ಆದಿಕಾಂಡ 21:21 - ಪರಿಶುದ್ದ ಬೈಬಲ್21 ಅವನ ತಾಯಿಯು ಅವನಿಗೆ ಈಜಿಪ್ಟಿನ ಹುಡುಗಿಯನ್ನು ತಂದು ಮದುವೆ ಮಾಡಿಸಿದಳು. ಅವರು ಪಾರಾನ್ ಕಾಡಿನಲ್ಲಿ ತಮ್ಮ ವಾಸವನ್ನು ಮುಂದುವರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವನು ಪಾರಾನಿನ ಅರಣ್ಯದಲ್ಲಿ ವಾಸ ಮಾಡಿದನು. ಅವನ ತಾಯಿ ಐಗುಪ್ತ ದೇಶದಿಂದ ಕನ್ಯೆಯನ್ನು ತಂದು ಅವನಿಗೆ ಮದುವೆ ಮಾಡಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಪಾರಾನಿನ ಅರಣ್ಯ ಅವನ ವಾಸಸ್ಥಳವಾಯಿತು. ಅವನ ತಾಯಿ ಈಜಿಪ್ಟಿನಿಂದ ಒಬ್ಬ ಹೆಣ್ಣನ್ನು ತರಿಸಿ ಮದುವೆಮಾಡಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿ ಐಗುಪ್ತದೇಶದಿಂದ ಕನ್ನಿಕೆಯನ್ನು ತರಿಸಿ ಮದುವೆಮಾಡಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇಷ್ಮಾಯೇಲನು ಪಾರಾನಿನ ಮರುಭೂಮಿಯಲ್ಲಿ ವಾಸಮಾಡುತ್ತಿದ್ದಾಗ, ಅವನ ತಾಯಿಯು ಅವನಿಗೋಸ್ಕರ ಈಜಿಪ್ಟ್ ದೇಶದ ಒಬ್ಬ ಹೆಣ್ಣನ್ನು ತರಿಸಿ ಮದುವೆಮಾಡಿಸಿದಳು. ಅಧ್ಯಾಯವನ್ನು ನೋಡಿ |
ಅವರು ಮಿದ್ಯಾನನ್ನು ಬಿಟ್ಟು ಪಾರಾನಿಗೆ ಹೋದರು. ಇತರ ಕೆಲವು ಜನರು ಪಾರಾನಿನಲ್ಲಿ ಅವರೊಂದಿಗೆ ಸೇರಿಕೊಂಡರು. ನಂತರ ಇವರೆಲ್ಲಾ ಒಟ್ಟಿಗೆ ಈಜಿಪ್ಟಿಗೆ ಹೋದರು. ಅವರು ಈಜಿಪ್ಟಿನ ರಾಜನಾದ ಫರೋಹನ ಬಳಿಗೆ ಹೋಗಿ, ಅವನ ಸಹಾಯವನ್ನು ಕೇಳಿದರು. ಫರೋಹನು ಹದದನಿಗೆ ಒಂದು ಮನೆಯನ್ನು ಮತ್ತು ಸ್ವಲ್ಪ ಭೂಮಿಯನ್ನು ಕೊಟ್ಟನು. ಫರೋಹನು ಅವನ ಊಟಕ್ಕಾಗಿ ಪ್ರತಿ ತಿಂಗಳು ಆಹಾರವನ್ನು ಕೊಟ್ಟನು.