Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:14 - ಪರಿಶುದ್ದ ಬೈಬಲ್‌

14 ಮರುದಿನ ಮುಂಜಾನೆ, ಅಬ್ರಹಾಮನು ಸ್ವಲ್ಪ ಆಹಾರವನ್ನು ಮತ್ತು ಸ್ವಲ್ಪ ನೀರನ್ನು ತೆಗೆದು ಹಾಗರಳಿಗೆ ಕೊಟ್ಟನು. ಹಾಗರಳು ಅವುಗಳನ್ನು ತೆಗೆದುಕೊಂಡು ತನ್ನ ಮಗನೊಡನೆ ಅಲ್ಲಿಂದ ಹೊರಟುಹೋದಳು. ಹಾಗರಳು ಆ ಸ್ಥಳವನ್ನು ಬಿಟ್ಟು ಬೇರ್ಷೆಬದ ಮರಳುಗಾಡಿನಲ್ಲಿ ಅಲೆಯತೊಡಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮಾರನೆಯ ದಿನ ಬೆಳಿಗ್ಗೆ ಅಬ್ರಹಾಮನು ಹಾಗರಳಿಗೆ ಬುತ್ತಿಯನ್ನೂ ನೀರಿನ ತಿತ್ತಿಯನ್ನೂ ಕೊಟ್ಟು, ಹೆಗಲ ಮೇಲೆ ಮಗುವನ್ನು ಕೂರಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮಾರಣೇ ದಿನ ಬೆಳಿಗ್ಗೆ ಅಬ್ರಹಾಮನು ಎದ್ದು ಹಾಗರಳಿಗೆ ಬುತ್ತಿಯನ್ನೂ ಒಂದು ತಿತ್ತಿ ತಣ್ಣೀರನ್ನೂ ಕೊಟ್ಟು ಅವಳ ಹೆಗಲಿನ ಮೇಲೆ ಇಟ್ಟು ಮಗುವನ್ನು ಒಪ್ಪಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ, ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು, ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ, ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಮರುಭೂಮಿಯಲ್ಲಿ ಅಲೆದಾಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:14
28 ತಿಳಿವುಗಳ ಹೋಲಿಕೆ  

ಗುಲಾಮನು ಒಂದು ಮನೆಯಲ್ಲಿ ಶಾಶ್ವತವಾಗಿ ಇರುವುದಿಲ್ಲ. ಆದರೆ ಮಗನು ಕುಟುಂಬಕ್ಕೆ ಶಾಶ್ವತವಾಗಿ ಸೇರಿದವನಾಗಿದ್ದಾನೆ.


ನಿನ್ನ ಕೆಲಸಕಾರ್ಯಗಳನ್ನು ನಿನ್ನಿಂದಾದಷ್ಟು ಉತ್ತಮವಾಗಿ ಮಾಡು. ಸಮಾಧಿಯಲ್ಲಿ ನಿನಗೆ ಕೆಲಸವಿಲ್ಲ. ಅಲ್ಲಿ ಆಲೋಚನೆಯಾಗಲಿ ಜ್ಞಾನವಾಗಲಿ ವಿವೇಕವಾಗಲಿ ಇರುವುದಿಲ್ಲ. ನಾವೆಲ್ಲರೂ ಮರಣದ ಆ ಸ್ಥಳಕ್ಕೆ ಹೋಗುತ್ತಿದ್ದೇವೆ.


ಹೊತ್ತಾರೆಯಲ್ಲಿ ನಿನ್ನ ನೆರೆಯವನಿಗೆ, “ನಮಸ್ಕಾರ!” ಎಂದು ಕೂಗಿ ಎಬ್ಬಿಸಬೇಡ. ಅವನಿಗೆ ಅದು ಆಶೀರ್ವಾದದಂತೆ ಕಾಣದೆ ಶಾಪದಂತೆಯೇ ಕಾಣುವುದು.


ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ತಡಮಾಡದೆ ಬೇಗನೆ ಹಿಂತಿರುಗಿದೆನು.


ಅವರಲ್ಲಿ ಕೆಲವರು ಮರುಭೂಮಿಯಲ್ಲಿ ಅಲೆದಾಡಿದರು. ತಾವು ನೆಲೆಸತಕ್ಕ ಪಟ್ಟಣಕ್ಕಾಗಿ ಅವರು ಹುಡುಕಿದರೂ ಅದು ಅವರಿಗೆ ಕಾಣಲಿಲ್ಲ.


ಎಲೀಯನು ಇದನ್ನು ಕೇಳಿ ಭಯಗೊಂಡನು. ಅವನು ತನ್ನ ಜೀವರಕ್ಷಣೆಗಾಗಿ ಓಡಿಹೋದನು. ಅವನು ತನ್ನ ಸೇವಕನನ್ನೂ ತನ್ನ ಸಂಗಡ ಕರೆದೊಯ್ದನು. ಅವರು ಯೆಹೂದದ ಬೇರ್ಷೆಬಕ್ಕೆ ಹೋದರು. ಎಲೀಯನು ಬೇರ್ಷೆಬದಲ್ಲಿ ತನ್ನ ಸೇವಕನನ್ನು ಬಿಟ್ಟನು.


ಮರುದಿನ ಮುಂಜಾನೆ, ಅವರು ಒಬ್ಬರಿಗೊಬ್ಬರು ಪ್ರಮಾಣ ಮಾಡಿಕೊಂಡು, ಸಮಾಧಾನದಿಂದ ಹೊರಟುಹೋದರು.


ಅವರು ಆ ಸ್ಥಳದಲ್ಲಿ ಒಪ್ಪಂದ ಮಾಡಿಕೊಂಡಿದ್ದರಿಂದ ಆ ಬಾವಿಗೆ ಬೇರ್ಷೆಬ ಎಂದು ಹೆಸರಾಯಿತು.


ಯೆಹೋವನ ದೂತನು ಹಾಗರಳನ್ನು ಮರುಳುಗಾಡಿನ ಒರತೆಯೊಂದರ ಬಳಿಯಲ್ಲಿ ಕಂಡನು. ಆ ಒರತೆಯು ಶೂರಿಗೆ ಹೋಗುವ ದಾರಿಯ ಬಳಿಯಲ್ಲಿತ್ತು.


ಹೆಷ್ಬೋನಿನ ತೋಟಗಳು ಮತ್ತು ಸಿಬ್ಮದ ದ್ರಾಕ್ಷಾಲತೆಗಳು ದ್ರಾಕ್ಷಿಯನ್ನು ಫಲಿಸಲಾರದ ಕಾರಣ ಜನರು ವ್ಯಸನದಿಂದಿರುವರು. ಶತ್ರುಸೈನ್ಯವು ಯೆಜ್ಜೇರಿನಿಂದ ಮರುಭೂಮಿಯವರೆಗೂ ಮತ್ತು ಸಮುದ್ರದವರೆಗೂ ಆವರಿಸಿಕೊಂಡಿರುವರು.


ಆದ್ದರಿಂದ ಇಸ್ರೇಲನು ಈಜಿಪ್ಟಿಗೆ ಪ್ರಯಾಣ ಬೆಳೆಸಿದನು. ಅವನು ಬೇರ್ಷೆಬಕ್ಕೆ ಹೋಗಿ ತನ್ನ ತಂದೆಯಾದ ಇಸಾಕನ ದೇವರನ್ನು ಆರಾಧಿಸಿ ಯಜ್ಞಗಳನ್ನು ಅರ್ಪಿಸಿದನು.


ಶೆಕೆಮಿನಲ್ಲಿ ದಾರಿತಪ್ಪಿ ಯೋಸೇಫನು ಹೊಲಗಳಲ್ಲಿ ಅಲೆದಾಡುತ್ತಿರಲು ಅವನನ್ನು ಕಂಡ ಒಬ್ಬನು, “ಏನು ಹುಡುಕುತ್ತಿರುವೆ?” ಎಂದು ಕೇಳಿದನು.


ಆದ್ದರಿಂದ ಇಸಾಕನು ಆ ಬಾವಿಗೆ ಷಿಬಾ ಎಂದು ಹೆಸರಿಟ್ಟನು. ಇಂದಿಗೂ ಆ ನಗರಕ್ಕೆ ಬೇರ್ಷೆಬ ಎಂದು ಕರೆಯುತ್ತಾರೆ.


ಆ ಸೇವಕನು ಮತ್ತು ಅವನ ಸಂಗಡಿಗರು ಅಲ್ಲಿ ಇಳಿದುಕೊಂಡು ಊಟಮಾಡಿದರು. ಅವರು ಮರುದಿನ ಮುಂಜಾನೆ ಎದ್ದು, “ಈಗ ನಾವು ನಮ್ಮ ಒಡೆಯನ ಬಳಿಗೆ ಹೋಗುತ್ತೇವೆ” ಎಂದು ಹೇಳಿದರು.


ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂತಿರುಗಿ ಹೋದನು. ಅವರೆಲ್ಲರೂ ಬೇರ್ಷೆಬಕ್ಕೆ ಮರಳಿ ಪ್ರಯಾಣ ಮಾಡಿದರು. ಬಳಿಕ ಅಬ್ರಹಾಮನು ಅಲ್ಲೇ ವಾಸಿಸಿದನು.


ಮುಂಜಾನೆ ಅಬ್ರಹಾಮನು ಎದ್ದು ಕತ್ತೆಗೆ ತಡಿ ಹಾಕಿಸಿದನು; ಇಸಾಕನನ್ನೂ ಅವನೊಂದಿಗೆ ಇಬ್ಬರು ಸೇವಕರನ್ನೂ ಕರೆದುಕೊಂಡನು; ಯಜ್ಞಕ್ಕಾಗಿ ಕಟ್ಟಿಗೆಯನ್ನು ತೆಗೆದುಕೊಂಡನು. ಬಳಿಕ ದೇವರು ಹೇಳಿದ್ದ ಸ್ಥಳಕ್ಕೆ ಅವರು ಹೊರಟರು.


ಅಬ್ರಹಾಮನು ಬೇರ್ಷೆಬದಲ್ಲಿ ವಿಶೇಷವಾದ ಒಂದು ಮರವನ್ನು ನೆಟ್ಟನು. ಆ ಸ್ಥಳದಲ್ಲಿ ಅವನು ಸದಾಕಾಲ ಜೀವಿಸುವ ದೇವರಾದ ಯೆಹೋವನಿಗೆ ಪ್ರಾರ್ಥಿಸಿದನು.


ಅಂದು ಮುಂಜಾನೆ ಅಬ್ರಹಾಮನು ಎದ್ದು ತಾನು ಯೆಹೋವನ ಮುಂದೆ ನಿಂತುಕೊಂಡಿದ್ದ ಸ್ಥಳಕ್ಕೆ ಹೋದನು.


ಆದರೆ ನಿನ್ನ ಸೇವಕಿಯ ಮಗನನ್ನು ಸಹ ನಾನು ಆಶೀರ್ವದಿಸುವೆನು. ಅವನು ನಿನ್ನ ಮಗನು. ಆದ್ದರಿಂದ ಅವನಿಂದಲೂ ನಾನು ದೊಡ್ಡ ಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.


ಸ್ವಲ್ಪ ಸಮಯದ ನಂತರ, ಇದ್ದ ನೀರೆಲ್ಲಾ ಮುಗಿದುಹೋಯಿತು. ಕುಡಿಯುವುದಕ್ಕೆ ಏನೂ ಇರಲಿಲ್ಲ. ಆದ್ದರಿಂದ ಹಾಗರಳು ತನ್ನ ಮಗನನ್ನು ಪೊದೆಯ ಕೆಳಗೆ ಮಲಗಿಸಿದಳು.


ಮನೆಯಿಂದ ದೂರವಿರುವ ಗಂಡಸು ಗೂಡಿನಿಂದ ದೂರವಿರುವ ಪಕ್ಷಿಯಂತಿರುವನು.


ಯಾಕೋಬನು ಮರುದಿನ ಮುಂಜಾನೆ ಬೇಗನೆ ಎದ್ದು, ತಾನು ಮಲಗಿಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಕಂಬವಾಗಿ ನೆಲದಲ್ಲಿ ನಿಲ್ಲಿಸಿದನು. ನಂತರ ಆ ಕಲ್ಲಿನ ಮೇಲೆ ಎಣ್ಣೆಯನ್ನು ಸುರಿದನು. ಹೀಗೆ ಅವನು ಆ ಕಲ್ಲನ್ನು ದೇವರ ನೆನಪಿಗಾಗಿ ಪ್ರತಿಷ್ಠಿಸಿದನು.


ಮರುದಿನ, ಬೆಳಗಿನ ಜಾವದಲ್ಲಿ ಯೆಹೋಶುವನು ಮತ್ತು ಎಲ್ಲಾ ಇಸ್ರೇಲರು ಎದ್ದು ಆಕಾಶಿಯದಿಂದ ಹೊರಟು ಜೋರ್ಡನ್ ನದಿಯವರೆಗೆ ಬಂದರು. ಅವರು ಜೋರ್ಡನ್ ನದಿಯನ್ನು ದಾಟುವ ಮೊದಲು ಅಲ್ಲಿ ಪಾಳೆಯ ಮಾಡಿಕೊಂಡರು.


ಸಮುವೇಲನು ಮಾರನೆಯ ದಿನ ಬೆಳಿಗ್ಗೆ ಮೇಲೆದ್ದು, ಸೌಲನನ್ನು ಭೇಟಿಮಾಡಲು ಹೋದನು. ಆದರೆ ಜನರೆಲ್ಲ ಸಮುವೇಲನಿಗೆ, “ಸೌಲನು ತನ್ನ ಗೌರವಾರ್ಥವಾಗಿ ಜ್ಞಾಪಕಸ್ತಂಭವನ್ನು ನಿರ್ಮಿಸಲು ಕರ್ಮೆಲ್ ಎಂಬ ಪಟ್ಟಣಕ್ಕೆ ಹೋದನು. ನಂತರ ಸೌಲನು ಕೆಲವು ಪ್ರದೇಶಗಳನ್ನು ಸುತ್ತಿಕೊಂಡು ಗಿಲ್ಗಾಲಿಗೆ ಹೋದನು” ಎಂದು ಹೇಳಿದರು. ಸಮುವೇಲನು ಸೌಲನಿದ್ದ ಸ್ಥಳಕ್ಕೆ ಹೋದನು. ಸೌಲನು ಅಮಾಲೇಕ್ಯರಿಂದ ವಶಪಡಿಸಿಕೊಂಡ ಪಶುಗಳನ್ನು ಪ್ರಥಮ ಸರ್ವಾಂಗಹೋಮವಾಗಿ ಯೆಹೋವನಿಗೆ ಅರ್ಪಿಸುತ್ತಿದ್ದನು.


ಹಿಜ್ಕೀಯ ಅರಸನು ಪಟ್ಟಣದ ಅಧಿಕಾರಿಗಳನ್ನು ಮುಂಜಾನೆ ಕರೆಯಿಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು