ಆದಿಕಾಂಡ 21:9 - ಪರಿಶುದ್ದ ಬೈಬಲ್9 ಮೊದಲು, ಈಜಿಪ್ಟಿನ ಸೇವಕಿಯಾದ ಹಾಗರಳಲ್ಲಿ ಒಬ್ಬ ಮಗನು ಹುಟ್ಟಿದ್ದನು. ಅವನಿಗೂ ಅಬ್ರಹಾಮನು ತಂದೆಯಾಗಿದ್ದನು. ಆದರೆ ಆ ಮೊದಲನೆ ಮಗನು ಇಸಾಕನಿಗೆ ತೊಂದರೆ ಕೊಡುವುದನ್ನು ಸಾರಳು ಗಮನಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆದರೆ ಐಗುಪ್ತಳಾದ ಹಾಗರಳಲ್ಲಿ ಅಬ್ರಹಾಮನಿಗೆ ಹುಟ್ಟಿದ್ದ ಮಗನು ಇಸಾಕನ ವಿಷಯದಲ್ಲಿ ಹಾಸ್ಯಮಾಡುವುದನ್ನು ಕಂಡು ಸಾರಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಈಜಿಪ್ಟಿನ ಹಾಗರಳಿಂದ ಅಬ್ರಹಾಮನಿಗೆ ಹುಟ್ಟಿದ ಹುಡುಗನು ತನ್ನ ಮಗ ಇಸಾಕನೊಡನೆ ನಕ್ಕುನಲಿದಾಡುವುದನ್ನು ಸಾರಳು ಕಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆದರೆ ಐಗುಪ್ತ್ಯಳಾದ ಹಾಗರಳಲ್ಲಿ ಅಬ್ರಹಾಮನಿಗೆ ಹುಟ್ಟಿದ ಮಗನು ನಗುವದನ್ನು ಸಾರಳು ಕಂಡು ಅಬ್ರಹಾಮನಿಗೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಈಜಿಪ್ಟಿನವಳಾದ ಹಾಗರಳಿಗೆ ಅಬ್ರಹಾಮನಿಂದ ಜನಿಸಿದ ಮಗನು ಹಾಸ್ಯ ಮಾಡುವುದನ್ನು ಸಾರಳು ನೋಡಿ, ಅಧ್ಯಾಯವನ್ನು ನೋಡಿ |
ಜೆರುಸಲೇಮ್ ಹಿಂದಿನ ದಿನಗಳ ಬಗ್ಗೆ ಯೋಚಿಸುತ್ತಾಳೆ; ತಾನು ಮನೆಯನ್ನು ಕಳೆದುಕೊಂಡ ಮತ್ತು ಹಿಂಸೆಗೊಳಗಾದ ಕಾಲವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಹಿಂದೆ ಅವಳಿಗಿದ್ದ ಎಲ್ಲ ಭೋಗ್ಯ ವಸ್ತುಗಳನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಹಳೆಯ ಕಾಲದಲ್ಲಿ ಲಭ್ಯವಿದ್ದ ಎಲ್ಲ ಉತ್ತಮ ವಸ್ತುಗಳನ್ನು ಅವಳು ಸ್ಮರಿಸಿಕೊಳ್ಳುತ್ತಾಳೆ. ತನ್ನ ಜನರನ್ನು ವೈರಿಗಳು ವಶಪಡಿಸಿಕೊಂಡ ಸಂಗತಿಯನ್ನು ಅವಳು ಸ್ಮರಿಸುತ್ತಾಳೆ. ಆಗ ತನಗೆ ಸಹಾಯ ಮಾಡಲು ಯಾರೂ ಇರಲಿಲ್ಲವೆಂಬುದನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಅವಳ ಶತ್ರುಗಳು ಅವಳನ್ನು ನೋಡಿ ನಕ್ಕರು. ಅವಳು ಹಾಳಾದುದನ್ನು ನೋಡಿ ಅವರು ನಕ್ಕರು.