗೂ ಕೂಡಿರಲಿಲ್ಲ. ಎಂದೇ ಅವನು, “ಸ್ವಾಮೀ ನಿರಪರಾಧಿಯಾದ ಪ್ರಜೆಯನ್ನು ನೀವು ನಾಶಮಾಡುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅಬೀಮೆಲೆಕನು ಆಕೆಯನ್ನು ಕೂಡಲಿಲ್ಲವಾದ್ದರಿಂದ ಅವನು - ಸ್ವಾಮೀ, ನಿರಪರಾಧಿಯಾದ ಜನವನ್ನೂ ನಾಶಮಾಡುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಅಬೀಮೆಲೆಕನು ಆಕೆಯ ಸಮೀಪಕ್ಕೆ ಬಂದಿರಲಿಲ್ಲ. ಆದ್ದರಿಂದ ಅವನು, “ಪ್ರಭುವೇ, ನಿರಪರಾಧಿಯಾದ ಪ್ರಜೆಯನ್ನು ನೀವು ನಾಶಮಾಡುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 20:4
7 ತಿಳಿವುಗಳ ಹೋಲಿಕೆ  

ದಾವೀದನು ದೇವರಿಗೆ, “ಪಾಪಮಾಡಿದವನು ನಾನು. ಜನಗಣತಿಯನ್ನು ಮಾಡಲು ಆಜ್ಞಾಪಿಸಿದವನು ನಾನೇ. ನಾನು ತಪ್ಪು ಮಾಡಿದೆ! ಆದರೆ ಇಸ್ರೇಲರು ಏನೂ ತಪ್ಪು ಮಾಡಲಿಲ್ಲ. ದೇವರಾದ ಯೆಹೋವನೇ, ನನ್ನನ್ನೂ ನನ್ನ ಪರಿವಾರದವರನ್ನೂ ಶಿಕ್ಷಿಸು. ನಿನ್ನ ಜನರನ್ನು ಸಾಯಿಸುವ ವ್ಯಾಧಿಯನ್ನು ನಿಲ್ಲಿಸು” ಎಂದು ಬೇಡಿಕೊಂಡನು.


ದುಷ್ಟರಾದ ನೀವು ಇಂದು ಒಬ್ಬ ನೀತಿವಂತನನ್ನು ಅವನ ಸ್ವಂತ ಮನೆಯಲ್ಲಿ ಅವನ ಸ್ವಂತ ಹಾಸಿಗೆಯ ಮೇಲೆಯೇ ಕೊಂದಿರುವುದರಿಂದ ನಿಮ್ಮನ್ನೂ ನಾನು ಕೊಂದು ನಿರ್ಮೂಲ ಮಾಡಬೇಕು” ಎಂದನು.


ಆಗ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ, “ಹೌದು, ನೀನು ನಿರಪರಾಧಿಯೆಂದು ನನಗೆ ಗೊತ್ತಿದೆ. ನೀನು ಮಾಡಲಿದ್ದ ತಪ್ಪು ನಿನಗೆ ತಿಳಿದಿರಲಿಲ್ಲವೆಂದೂ ನನಗೆ ಗೊತ್ತಿದೆ. ಆದ್ದರಿಂದಲೇ ನಾನು ನಿನ್ನನ್ನು ಕಾಪಾಡಿದೆ. ನನಗೆ ವಿರೋಧವಾಗಿ ಪಾಪಮಾಡಲು ನಾನು ನಿನಗೆ ಅವಕಾಶ ಕೊಡಲಿಲ್ಲ.


ಆಗ ಯೆಹೋವನು ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಮೇಲೆ ಆಕಾಶದಿಂದ ಉರಿಯುವ ಗಂಧಕದ ಮಳೆಯನ್ನು ಸುರಿಸಿದನು.


‘ಈಕೆ ನನಗೆ ತಂಗಿಯಾಗಬೇಕು’ ಎಂದು ಅಬ್ರಹಾಮನೇ ಹೇಳಿದನು. ಅಲ್ಲದೆ ಈಕೆಯೂ ‘ಅವನು ನನ್ನ ಸಹೋದರ’ ಎಂದು ಹೇಳಿದಳು. ನಾನು ನಿರಪರಾಧಿ. ನಾನು ಮಾಡಲಿದ್ದ ತಪ್ಪು ನನಗೆ ತಿಳಿದಿರಲಿಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು