ಆದಿಕಾಂಡ 21:8 - ಪರಿಶುದ್ದ ಬೈಬಲ್8 ಇಸಾಕನು ಬೆಳೆದು ಊಟಮಾಡುವಷ್ಟು ದೊಡ್ಡವನಾದನು. ಆಗ ಅಬ್ರಹಾಮನು ಒಂದು ದೊಡ್ಡ ಔತಣವನ್ನು ಮಾಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆ ಕೂಸು ಬೆಳೆದು ಮೊಲೆಬಿಟ್ಟಿತು. ಇಸಾಕನು ಮೊಲೆ ಬಿಟ್ಟ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕ್ರಮೇಣ ಆ ಮಗು ಬೆಳೆದು ಹಾಲು ಕುಡಿಯುವುದನ್ನು ಬಿಟ್ಟಿತು. ಇಸಾಕನು ಮೊಲೆಬಿಟ್ಟ ಆ ದಿನದಂದು ಅಬ್ರಹಾಮನು ದೊಡ್ಡ ಔತಣವನ್ನು ಏರ್ಪಡಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆ ಕೂಸು ಬೆಳೆದು ಮೊಲೆಬಿಟ್ಟಿತು. ಇಸಾಕನು ಮೊಲೆಬಿಟ್ಟ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇಸಾಕನು ಬೆಳೆದು ಬಾಲಕನಾಗಿ ತಾಯಿಯ ಹಾಲು ಕುಡಿಯುವುದನ್ನು ಬಿಟ್ಟನು. ಆ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣ ಮಾಡಿಸಿದನು. ಅಧ್ಯಾಯವನ್ನು ನೋಡಿ |
ಸೊಲೊಮೋನನು ಎಚ್ಚರಗೊಂಡನು. ದೇವರು ಕನಸಿನಲ್ಲಿ ತನ್ನೊಡನೆ ಮಾತನಾಡಿದನೆಂಬುದು ಅವನಿಗೆ ತಿಳಿಯಿತು. ನಂತರ ಸೊಲೊಮೋನನು ಜೆರುಸಲೇಮಿಗೆ ಹೋಗಿ, ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಎದುರಿನಲ್ಲಿ ನಿಂತುಕೊಂಡನು. ಸೊಲೊಮೋನನು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಅನಂತರ ಅವನು ತನ್ನ ಆಳ್ವಿಕೆಗೆ ಸಹಾಯ ಮಾಡಿದ ಎಲ್ಲ ನಾಯಕರಿಗೆ ಮತ್ತು ಅಧಿಕಾರಿಗಳಿಗೆ ಒಂದು ಔತಣವನ್ನೇರ್ಪಡಿಸಿದನು.