Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:34 - ಪರಿಶುದ್ದ ಬೈಬಲ್‌

34 ಅವನು ಬಹುಕಾಲದವರೆಗೆ ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹಳ ದಿನಗಳ ಕಾಲ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅಬ್ರಹಾಮನು ಫಿಲಿಷ್ಟಿಯರ ಆ ಪ್ರಾಂತ್ಯದಲ್ಲಿ ಬಹುಕಾಲ ಪ್ರವಾಸಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹುದಿವಸ ಇಳುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹುಕಾಲ ತಂಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:34
7 ತಿಳಿವುಗಳ ಹೋಲಿಕೆ  

ಪ್ರಿಯ ಸ್ನೇಹಿತರೇ, ನೀವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಪರದೇಶದವರಂತೆ ಇದ್ದೀರಿ. ಆದ್ದರಿಂದ ನಿಮ್ಮ ದೇಹಗಳಿಗೆ ಇಷ್ಟವಾದ ಕೆಟ್ಟಸಂಗತಿಗಳಿಂದ ದೂರವಾಗಿರಿ. ಇವು ನಿಮ್ಮ ಜೀವಾತ್ಮಕ್ಕೆ ವಿರುದ್ಧವಾಗಿ ಹೋರಾಡುತ್ತವೆ.


ಈ ಮಹಾಪುರಷರೆಲ್ಲರೂ ತಾವು ಸಾಯುವವರೆಗೂ ನಂಬಿಕೆಯುಳ್ಳವರಾಗಿದ್ದರು. ದೇವರು ತನ್ನ ಜನರಿಗೆ ವಾಗ್ದಾನ ಮಾಡಿದ್ದವುಗಳನ್ನು ಆ ಜನರು ಪಡೆಯಲಿಲ್ಲ. ಮುಂದೆ ಬಹುಕಾಲದ ನಂತರ ಬರಲಿದ್ದ ಅವುಗಳನ್ನು ನೋಡಿ ಅವರು ಸಂತೋಷಗೊಂಡರು. ಅವರು ತಾವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಅಪರಿಚಿತರಂತೆ ಇದ್ದೇವೆ ಎಂಬುದನ್ನು ಒಪ್ಪಿಕೊಂಡರು.


ದೇವರು ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶದಲ್ಲಿ ಅವನು ಪ್ರವಾಸಿಗನಂತೆ ವಾಸಮಾಡಿದ್ದು ನಂಬಿಕೆಯಿಂದಲೇ. ಅದೇ ವಾಗ್ದಾನಕ್ಕೆ ಸಹ ಭಾದ್ಯರಾಗಿದ್ದ ಇಸಾಕನೂ ಯಾಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು! ನನ್ನ ಮೊರೆಗೆ ಕಿವಿಗೊಡು! ನನ್ನ ಕಣ್ಣೀರನ್ನು ನೋಡು! ನಾನು ಈ ಜೀವಿತವನ್ನು ಕೇವಲ ಒಬ್ಬ ಪ್ರಯಾಣಿಕನಂತೆ ನಿನ್ನೊಂದಿಗೆ ಸಾಗಿಸುತ್ತಿರುವೆ. ನನ್ನ ಎಲ್ಲಾ ಪೂರ್ವಿಕರಂತೆ, ನಾನು ಇಲ್ಲಿ ಕೇವಲ ಸ್ವಲ್ಪಕಾಲ ಜೀವಿಸುವೆನು.


ನಾವು ನಮ್ಮ ಪೂರ್ವಿಕರಂತೆ ಈ ಲೋಕದಲ್ಲಿ ಪ್ರವಾಸಿಗಳಾಗಿದ್ದೇವೆ; ದಾಟಿಹೋಗುವ ನೆರಳಿನಂತೆ ನಾವು ಈ ಲೋಕದಲ್ಲಿರುತ್ತೇವೆ. ಅದನ್ನು ನಿಲ್ಲಿಸಲು ನಮಗೆ ಸಾಧ್ಯವಿಲ್ಲ.


ಅಬ್ರಹಾಮನು ಅಲ್ಲಿಂದ ಹೊರಟು ನೆಗೆವ್‌ಗೆ ಪ್ರಯಾಣಮಾಡಿ ಕಾದೇಶಿಗೂ ಶೂರಿಗೂ ನಡುವೆ ಇದ್ದ ಗೆರಾರ್ ನಗರದಲ್ಲಿ ನೆಲೆಸಿದನು.


ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂತಿರುಗಿ ಹೋದನು. ಅವರೆಲ್ಲರೂ ಬೇರ್ಷೆಬಕ್ಕೆ ಮರಳಿ ಪ್ರಯಾಣ ಮಾಡಿದರು. ಬಳಿಕ ಅಬ್ರಹಾಮನು ಅಲ್ಲೇ ವಾಸಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು