Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:1 - ಪರಿಶುದ್ದ ಬೈಬಲ್‌

1 ಇವುಗಳಾದ ಮೇಲೆ, ದೇವರು ಅಬ್ರಹಾಮನ ನಂಬಿಕೆಯನ್ನು ಪರೀಕ್ಷಿಸಲು ನಿರ್ಧರಿಸಿ, “ಅಬ್ರಹಾಮನೇ!” ಎಂದು ಕರೆದನು. ಅಬ್ರಹಾಮನು, “ಇಗೋ ಇದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರೀಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಈ ಘಟನೆಗಳಾದ ಬಳಿಕ ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕೋಸ್ಕರ, “ಅಬ್ರಹಾಮನೇ,” ಎಂದು ಕರೆದರು. ಅವನು “ಇಗೋ, ಸಿದ್ಧನಿದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರಿಶೋಧಿಸಿದನು. ಹೇಗಂದರೆ ಆತನು ಅವನನ್ನು - ಅಬ್ರಹಾಮನೇ ಎಂದು ಕರೆಯಲು ಅವನು - ಇಗೋ, ಇದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕೆಲವು ಕಾಲದ ನಂತರ, ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕಾಗಿ ಅವನಿಗೆ, “ಅಬ್ರಹಾಮನೇ,” ಎಂದು ಕರೆದರು. ಅದಕ್ಕವನು, “ಇಗೋ, ಇಲ್ಲಿದ್ದೇನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:1
24 ತಿಳಿವುಗಳ ಹೋಲಿಕೆ  

ದೇವರು ಅಬ್ರಹಾಮನ ನಂಬಿಕೆಯನ್ನು ಪರೀಕ್ಷಿಸಿದನು. ಇಸಾಕನನ್ನು ಯಜ್ಞವಾಗಿ ಸಮರ್ಪಿಸೆಂದು ದೇವರು ಅವನಿಗೆ ಹೇಳಿದನು. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ ವಿಧೇಯನಾದನು. ದೇವರು ಅವನಿಗೆ, “ನಿನ್ನ ಸಂತತಿಗಳವರು ಇಸಾಕನ ಮೂಲಕ ಬರುವರು” ಎಂದು ಮೊದಲೇ ವಾಗ್ದಾನ ಮಾಡಿದ್ದನು. ಆದರೂ ತನ್ನ ಒಬ್ಬನೇ ಮಗನನ್ನು ಅರ್ಪಿಸಲು ಅವನು ಸಿದ್ಧನಾಗಿದ್ದನು.


ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.


ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.


ಅಬ್ರಹಾಮನು ನಮ್ಮ ಪಿತೃ. ಅವನು ತನ್ನ ಕ್ರಿಯೆಗಳಿಂದ ನೀತಿವಂತನಾದನು. ಅವನು ಯಜ್ಞವೇದಿಕೆಯ ಮೇಲೆ ತನ್ನ ಮಗನಾದ ಇಸಾಕನನ್ನು ದೇವರಿಗೆ ಅರ್ಪಿಸಿದನು.


ಎಲ್ಲಾ ಜನರಿಗೆ ಬರುವಂತೆ ನಿಮಗೂ ಶೋಧನೆಗಳು ಬರುತ್ತವೆ. ಆದರೆ ದೇವರು ನಂಬಿಗಸ್ತನಾಗಿದ್ದಾನೆ. ನೀವು ಸಹಿಸಿಕೊಳ್ಳಲಾರದ ಶೋಧನೆಯನ್ನು ಆತನು ನಿಮಗೆ ಬರಗೊಡಿಸುವುದಿಲ್ಲ. ಶೋಧನೆಗಳು ಬಂದಾಗ, ಅವುಗಳಿಂದ ಪಾರಾಗುವ ಮಾರ್ಗವನ್ನು ಸಹ ದೇವರು ನಿಮಗೆ ಒದಗಿಸುತ್ತಾನೆ. ಆಗ ನೀವು ಅದನ್ನು ಸಹಿಸಿಕೊಳ್ಳುವುದಕ್ಕೆ ಶಕ್ತರಾಗುವಿರಿ.


ಜನರು ಬೆಳ್ಳಿಬಂಗಾರವನ್ನು ಬೆಂಕಿಗೆ ಹಾಕಿ ಶುದ್ಧಮಾಡುವರು. ಆದರೆ ಮನುಷ್ಯರ ಹೃದಯಗಳನ್ನು ಶುದ್ಧಮಾಡುವವನು ಯೆಹೋವನೇ.


ನಿಮ್ಮ ಪೂರ್ವಿಕರು ನೋಡಿಲ್ಲದ ಮನ್ನವನ್ನು ಯೆಹೋವನು ನಿಮಗೆ ಮರುಭೂಮಿಯಲ್ಲಿ ತಿನ್ನಲು ಕೊಟ್ಟನು. ಯೆಹೋವನು ನಿಮ್ಮನ್ನು ಪರೀಕ್ಷಿಸಿದನು. ನೀವು ಒಳ್ಳೆಯ ಫಲಭರಿತವಾದ ಜೀವಿತವನ್ನು ನಡೆಸಬೇಕೆಂದು ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿದನು.


ಮೋಶೆಯು ಪೊದೆಯನ್ನು ನೋಡಲು ಬರುತ್ತಿರುವುದನ್ನು ಯೆಹೋವನು ನೋಡಿದನು. ದೇವರು ಆ ಪೊದೆಯೊಳಗಿಂದ, “ಮೋಶೆ, ಮೋಶೆ!” ಎಂದು ಕರೆದನು. ಅದಕ್ಕೆ ಮೋಶೆ, “ಇಗೋ ಇದ್ದೇನೆ” ಅಂದನು.


ಯೆಹೋವನ ದೂತನು ಪರಲೋಕದಿಂದ, “ಅಬ್ರಹಾಮನೇ, ಅಬ್ರಹಾಮನೇ!” ಎಂದು ಕರೆದನು. ಅಬ್ರಹಾಮನು, “ಇಗೋ ಇದ್ದೇನೆ” ಎಂದು ಉತ್ತರಿಸಿದನು.


ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, “ಅಪ್ಪಾ” ಎಂದು ಕರೆದನು. ಅಬ್ರಹಾಮನು, “ಏನು ಮಗನೇ?” ಎಂದು ಉತ್ತರಿಸಿದನು. ಇಸಾಕನು, “ಕಟ್ಟಿಗೆ ಮತ್ತು ಬೆಂಕಿ ನನಗೆ ಕಾಣಿಸುತ್ತಿವೆ. ಆದರೆ ಯಜ್ಞಕ್ಕೆ ಬೇಕಾದ ಕುರಿಮರಿ ಎಲ್ಲಿ?” ಎಂದು ಕೇಳಿದನು.


ಆಗ ನಾನು ನನ್ನ ಒಡೆಯನಾದ ಯೆಹೋವನ ಸ್ವರವನ್ನು ಕೇಳಿದೆನು. ಆತನು, “ನಾನು ಯಾರನ್ನು ಕಳುಹಿಸಲಿ? ನಮಗೋಸ್ಕರ ಯಾರು ಹೋಗುವರು?” ಎಂದು ಕೇಳಿದನು. ಆಗ ನಾನು, “ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದು ಹೇಳಿದೆನು.


ಒಂದು ಸಾರಿ ಬಾಬಿಲೋನಿನವರು ಹಿಜ್ಕೀಯನ ಬಳಿಗೆ ದೂತರನ್ನು ಕಳುಹಿಸಿದರು. ಅವರು ದೇಶದಲ್ಲಿ ಆದ ಅದ್ಭುತ ವಿಷಯದ ಬಗ್ಗೆ ವಿಚಾರಿಸಿದರು. ಅವರು ಹಿಜ್ಕೀಯನ ಬಳಿಗೆ ಬಂದಾಗ ದೇವರು ಅವನನ್ನು ಪರೀಕ್ಷಿಸುವುದಕ್ಕಾಗಿಯೂ ಅವನ ಹೃದಯದಲ್ಲಿದ್ದ ಪ್ರತಿಯೊಂದು ಆಲೋಚನೆಯನ್ನು ತಿಳಿದುಕೊಳ್ಳುವುದಕ್ಕಾಗಿಯೂ ಅವನನ್ನು ತೊರೆದುಬಿಟ್ಟನು.


ಆಗ ಯೆಹೋವನು ಮೋಶೆಗೆ, “ಆಕಾಶದಿಂದ ನಿಮಗೋಸ್ಕರ ರೊಟ್ಟಿ ಸುರಿಯುವಂತೆ ಮಾಡುವೆನು. ಪ್ರತಿದಿನ ಅವರು ಹೊರಗೆ ಹೋಗಿ, ತಮಗೆ ಆ ದಿನದಲ್ಲಿ ತಿನ್ನಲು ಬೇಕಾದ ಆಹಾರವನ್ನು ಕೂಡಿಸಿಕೊಳ್ಳಬೇಕು. ನಾನು ಹೇಳುವುದನ್ನು ಅವರು ಮಾಡುತ್ತಾರೊ ಇಲ್ಲವೊ ಎಂದು ನೋಡಲು ನಾನು ಇದನ್ನು ಮಾಡುವೆನು.


ಅಂಥ ಮನುಷ್ಯನಿಗೆ ಕಿವಿಗೊಡಬೇಡಿ. ದೇವರು ನಿಮ್ಮನ್ನು ಪರೀಕ್ಷೆ ಮಾಡುತ್ತಿದ್ದಾನೆ. ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸುತ್ತೀರೋ ಇಲ್ಲವೋ ಎಂದು ನಿಮ್ಮನ್ನು ಪರೀಕ್ಷಿಸುವನು.


ಇಸ್ರೇಲರು ತಮ್ಮ ಪೂರ್ವಿಕರಂತೆ ಯೆಹೋವನ ಆಜ್ಞೆಗಳನ್ನು ಪಾಲಿಸುತ್ತಾರೆಯೇ ಎಂಬುದನ್ನು ನಾನು ಆ ಜನಾಂಗಗಳ ಮೂಲಕ ಪರೀಕ್ಷಿಸಿ ನೋಡುತ್ತೇನೆ” ಎಂದನು.


ಯೆಹೋವನು ಇಸ್ರೇಲರ ಮೇಲೆ ಮತ್ತೆ ಕೋಪಗೊಂಡು ಇಸ್ರೇಲರ ವಿರುದ್ಧನಾಗುವಂತೆ ದಾವೀದನನ್ನು ಪ್ರೇರೇಪಿಸಿದನು. ದಾವೀದನು, “ಇಸ್ರೇಲಿನ ಮತ್ತು ಯೆಹೂದದ ಜನಗಣತಿ ಮಾಡಿರಿ” ಎಂದು ಆಜ್ಞಾಪಿಸಿದನು.


ಯೆಹೋವನು ನೀತಿವಂತರಿಗಾಗಿ ಹುಡುಕುವನು. ಆದರೆ ಆತನು ದುಷ್ಟರನ್ನೂ ಹಿಂಸಕರನ್ನೂ ತಿರಸ್ಕರಿಸುವನು.


ಈ ಸಂಗತಿಗಳಾದ ಮೇಲೆ, ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ಸಂದೇಶ ಬಂದಿತು. ದೇವರು ಅವನಿಗೆ, “ಅಬ್ರಾಮನೇ ಭಯಪಡಬೇಡ; ನಾನೇ ನಿನಗೆ ಗುರಾಣಿಯಾಗಿದ್ದೇನೆ. ನಾನು ನಿನಗೆ ದೊಡ್ಡ ಪ್ರತಿಫಲವನ್ನು ಕೊಡುತ್ತೇನೆ” ಎಂದು ಹೇಳಿದನು.


ಅಬ್ರಹಾಮನಿಗೆ ತುಂಬ ದುಃಖವಾಯಿತು. ಅವನು ತನ್ನ ಮಗನಾದ ಇಷ್ಮಾಯೇಲನ ಬಗ್ಗೆ ಚಿಂತಿಸತೊಡಗಿದನು.


ಇಸ್ರೇಲನು ಯೋಸೇಫನಿಗೆ, “ಶೆಕೆಮಿಗೆ ಹೋಗು. ನಿನ್ನ ಅಣ್ಣಂದಿರು ಅಲ್ಲಿ ನನ್ನ ಆಡುಕುರಿಗಳನ್ನು ಮೇಯಿಸುತ್ತಿದ್ದಾರೆ” ಎಂದು ಹೇಳಿದನು. ಯೋಸೇಫನು, “ಸರಿ, ಹೋಗುವೆನು” ಎಂದು ಉತ್ತರಿಸಿದನು.


ಆ ರಾತ್ರಿ ದೇವರು ಕನಸಿನಲ್ಲಿ ಅವನೊಂದಿಗೆ ಮಾತನಾಡಿದನು. ದೇವರು ಅವನನ್ನು, “ಯಾಕೋಬನೇ, ಯಾಕೋಬನೇ” ಎಂದು ಕರೆದನು. ಅದಕ್ಕೆ ಇಸ್ರೇಲನು, “ಇಗೋ, ಇದ್ದೇನೆ” ಎಂದು ಉತ್ತರಕೊಟ್ಟನು.


ಯೆಹೋವನು ಸಮುವೇಲನನ್ನು ಕರೆದನು. ಸಮುವೇಲನು, “ಇಗೋ, ಇಲ್ಲಿದ್ದೇನೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು