ಆದಿಕಾಂಡ 21:16 - ಪರಿಶುದ್ದ ಬೈಬಲ್16 ಹಾಗರಳು ಸ್ವಲ್ಪ ದೂರ ನಡೆದುಹೋಗಿ ಕುಳಿತುಕೊಂಡು ತನ್ನ ಮಗನು ಸಾಯುವುದನ್ನು ನೋಡಲಾರದೆ ಅಳತೊಡಗಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಕಲ್ಲೆಸೆಯುವಷ್ಟು ದೂರ ಹೋಗಿ ಕುಳಿತುಕೊಂಡು, “ಮಗುವು ಸಾಯುವುದನ್ನು ನೋಡಲಾರೆನು” ಎಂದು ಹೇಳಿ ಜೋರಾಗಿ ಅತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವಳು ಆ ಮಗುವನ್ನು ಒಂದು ಗಿಡದ ನೆರಳಿನಲ್ಲಿ ಬಿಟ್ಟು ಒಂದು ಬಾಣವನ್ನೆಸೆಯುವಷ್ಟು ದೂರಹೋಗಿ ಕುಳಿತುಕೊಂಡು ಗಟ್ಟಿಯಾಗಿ ಅತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಮಗುವು ಸಾಯುವದನ್ನು ನೋಡಲಾರೆನು ಅಂದುಕೊಂಡು ಬಿಲ್ಲೆಸುಗೆಯಷ್ಟು ದೂರ ಹೋಗಿ ಅವನೆದುರಾಗಿ ಕೂತುಕೊಂಡು ಗಟ್ಟಿಯಾಗಿ ಅತ್ತಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಬಾಣವನ್ನೆಸೆಯುವಷ್ಟು ದೂರಹೋಗಿ ಕುಳಿತುಕೊಂಡು, “ಮಗುವಿನ ಸಾವನ್ನು ನಾನು ನೋಡಲಾರೆನು,” ಎಂದು ಹೇಳಿ ಸ್ವರವೆತ್ತಿ ಅತ್ತಳು. ಅಧ್ಯಾಯವನ್ನು ನೋಡಿ |
ಆ ಸ್ತ್ರೀಯು, “ನನ್ನಲ್ಲಿ ರೊಟ್ಟಿಯಿಲ್ಲವೆಂದು ನಿನ್ನ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಾನು ಪ್ರಮಾಣ ಮಾಡುತ್ತೇನೆ. ನನ್ನ ಮಡಕೆಯಲ್ಲಿ ಸ್ವಲ್ಪ ಹಿಟ್ಟು ಮಾತ್ರ ಇದೆ; ಪಾತ್ರೆಯಲ್ಲಿ ಸ್ವಲ್ಪ ಆಲೀವ್ ಎಣ್ಣೆಯಿದೆ. ಬೆಂಕಿ ಹೊತ್ತಿಸಲು ಸೌದೆ ಚೂರುಗಳನ್ನು ಆಯ್ದುಕೊಳ್ಳವುದಕ್ಕಾಗಿ ನಾನು ಈ ಸ್ಥಳಕ್ಕೆ ಬಂದೆ. ಸೌಧೆಯನ್ನು ನಾನು ಮನೆಗೆ ತೆಗೆದುಕೊಂಡು ಹೋಗಿ, ನಮ್ಮ ಕೊನೆಯ ಊಟವನ್ನು ಸಿದ್ಧಪಡಿಸುತ್ತೇನೆ. ನನ್ನ ಮಗ ಮತ್ತು ನಾನು ಅದನ್ನು ತಿಂದು, ನಂತರ ಹಸಿವಿನಿಂದ ಸಾಯುತ್ತೇವೆ” ಎಂದು ಹೇಳಿದಳು.