Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 20:7 - ಪರಿಶುದ್ದ ಬೈಬಲ್‌

7 ಆದ್ದರಿಂದ ಅಬ್ರಹಾಮನಿಗೆ ಅವನ ಹೆಂಡತಿಯನ್ನು ಒಪ್ಪಿಸಿಬಿಡು. ಅಬ್ರಹಾಮನು ಪ್ರವಾದಿಯಾಗಿರುವುದರಿಂದ ನಿನಗೋಸ್ಕರ ಪ್ರಾರ್ಥಿಸುವನು, ಆಗ ನೀನು ಬದುಕಿಕೊಳ್ಳುವೆ. ನೀನು ಸಾರಳನ್ನು ಅಬ್ರಹಾಮನಿಗೆ ಹಿಂತಿರುಗಿಸದಿದ್ದರೆ, ನೀನೂ ನಿನ್ನ ಇಡೀ ಕುಟುಂಬದವರೂ ಸಾಯುವಿರೆಂದು ನಾನು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ಅವನಿಗೆ ಒಪ್ಪಿಸಿಬಿಡು. ಅವನು ಪ್ರವಾದಿ, ನಿನಗೋಸ್ಕರ ಅವನು ನನಗೆ ವಿಜ್ಞಾಪಿಸುವನು ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸದಿದ್ದರೆ ನೀನೂ ನಿನ್ನವರೆಲ್ಲರೂ ಮರಣಹೊಂದುವಿರಿ ಇದು ಖಂಡಿತ ಎಂದು ತಿಳಿದುಕೋ” ಎಂದು ಕನಸಿನಲ್ಲಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈಗ ಆ ಮನುಷ್ಯನ ಹೆಂಡತಿಯನ್ನು ಮರಳಿ ಅವನಿಗೆ ಒಪ್ಪಿಸಿಬಿಡು. ಅವನೊಬ್ಬ ಪ್ರವಾದಿ. ನಿನ್ನ ಪರವಾಗಿ ನನ್ನನ್ನು ಪ್ರಾರ್ಥಿಸುವನು, ನೀನು ಬದುಕುವೆ. ಆಕೆಯನ್ನು ಒಪ್ಪಿಸಲು ನಿರಾಕರಿಸಿದೆಯಾದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೊ,” ಎಂದು ಕನಸಿನಲ್ಲಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ತಿರಿಗಿ ಅವನಿಗೆ ಒಪ್ಪಿಸಿ ಬಿಡು. ಅವನು ಪ್ರವಾದಿ, ನಿನಗೋಸ್ಕರ ನನಗೆ ಪ್ರಾರ್ಥಿಸುವನು, ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸುವದಿಲ್ಲವೆಂದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೋ ಎಂದು ಕನಸಿನಲ್ಲಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸಿಬಿಡು. ಏಕೆಂದರೆ ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವಂತೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ, ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 20:7
42 ತಿಳಿವುಗಳ ಹೋಲಿಕೆ  

ಆದ್ದರಿಂದ, ಈಗ ನೀವು (ಮೂವರು) ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಹೋಗಿ ಅವುಗಳನ್ನು ನಿಮಗೋಸ್ಕರ ದೋಷಪರಿಹಾರಕಯಜ್ಞ ಮಾಡಿರಿ. ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥಿಸುವನು. ಆಗ ನಾನು ಅವನ ಪ್ರಾರ್ಥನೆಗೆ ಖಂಡಿತವಾಗಿ ಉತ್ತರಿಸುವೆನು; ನಿಮ್ಮ ಮೂರ್ಖತನಕ್ಕೆ ಬರಬೇಕಾಗಿದ್ದ ದಂಡನೆಯನ್ನು ಮನ್ನಿಸುವೆನು. ನೀವು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ; ಆದರೆ ನನ್ನ ಸೇವಕನಾದ ಯೋಬನು ಹೇಳಿದವುಗಳು ಸತ್ಯವಾಗಿವೆ.” ಎಂದನು.


ಸಮುವೇಲನು ಅವರಿಗೆ, “ಇಸ್ರೇಲರೆಲ್ಲರೂ ಮಿಚ್ಪೆಯಲ್ಲಿ ಒಟ್ಟುಗೂಡಬೇಕು. ನಾನು ನಿಮಗಾಗಿ ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದನು.


ಮದುವೆಯನ್ನು ಜನರೆಲ್ಲರೂ ಗೌರವಿಸಬೇಕು. ಗಂಡ ಹೆಂಡತಿಯರ ಸಂಬಂಧ ಪರಿಶುದ್ಧವಾಗಿರಬೇಕು. ಲೈಂಗಿಕ ಪಾಪಗಳನ್ನು ಮಾಡುವವರು ಮತ್ತು ವ್ಯಭಿಚಾರವನ್ನು ಮಾಡುವವರು ದೇವರ ತೀರ್ಪಿಗೆ ಒಳಗಾಗಿದ್ದಾರೆ.


ಜನರನ್ನು ಕೊಂದ ದೂತನನ್ನು ದಾವೀದನು ನೋಡಿ ಯೆಹೋವನೊಂದಿಗೆ ಮಾತನಾಡಿದನು. ದಾವೀದನು ಯೆಹೋವನಿಗೆ, “ನಾನು ಪಾಪ ಮಾಡಿದೆನು. ನಾನು ತಪ್ಪು ಮಾಡಿದೆನು. ಆದರೆ ಈ ಜನರು ಕೇವಲ ಕುರಿಗಳಂತೆ ನಿರಪರಾಧಿಗಳು. ಅವರು ಯಾವ ತಪ್ಪನ್ನೂ ಮಾಡಲಿಲ್ಲ. ದಯಮಾಡಿ ನಿನ್ನ ದಂಡನೆಯು ನನಗೆ ಮತ್ತು ನನ್ನ ತಂದೆಯ ಕುಲದ ವಿರುದ್ಧವಾಗಿರಲಿ” ಎಂದು ಹೇಳಿದನು.


ಯೆಹೋವನು ಆ ರಾಜರಿಗೆ, “ನಾನು ಆರಿಸಿಕೊಂಡ ಜನಾಂಗಕ್ಕೆ ಉಪದ್ರವ ಕೊಡಬೇಡಿ; ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿ” ಎಂದು ಹೇಳಿದನು.


ನಾಮಾನನು ಕೋಪಗೊಂಡು, “ಎಲೀಷನು ಕೊನೆಯ ಪಕ್ಷ ಬಂದು, ನನ್ನೆದುರು ನಿಂತು, ತನ್ನ ದೇವರಾದ ಯೆಹೋವನ ಹೆಸರಿನಲ್ಲಿ ನನ್ನನ್ನು ಕರೆಯುತ್ತಿದ್ದನೆಂದು ನಾನು ಭಾವಿಸಿದ್ದೆನು. ಅವನು ತನ್ನ ಕೈಗಳನ್ನು ನನ್ನ ದೇಹದ ಮೇಲೆ ಸವರಿ, ನನ್ನ ಕುಷ್ಠರೋಗವನ್ನು ಗುಣಪಡಿಸುವನೆಂದು ನಾನು ಭಾವಿಸಿದ್ದೆನು.


ಕ್ರಿಸ್ತನಲ್ಲಿ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಪಾಪ ಮಾಡುವುದನ್ನು (ನಿತ್ಯವಾದ ಮರಣಕ್ಕೆ ನಡೆಸುವ ಪಾಪವನ್ನಲ್ಲ) ಕಂಡ ವ್ಯಕ್ತಿಯು ತನ್ನ ಆ ಸಹೋದರನಿಗಾಗಿ ಅಥವಾ ಆ ಸಹೋದರಿಗಾಗಿ ಪ್ರಾರ್ಥಿಸಬೇಕು. ಆಗ ದೇವರು ಆ ಸಹೋದರನಿಗೆ ಅಥವಾ ಆ ಸಹೋದರಿಗೆ ಜೀವವನ್ನು ದಯಪಾಲಿಸುತ್ತಾನೆ. ಶಾಶ್ವತವಾದ ಮರಣದ ಕಡೆಗೆ ನಡೆಸದಿರುವ ಪಾಪವನ್ನು ಮಾಡುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಮರಣದ ಕಡೆಗೆ ನಡೆಸುವ ಪಾಪವಿದೆ. ಈ ಪಾಪ ಮಾಡುವವರಿಗಾಗಿ ಪ್ರಾರ್ಥಿಸಬೇಕೆಂದು ನಾನು ಹೇಳುತ್ತಿಲ್ಲ.


ಪೂರ್ವಕಾಲದಲ್ಲಿ ದೇವರು ಪ್ರವಾದಿಗಳ ಮೂಲಕ ನಮ್ಮ ಜನರೊಂದಿಗೆ ಹಲವಾರು ವಿಧದಲ್ಲಿ ಅನೇಕ ಸಲ ಮಾತನಾಡಿದನು.


ಪರಭಾಷೆಯಲ್ಲಿ ಮಾತಾಡುವ ವ್ಯಕ್ತಿಯು ತನಗೆ ಮಾತ್ರ ಸಹಾಯ ಮಾಡಿಕೊಳ್ಳುವನು. ಆದರೆ ಪ್ರವಾದಿಸುವವನು ಇಡೀ ಸಭೆಗೆ ಸಹಾಯ ಮಾಡುತ್ತಾನೆ.


‘ಈ ಕೆಟ್ಟ ಮನುಷ್ಯನು ಸಾಯುವನು’ ಎಂದು ನಾನು ಹೇಳಿದರೆ, ನೀನು ಹೋಗಿ ಆ ಮನುಷ್ಯನನ್ನು ಎಚ್ಚರಿಸಬೇಕು. ಆದರೆ ನೀನು ಅವನನ್ನು ಎಚ್ಚರಿಸದೆ ಹೋದರೆ, ಅವನ ಜೀವಿತವನ್ನು ಬದಲಾಯಿಸಿಕೊಳ್ಳಲು ಹೇಳದೆ ಹೋದರೆ, ಪಾಪಮಾಡಬೇಡ ಎಂದು ಹೇಳದೆ ಹೋದರೆ, ಆ ದುಷ್ಟನು ಸಾಯುವನು. ಯಾಕೆಂದರೆ, ಅವನು ಪಾಪಮಾಡಿದನು. ಆದರೆ ಅವನ ಮರಣಕ್ಕೆ ನಿನ್ನನ್ನು ಕಾರಣನನ್ನಾಗಿ ಮಾಡುತ್ತೇನೆ.


ನಾನು ದುಷ್ಟನಿಗೆ, ‘ನೀನು ಸಾಯುವೆ’ ಎಂದು ಹೇಳುವಾಗ, ನೀನು ಅವನನ್ನು ಎಚ್ಚರಿಸಬೇಕು. ಅವನು ತನ್ನ ಪ್ರಾಣವನ್ನು ರಕ್ಷಿಸಿಕೊಳ್ಳುವದಕ್ಕಾಗಿ ತನ್ನ ಜೀವಿತವನ್ನು ಮಾರ್ಪಡಿಸಿಕೊಂಡು ದುಷ್ಕೃತ್ಯ ನಿಲ್ಲಿಸಬೇಕೆಂದು ನೀನು ಅವನಿಗೆ ಹೇಳಬೇಕು. ನೀನು ಅವನನ್ನು ಎಚ್ಚರಿಸದಿದ್ದರೆ ಅವನು ತನ್ನ ಪಾಪದ ದೆಸೆಯಿಂದ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೇ ಹೊಣೆಗಾರನನ್ನಾಗಿ ಮಾಡುತ್ತೇನೆ.


ಆ ಜನರು ಯೆಹೋವನ ಸಂದೇಶವನ್ನು ತಂದ ಪ್ರವಾದಿಗಳಾಗಿದ್ದರೆ, ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಯೆಹೋವನ ಆಲಯದಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ರಾಜನ ಅರಮನೆಯಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಜೆರುಸಲೇಮಿನಲ್ಲಿರುವ ಪದಾರ್ಥಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಆ ವಸ್ತುಗಳನ್ನೆಲ್ಲ ಬಾಬಿಲೋನಿಗೆ ತೆಗೆದುಕೊಂಡು ಹೋಗಬಾರದೆಂದು ಅವರು ಪ್ರಾರ್ಥನೆ ಸಲ್ಲಿಸಲಿ.


ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.


ಆಗ ಯೆಹೋವನು, “ಯೆರೆಮೀಯನೇ, ಯೆಹೂದದ ಜನರ ಒಳಿತಿಗಾಗಿ ಪ್ರಾರ್ಥಿಸಬೇಡ.


ಯೆಹೋವನು ತನಗೆ ವಿಧೇಯರಾಗಿರುವವರಿಗೆ ಆಪ್ತಮಿತ್ರನಂತಿರುವನು. ಆತನು ಅವರಿಗೆ ತನ್ನ ಒಡಂಬಡಿಕೆಯನ್ನು ಉಪದೇಶಿಸುವನು.


ದೇವರಲ್ಲಿ ಸಾಮಾನ್ಯರು ಮತ್ತು ಪ್ರಮುಖರು ಎಂದಾಗಲಿ ಬಡವರು ಮತ್ತು ಶ್ರೀಮಂತರು ಎಂದಾಗಲಿ ಭೇದಭಾವವಿಲ್ಲ. ಯಾಕೆಂದರೆ ಎಲ್ಲರನ್ನೂ ಸೃಷ್ಟಿಮಾಡಿದವನು ದೇವರೇ.


ನಂತರ ರಾಜನಾದ ಯಾರೊಬ್ಬಾಮನು ದೇವಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನಲ್ಲಿ ನನಗಾಗಿ ಪ್ರಾರ್ಥಿಸು. ನನ್ನ ಕೈಯನ್ನು ಗುಣಪಡಿಸುವಂತೆ ಯೆಹೋವನಲ್ಲಿ ಪ್ರಾರ್ಥಿಸು” ಎಂದನು. ದೇವಮನುಷ್ಯನು ಯೆಹೋವನಿಗೆ ಪ್ರಾರ್ಥಿಸಿದನು. ಆಗ ರಾಜನ ಕೈ ಗುಣವಾಯಿತು. ಅದು ಮತ್ತೆ ಮೊದಲಿನಂತೆ ಆಯಿತು.


ನಾನು ನಿಮಗಾಗಿ ಪ್ರಾರ್ಥಿಸದಿದ್ದರೆ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವನಾಗುತ್ತೇನೆ. ನಾನು ನಿಮಗೆ ಒಳ್ಳೆಯದೂ ಯೋಗ್ಯವೂ ಆಗಿರುವ ಮಾರ್ಗವನ್ನು ಉಪದೇಶಿಸುತ್ತೇನೆ.


ಜನರೆಲ್ಲಾ ಸಮುವೇಲನಿಗೆ, “ನಿನ್ನ ಸೇವಕರಾದ ನಮಗಾಗಿ, ನಿನ್ನ ದೇವರಾದ ಯೆಹೋವನಲ್ಲಿ ಪ್ರಾರ್ಥಿಸು. ನಮ್ಮನ್ನು ಸಾಯಲು ಬಿಡಬೇಡ. ನಾವು ಅನೇಕ ಸಲ ಪಾಪಗಳನ್ನು ಮಾಡಿದ್ದೇವೆ. ಈಗ ನಾವು ರಾಜನನ್ನು ಕೇಳಿಕೊಂಡಿದ್ದು ನಮ್ಮ ಪಾಪಗಳೊಂದಿಗೆ ಮತ್ತೊಂದು ಪಾಪವನ್ನು ಮಾಡಿದಂತಾಯಿತು” ಎಂದು ಹೇಳಿದರು.


ಇಸ್ರೇಲರು ಸಮುವೇಲನಿಗೆ, “ನಮ್ಮ ದೇವರಾದ ಯೆಹೋವನಲ್ಲಿ ನಮಗಾಗಿ ಪ್ರಾರ್ಥಿಸು! ನಿಲ್ಲಿಸಬೇಡ! ಫಿಲಿಷ್ಟಿಯರಿಂದ ನಮ್ಮನ್ನು ರಕ್ಷಿಸಲು ಯೆಹೋವನಲ್ಲಿ ಬೇಡಿಕೊ!” ಎಂದು ಹೇಳಿದರು.


ಬಳಿಕ ಯಾಜಕನು ಯೆಹೋವನ ಸನ್ನಿಧಿಗೆ ಹೋಗಿ ಅವನನ್ನು ಶುದ್ಧಿಮಾಡುವನು. ಆಗ ದೇವರು ಅವನನ್ನು ಕ್ಷಮಿಸುವನು.”


ಅವನು ತಾನು ಕದ್ದದ್ದನ್ನಾಗಲಿ ಮೋಸದಿಂದ ತೆಗೆದುಕೊಂಡದ್ದನ್ನಾಗಲಿ ಅಡವು ಇಟ್ಟುಕೊಂಡದ್ದನ್ನಾಗಲಿ ಕಂಡುಕೊಂಡ ಅಥವಾ ಕಳೆದುಹೋದ ವಸ್ತುವನ್ನಾಗಲಿ


ಆದರೆ ಮೋಶೆಯ ಮಾವನು ಅವನಿಗೆ, “ನೀನು ಹೀಗೆ ಮಾಡುತ್ತಿರುವುದು ಒಳ್ಳೆಯದಲ್ಲ.


ಯೆಹೋವನು ಮೋಶೆಗೆ, “ನಾನು ನಿನ್ನನ್ನು ಫರೋಹನಿಗೆ ಮಹಾರಾಜನಂತೆ ಮಾಡಿರುವೆನು; ಆರೋನನು ಅಧಿಕೃತ ಮಾತುಗಾರನಾಗಿರುವನು.


ಆರೋನನು ಜನರೊಂದಿಗೂ ನಿನ್ನ ಪರವಾಗಿಯೂ ಮಾತಾಡುವನು. ನೀನು ಮಹಾರಾಜನಂತೆ ಇರುವೆ; ಅವನು ನಿನಗೆ ಅಧಿಕೃತ ಮಾತುಗಾರನಂತೆ ಇರುವನು.


ಫರೋಹನು ಅಬ್ರಾಮನ ಹೆಂಡತಿಯನ್ನು ತೆಗೆದುಕೊಂಡದ್ದರಿಂದ ಯೆಹೋವನು ಫರೋಹನಿಗೂ ಅವನ ಮನೆಯಲ್ಲಿದ್ದವರಿಗೂ ಭಯಂಕರವಾದ ರೋಗಗಳನ್ನು ಬರಮಾಡಿದನು.


ಈಜಿಪ್ಟಿನ ಕೆಲವು ನಾಯಕರು ಸಹ ಆಕೆಯನ್ನು ಕಂಡರು. ಅವರು ಫರೋಹನ ಬಳಿಗೆ ಹೋಗಿ ಆಕೆಯ ಅಮೋಘ ಸೌಂದರ್ಯವನ್ನು ತಿಳಿಸಿದರು. ಬಳಿಕ ಆ ನಾಯಕರು ಸಾರಯಳನ್ನು ಫರೋಹನ ಬಳಿಗೆ ಕರೆದೊಯ್ದರು.


ಆದರೆ ಒಳ್ಳೆಯದು ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಕೊಡುವ ಮರದ ಹಣ್ಣನ್ನು ಮಾತ್ರ ನೀನು ತಿನ್ನಕೂಡದು. ಒಂದುವೇಳೆ ಆ ಮರದ ಹಣ್ಣನ್ನು ತಿಂದರೆ ನೀನು ಸಾಯುವೆ!” ಎಂದು ಆಜ್ಞಾಪಿಸಿದನು.


ಸಿಮೋನನು, “ನೀವಿಬ್ಬರೂ ನನಗೋಸ್ಕರ ಪ್ರಭುವಿನಲ್ಲಿ ಪ್ರಾರ್ಥಿಸಿ. ನೀವು ಹೇಳಿದ ಸಂಗತಿಗಳು ನನಗಾಗದಂತೆ ಪ್ರಾರ್ಥಿಸಿ!” ಎಂದು ಕೇಳಿಕೊಂಡನು.


ಆದರೆ ಅಂದು ರಾತ್ರಿ ದೇವರು ಅಬೀಮೆಲೆಕನೊಡನೆ ಕನಸಿನಲ್ಲಿ ಮಾತಾಡಿ, “ನೀನು ಸಾಯುವೆ. ನೀನು ತೆಗೆದುಕೊಂಡಿರುವ ಆ ಸ್ತ್ರೀಗೆ ಮದುವೆಯಾಗಿದೆ” ಎಂದು ಹೇಳಿದನು.


ಆದ್ದರಿಂದ ಮರುದಿನ ಮುಂಜಾನೆ, ಅಬೀಮೆಲೆಕನು ತನ್ನ ಸೇವಕರನ್ನೆಲ್ಲ ಕರೆಸಿ ತನ್ನ ಕನಸನ್ನು ತಿಳಿಸಿದನು. ಅವರಿಗೆಲ್ಲಾ ತುಂಬ ಭಯವಾಯಿತು.


“ಸ್ವಾಮೀ, ನೀನು ನಮ್ಮ ಮಹಾನಾಯಕರುಗಳಲ್ಲಿ ಒಬ್ಬನು. ತೀರಿಕೊಂಡ ನಿನ್ನ ಹೆಂಡತಿಯ ಸಮಾಧಿಗಾಗಿ ನಮ್ಮಲ್ಲಿರುವ ಸ್ಮಶಾನಗಳಲ್ಲಿ ಅತ್ಯುತ್ತಮವಾದ ಸ್ಥಳವನ್ನು ನೀನು ತೆಗೆದುಕೊಳ್ಳಬಹುದು. ನಿನ್ನ ಹೆಂಡತಿಯನ್ನು ಸಮಾಧಿಮಾಡಲು ನಮ್ಮಲ್ಲಿ ಯಾರೂ ಅಡ್ಡಿ ಮಾಡುವುದಿಲ್ಲ” ಎಂದು ಉತ್ತರಕೊಟ್ಟರು.


ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್ ಮತ್ತು ಜೆಬುಲೂನಿನಿಂದ ಬಂದಿದ್ದ ಎಷ್ಟೋ ಮಂದಿ ಪಸ್ಕಹಬ್ಬಕ್ಕಾಗಿ ತಮ್ಮನ್ನು ಸಿದ್ಧಮಾಡಿಕೊಂಡಿರಲಿಲ್ಲ. ಅವರು ಪಸ್ಕದ ಕುರಿಮರಿಯನ್ನು ಯೋಗ್ಯವಾದ ರೀತಿಯಲ್ಲಿ ತಿನ್ನಲಿಲ್ಲ. ಆದರೆ ಹಿಜ್ಕೀಯನು ಅಂಥವರಿಗೋಸ್ಕರವಾಗಿ, “ದೇವರಾದ ಯೆಹೋವನೇ, ನೀನು ಒಳ್ಳೆಯವನಾಗಿರುವೆ. ಇವರು ಯೋಗ್ಯವಾದ ರೀತಿಯಲ್ಲಿ ನಿನ್ನನ್ನು ಆರಾಧಿಸಲು ಬಂದಿದ್ದಾರೆ. ಆದರೆ ಧರ್ಮಶಾಸ್ತ್ರದ ಪ್ರಕಾರ ಅವರು ತಮ್ಮನ್ನು ಶುದ್ಧ ಮಾಡಿಕೊಳ್ಳಲಿಲ್ಲ. ದಯಮಾಡಿ ಅವರನ್ನು ಕ್ಷಮಿಸು. ನಮ್ಮ ಪಿತೃಗಳು ವಿಧೇಯರಾಗಿದ್ದ ದೇವರೇ, ಜನರು ಮೋಶೆಯ ನಿಯಮಕ್ಕನುಸಾರವಾಗಿ ತಮ್ಮನ್ನು ಶುದ್ಧಿ ಮಾಡಿಕೊಂಡಿಲ್ಲದಿದ್ದರೂ ನೀನು ಅವರನ್ನು ದಯವಿಟ್ಟು ಕ್ಷಮಿಸು” ಎಂದು ಪ್ರಾರ್ಥಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು