ಆದಿಕಾಂಡ 21:7 - ಪರಿಶುದ್ದ ಬೈಬಲ್7 ಅಬ್ರಹಾಮನಿಗೆ ಸಾರಳಲ್ಲಿ ಮಗನು ಹುಟ್ಟುತ್ತಾನೆಂದು ಯಾರೂ ಯೋಚಿಸಿರಲಿಲ್ಲ. ಅಬ್ರಹಾಮನು ವೃದ್ಧನಾಗಿದ್ದರೂ ಈಗ ನಾನು ಅವನಿಗೆ ಒಬ್ಬ ಮಗನನ್ನು ಕೊಟ್ಟಿದ್ದೇನೆ” ಅಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಸಾರಳೂ ಮಕ್ಕಳಿಗೆ ಮೊಲೆ ಕುಡಿಸುವಳೆಂದು ಯಾರಾದರೂ ಅಬ್ರಹಾಮನಿಗೆ ಹೇಳಲು ಸಾಧ್ಯವಿತ್ತೇ? ಆದರೆ ದೇವರ ಚಿತ್ತದಿಂದ ನನ್ನ ಮುಪ್ಪಿನಲ್ಲಿ ಮತ್ತು ಅಬ್ರಹಾಮನ ಮುಪ್ಪಿನಲ್ಲೇ ಅವನಿಗೆ ಮಗನನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅದೂ ಅಲ್ಲದೆ: “ಈಪರಿ ಪೇಳುತ್ತಿದ್ದರಾರು ಅಬ್ರಹಾಮನಿಗೆ? 'ಕುಡಿಸುವಳು ಸಾರಳೂ ಮೊಲೆ ಹಾಲನ್ನು ಮಕ್ಕಳಿಗೆ’? ಹೆತ್ತಿರುವೆ ನೋಡಿ ಮಗನನು ಮುಪ್ಪಿನಲು ಆತನಿಗೆ!” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಸಾರಳೂ ಮಕ್ಕಳಿಗೆ ಮೊಲೆ ಕುಡಿಸುವಳೆಂದು ಯಾರಾದರೂ ಅಬ್ರಹಾಮನಿಗೆ ಹೇಳುತ್ತಿದ್ದರೋ? ಆದರೂ ಅವನ ಮುಪ್ಪಿನಲ್ಲೇ ಅವನಿಗೆ ಮಗನನ್ನು ಹೆತ್ತಿದ್ದೇನಷ್ಟೆ ಎಂದು ಹೇಳಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಸಾರಳು ಮಕ್ಕಳಿಗೆ ಹಾಲು ಕುಡಿಸುವಳೆಂದು ಅಬ್ರಹಾಮನಿಗೆ ಯಾರು ಹೇಳುತ್ತಿದ್ದರು? ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು,” ಎಂದಳು. ಅಧ್ಯಾಯವನ್ನು ನೋಡಿ |