Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:25 - ಪರಿಶುದ್ದ ಬೈಬಲ್‌

25 ಆಮೇಲೆ ಅಬ್ರಹಾಮನು ಅಬೀಮೆಲೆಕನಿಗೆ, “ನಿನ್ನ ಸೇವಕರು ನೀರಿದ್ದ ಒಂದು ಬಾವಿಯನ್ನು ವಶಪಡಿಸಿಕೊಂಡಿದ್ದಾರೆ” ಎಂದು ದೂರು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಂಡದ್ದರಿಂದ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲಾತ್ಕಾರದಿಂದ ಸ್ವಾಧೀನಪಡಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲಾತ್ಕಾರದಿಂದ ಸ್ವಾಧೀನಪಡಿಸಿಕೊಂಡದರಿಂದ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಲು ಅಬೀಮೆಲೆಕನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅಬೀಮೆಲೆಕನ ಸೇವಕರು ಬಲಾತ್ಕಾರದಿಂದ ತೆಗೆದುಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:25
11 ತಿಳಿವುಗಳ ಹೋಲಿಕೆ  

“ನಿನ್ನ ಸಹೋದರನಾಗಲಿ ಸಹೋದರಿಯಾಗಲಿ ನಿನಗೆ ಯಾವುದಾದರೂ ತಪ್ಪು ಮಾಡಿದರೆ, ನೀನು ಹೋಗಿ ಅವನೊಬ್ಬನೇ ಇರುವಾಗ ಅವನ ತಪ್ಪನ್ನು ತಿಳಿಸು. ಅವನು ನಿನ್ನ ಮಾತಿಗೆ ಕಿವಿಗೊಟ್ಟರೆ, ಮತ್ತೆ ನಿನ್ನ ಸಹೋದರನಾಗಿರಲು ನೀನೇ ಅವನಿಗೆ ಸಹಾಯ ಮಾಡಿದಂತಾಗುವುದು.


ಬಹಿರಂಗವಾದ ಟೀಕೆ ಗುಟ್ಟಾದ ಪ್ರೀತಿಗಿಂತಲೂ ಉತ್ತಮ.


ನೀನು ನಿನ್ನ ನೆರೆಯವನೊಂದಿಗೆ ವಾಗ್ವಾದ ಮಾಡಿದ್ದರೆ, ಗುಟ್ಟಾದ ವಿಷಯಗಳನ್ನು ಬೇರೊಬ್ಬನಿಗೆ ಪ್ರಕಟಿಸಬೇಡ.


ಮೂಢನಿಗೆ ಮನವರಿಕೆ ಮಾಡಲು ನೂರು ಏಟುಗಳು ಬೇಕಾದರೂ ಜ್ಞಾನಿಗೆ ಒಂದೇ ಗದರಿಕೆಯು ಸಾಕು.


ಅದಕ್ಕೆ ಅವಳು, “ನನಗೊಂದು ದಾನ ಕೊಡಬೇಕು. ನೀನು ನನಗೆ ನೆಗೆವಿನಲ್ಲಿ ನೀರಿಲ್ಲದ ಮರುಭೂಮಿಯನ್ನು ಕೊಟ್ಟಿರುವೆ. ದಯವಿಟ್ಟು ನನಗೆ ಸ್ವಲ್ಪ ನೀರಿನ ಬುಗ್ಗೆಗಳಿರುವ ಭೂಮಿಯನ್ನು ಕೊಡು” ಎಂದಳು. ಅವಳು ಕೇಳಿಕೊಂಡಂತೆಯೇ ಕಾಲೇಬನು ಅವಳಿಗೆ ಮೇಲಿನ ಮತ್ತು ಕೆಳಗಿನ ಬುಗ್ಗೆಗಳನ್ನು ಕೊಟ್ಟನು.


ಆ ಕುರುಬರು, “ಕುರಿಮಂದೆಗಳೆಲ್ಲ ಒಟ್ಟಿಗೆ ಸೇರುವವರೆಗೆ ನಾವು ಬಾವಿಯ ಮೇಲಿರುವ ಕಲ್ಲನ್ನು ತೆಗೆದು ಕುರಿಗಳಿಗೆ ನೀರು ಕುಡಿಸುವಂತಿಲ್ಲ; ಅವು ಒಟ್ಟಿಗೆ ಕೂಡಿಬಂದಾಗಲೇ ನೀರು ಕುಡಿಸುತ್ತೇವೆ” ಎಂದು ಹೇಳಿದರು.


ಅಬ್ರಾಮನ ಮಂದೆಕಾಯುವವರು ಮತ್ತು ಲೋಟನ ಮಂದೆಕಾಯುವವರು ವಾದ ಮಾಡಲಾರಂಭಿಸಿದರು. ಆ ಕಾಲದಲ್ಲಿ ಕಾನಾನ್ಯರು ಮತ್ತು ಪೆರಿಜೀಯರು ಸಹ ಆ ಸ್ಥಳದಲ್ಲಿ ವಾಸವಾಗಿದ್ದರು.


ಅದಕ್ಕೆ ಅಬ್ರಹಾಮನು, “ನೀನು ನನ್ನನ್ನು ನೋಡಿಕೊಂಡಂತೆ ನಾನೂ ನಿನ್ನನ್ನು ನೋಡಿಕೊಳ್ಳುವೆನು” ಎಂದು ಪ್ರಮಾಣಮಾಡಿದನು.


ಅದಕ್ಕೆ ಅಬೀಮೆಲೆಕನು, “ಅದನ್ನು ಯಾರು ಮಾಡಿದರೋ ನನಗೆ ಗೊತ್ತಿಲ್ಲ. ಇಂದಿನವರೆಗೂ ನೀನು ಇದನ್ನು ನನಗೆ ಹೇಳಲೇ ಇಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು