ಆದಿಕಾಂಡ 21:32 - ಪರಿಶುದ್ದ ಬೈಬಲ್32 ಬೇರ್ಷೆಬದಲ್ಲಿ ಒಪ್ಪಂದವನ್ನು ಮಾಡಿಕೊಂಡ ಮೇಲೆ ಅಬೀಮೆಲೆಕನು ಮತ್ತು ಅವನ ಸೈನ್ಯಾಧಿಕಾರಿಯು ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಬೇರ್ಷೆಬದಲ್ಲಿ ಅವರು ಒಡಂಬಡಿಕೆಯನ್ನು ಮಾಡಿಕೊಂಡ ತರುವಾಯ ಅಬೀಮೆಲೆಕನೂ ಅವನ ಸೇನಾಧಿಪತಿಯಾದ ಫೀಕೋಲನೂ ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿ ಹೊರಟು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಬೇರ್ಷೆಬದಲ್ಲಿ ಅವರು ಒಪ್ಪಂದಮಾಡಿಕೊಂಡ ತರುವಾಯ ಅಬೀಮೆಲೆಕನೂ ಅವನ ಸೇನಾಪತಿ ಫೀಕೋಲನು ಫಿಲಿಷ್ಟಿಯಕ್ಕೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಬೇರ್ಷೆಬದಲ್ಲಿ ಅವರು ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ ಅವನ ಸೇನಾಪತಿಯಾದ ಫೀಕೋಲನೂ ಫಿಲಿಷ್ಟಿಯರ ದೇಶಕ್ಕೆ ತಿರಿಗಿ ಹೊರಟು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ, ಅವನ ಮುಖ್ಯ ಸೈನ್ಯಾಧಿಪತಿ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿ |
ಇಸ್ರೇಲರು ಈಜಿಪ್ಟನ್ನು ಬಿಟ್ಟುಹೋಗುವಂತೆ ಫರೋಹನು ಅನುಮತಿ ನೀಡಿದನು. ಇಸ್ರೇಲರು ಫಿಲಿಷ್ಟಿಯರ ದೇಶದ ಮೂಲಕ ಹಾದುಹೋಗುವ ರಸ್ತೆಯಲ್ಲಿ ಹೋಗಲು ಯೆಹೋವನು ಅನುಮತಿ ನೀಡಲಿಲ್ಲ. ಸಮುದ್ರದ ಮೂಲಕ ಹಾದುಹೋಗುವ ಆ ರಸ್ತೆ ಬಹಳ ಹತ್ತಿರವಾಗಿತ್ತು. ಆದರೆ ಯೆಹೋವನು, “ಇಸ್ರೇಲರು ಆ ದಾರಿಯಲ್ಲಿ ಹೋದರೆ, ಯುದ್ಧಮಾಡಬೇಕಾಗುವುದು. ಆಗ ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿ ಈಜಿಪ್ಟಿಗೆ ಹಿಂತಿರುಗಬಹುದು” ಅಂದುಕೊಂಡನು.