Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:5 - ಪರಿಶುದ್ದ ಬೈಬಲ್‌

5 ಅಬ್ರಹಾಮನಿಗೆ ನೂರು ವರ್ಷಗಳಾಗಿದ್ದಾಗ, ಅವನ ಮಗನಾದ ಇಸಾಕನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇಸಾಕನು ಹುಟ್ಟಿದಾಗ ಅಬ್ರಹಾಮನು ನೂರು ವರ್ಷದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇಸಾಕನು ಹುಟ್ಟಿದಾಗ ಅಬ್ರಹಾಮನಿಗೆ ನೂರು ವರ್ಷವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇಸಾಕನು ಹುಟ್ಟಿದಾಗ ಅಬ್ರಹಾಮನು ನೂರು ವರುಷದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅಬ್ರಹಾಮನ ಮಗ ಇಸಾಕನು ಜನಿಸಿದಾಗ ಅವನು ನೂರು ವರ್ಷದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:5
8 ತಿಳಿವುಗಳ ಹೋಲಿಕೆ  

ಅಬ್ರಹಾಮನು ದೇವರಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಆದರೆ ಅವನು ಮನಸ್ಸಿನಲ್ಲಿ ನಗುತ್ತಾ, “ನನಗೆ ನೂರು ವರ್ಷ ವಯಸ್ಸಾಗಿರುವುದರಿಂದ ಮಗನನ್ನು ಪಡೆಯಲು ನನಗೂ ಸಾಧ್ಯವಿಲ್ಲ. ಸಾರಳಿಗೆ ತೊಂಭತ್ತು ವರ್ಷ ವಯಸ್ಸಾಗಿರುವುದರಿಂದ ಮಗನನ್ನು ಪಡೆಯಲು ಆಕೆಗೂ ಸಾಧ್ಯವಿಲ್ಲ” ಅಂದುಕೊಂಡನು.


ಅಬ್ರಹಾಮನು ಸುಮಾರು ನೂರು ವರ್ಷದವನಾಗಿದ್ದರಿಂದ ಅವನ ದೇಹವು ದುರ್ಬಲವಾಗಿತ್ತು. ಆದಕಾರಣ ಅವನು ಮಕ್ಕಳನ್ನು ಪಡೆಯುವ ಸಾಧ್ಯತೆ ಇರಲಿಲ್ಲ. ಅಲ್ಲದೆ ಸಾರಳಿಗೂ ಮಕ್ಕಳಾಗುವ ಸಾಧ್ಯತೆ ಇರಲಿಲ್ಲ. ಅಬ್ರಹಾಮನು ಇದರ ಬಗ್ಗೆ ಆಲೋಚಿಸಿದನು. ಆದರೂ ದೇವರ ಮೇಲೆ ಅವನಿಗಿದ್ದ ನಂಬಿಕೆಯು ಬಲಹೀನವಾಗಲಿಲ್ಲ.


ಅಬ್ರಾಮನಿಗೆ ತೊಂಭತ್ತೊಂಬತ್ತು ವರ್ಷವಾಗಿದ್ದಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾಗಿ, “ನಾನು ಸರ್ವಶಕ್ತನಾದ ದೇವರು. ನನಗೆ ವಿಧೇಯನಾಗಿದ್ದು ನಿರ್ದೋಷಿಯಾಗಿರು.


ಅಬ್ರಹಾಮನು ಇದರ ನೆರವೇರುವಿಕೆಗಾಗಿ ತಾಳ್ಮೆಯಿಂದ ಕಾದಿದ್ದನು. ತರುವಾಯ ಅವನಿಗೆ ದೇವರ ವಾಗ್ದಾನದ ಫಲ ದೊರೆಯಿತು.


ಅಬ್ರಾಮನಿಗೆ ಎಂಭತ್ತಾರು ವರ್ಷವಾಗಿದ್ದಾಗ ಹಾಗರಳಲ್ಲಿ ಇಷ್ಮಾಯೇಲನು ಜನಿಸಿದನು.


ಅಬ್ರಹಾಮನು ಸುನ್ನತಿ ಮಾಡಿಸಿಕೊಂಡಾಗ ತೊಂಭತ್ತೊಂಭತ್ತು ವರ್ಷದವನಾಗಿದ್ದನು.


ಎರಡನೆಯ ಮಗು ಹುಟ್ಟಿದಾಗ ಅದು ಏಸಾವನ ಹಿಮ್ಮಡಿಯನ್ನು ಗಟ್ಟಿಯಾಗಿ ಹಿಡಿದುಕೊಂಡಿತ್ತು. ಆದ್ದರಿಂದ ಆ ಮಗುವಿಗೆ “ಯಾಕೋಬ” ಎಂದು ಹೆಸರಿಡಲಾಯಿತು. ಯಾಕೋಬ ಮತ್ತು ಏಸಾವ ಹುಟ್ಟಿದಾಗ ಇಸಾಕನಿಗೆ ಅರವತ್ತು ವರ್ಷ ವಯಸ್ಸಾಗಿತ್ತು.


“ನಿನಗೆ ಗಂಡುಮಗು ಹುಟ್ಟಿದೆ” ಎಂಬ ಸಮಾಚಾರವನ್ನು ನನ್ನ ತಂದೆಗೆ ತಿಳಿಸಿ ಅವನಿಗೆ ಅತ್ಯಾನಂದವನ್ನು ಉಂಟುಮಾಡಿದವನು ಶಪಿಸಲ್ಪಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು