ಆದಿಕಾಂಡ 21:11 - ಪರಿಶುದ್ದ ಬೈಬಲ್11 ಅಬ್ರಹಾಮನಿಗೆ ತುಂಬ ದುಃಖವಾಯಿತು. ಅವನು ತನ್ನ ಮಗನಾದ ಇಷ್ಮಾಯೇಲನ ಬಗ್ಗೆ ಚಿಂತಿಸತೊಡಗಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮಗನ ಬಗ್ಗೆ ಆಡಿದ ಈ ಮಾತು ಅಬ್ರಹಾಮನಿಗೆ ಬಹು ದುಃಖವುಂಟುಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಈ ಮಾತನ್ನು ಕೇಳಿ ಅಬ್ರಹಾಮನಿಗೆ ಬಹು ದುಃಖವಾಯಿತು. ಕಾರಣ - ಆ ದಾಸಿಯ ಮಗನೂ ಅವನ ಸ್ವಂತ ಮಗನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮಗನ ದೆಸೆಯಿಂದ ಈ ಮಾತು ಅಬ್ರಹಾಮನಿಗೆ ಬಹುದುಃಖವನ್ನು ಹುಟ್ಟಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅಬ್ರಹಾಮನಿಗೆ ತನ್ನ ಮಗನ ದೆಸೆಯಿಂದ ಬಹು ದುಃಖವಾಯಿತು. ಅಧ್ಯಾಯವನ್ನು ನೋಡಿ |
ಅಬ್ಷಾಲೋಮನು ಸತ್ತಿದ್ದಾನೆಂಬುದು ಆಗ ರಾಜನಿಗೆ ತಿಳಿಯಿತು. ರಾಜನು ಬಹಳ ತಳಮಳಗೊಂಡನು. ಅವನು ನಗರ ದ್ವಾರದಲ್ಲಿದ್ದ ಕೊಠಡಿಗೆ ಹೋಗಿ ಅಲ್ಲಿ ಗೋಳಾಡಿದನು. ಬಳಿಕ ಅಲ್ಲಿಂದ ತನ್ನ ಕೊಠಡಿಗೆ ಹೋಗುತ್ತಾ, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನಾದ ಅಬ್ಷಾಲೋಮನೇ! ನಿನಗೆ ಬದಲಾಗಿ ನಾನು ಸತ್ತಿದ್ದರೆ ಚೆನ್ನಾಗಿತ್ತು. ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ!” ಎಂದು ಗೋಳಾಡಿದನು.