ಆದಿಕಾಂಡ 21:2 - ಪರಿಶುದ್ದ ಬೈಬಲ್2 ಸಾರಳು ವೃದ್ಧನಾಗಿದ್ದ ಅಬ್ರಹಾಮನಿಂದ ಗರ್ಭಿಣಿಯಾಗಿ, ಒಂದು ಗಂಡುಮಗುವನ್ನು ಹೆತ್ತಳು. ದೇವರು ವಾಗ್ದಾನ ಮಾಡಿದಂತೆಯೇ ಈ ಸಂಗತಿಗಳೆಲ್ಲ ತಕ್ಕಕಾಲದಲ್ಲಿ ನಡೆದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅದರಂತೆ ಸಾರಳು ಬಸುರಾಗಿ, ದೇವರು ಮೊದಲು ಸೂಚಿಸಿದ ಕಾಲದಲ್ಲಿ ಅಬ್ರಹಾಮನಿಂದ ಅವನ ಮುಪ್ಪಿನಲ್ಲೇ ಅವನಿಗೆ ಒಬ್ಬ ಮಗನನ್ನು ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಕೆ ಗರ್ಭಿಣಿಯಾಗಿ ಅಬ್ರಹಾಮನಿಂದ ಒಬ್ಬ ಮಗನನ್ನು ಹೆತ್ತಳು, ಅದೂ ಅಬ್ರಹಾಮನು ಮುದುಕನಾಗಿದ್ದಾಗ, ದೇವರು ಮೊದಲೇ ನಿರ್ಧರಿಸಿದ್ದ ಕಾಲಕ್ಕೆ ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಹೇಗಂದರೆ ಸಾರಳು ಬಸುರಾಗಿ ದೇವರು ಮೊದಲು ಸೂಚಿಸಿದ ಕಾಲದಲ್ಲಿ ಅಬ್ರಹಾಮನಿಂದ ಅವನ ಮುಪ್ಪಿನಲ್ಲೇ ಮಗನನ್ನು ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದೇವರು ಅಬ್ರಹಾಮನಿಗೆ ಹೇಳಿದ ಸಮಯದಲ್ಲಿ ಅವನು ಮುದುಕನಾಗಿದ್ದಾಗ, ಸಾರಳು ಗರ್ಭಿಣಿಯಾಗಿ ಅವನಿಗೆ ಮಗನನ್ನು ಹೆತ್ತಳು. ಅಧ್ಯಾಯವನ್ನು ನೋಡಿ |
“ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಆ ಒಡಂಬಡಿಕೆಯ ಗುರುತೇ ಸುನ್ನತಿ. ಹೀಗಿರಲು ಅಬ್ರಹಾಮನು ಒಬ್ಬ ಮಗನನ್ನು ಪಡೆದಾಗ, ಆ ಮಗನಿಗೆ ಎಂಟನೆಯ ದಿನದಲ್ಲಿ ಸುನ್ನತಿ ಮಾಡಿದನು. ಅವನ ಮಗನ ಹೆಸರು ಇಸಾಕ. ಇಸಾಕನು ಸಹ ತನ್ನ ಮಗನಾದ ಯಾಕೋಬನಿಗೆ ಸುನ್ನತಿ ಮಾಡಿದನು. ಮತ್ತು ಯಾಕೋಬನು ತನ್ನ ಗಂಡುಮಕ್ಕಳಿಗೆಲ್ಲಾ ಸುನ್ನತಿ ಮಾಡಿದನು. ಈ ಗಂಡುಮಕ್ಕಳೇ ಮುಂದೆ ಹನ್ನೆರಡು ಮಂದಿ ಪಿತೃಗಳಾದರು.