ಆದಿಕಾಂಡ 22:11 - ಪರಿಶುದ್ದ ಬೈಬಲ್11 ಯೆಹೋವನ ದೂತನು ಪರಲೋಕದಿಂದ, “ಅಬ್ರಹಾಮನೇ, ಅಬ್ರಹಾಮನೇ!” ಎಂದು ಕರೆದನು. ಅಬ್ರಹಾಮನು, “ಇಗೋ ಇದ್ದೇನೆ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಯೆಹೋವನ ದೂತನು ಆಕಾಶದೊಳಗಿನಿಂದ, “ಅಬ್ರಹಾಮನೇ, ಅಬ್ರಹಾಮನೇ” ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ, ಇದ್ದೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆದರೆ ಸರ್ವೇಶ್ವರನ ದೂತನು ಆಕಾಶದಿಂದ, "ಅಬ್ರಹಾಮನೇ, ಹೇ ಅಬ್ರಹಾಮನೇ" ಎಂದು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ ಸಿದ್ಧನಿದ್ದೇನೆ” ಎಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕೈಚಾಚಿ ಕತ್ತಿಯನ್ನು ಹಿಡಿದುಕೊಳ್ಳಲು ಯೆಹೋವನ ದೂತನು ಆಕಾಶದೊಳಗಿಂದ - ಅಬ್ರಹಾಮನೇ, ಅಬ್ರಹಾಮನೇ ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು - ಇಗೋ, ಇದ್ದೇನೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಯೆಹೋವ ದೇವರ ದೂತನು ಆಕಾಶದೊಳಗಿಂದ, “ಅಬ್ರಹಾಮನೇ, ಅಬ್ರಹಾಮನೇ,” ಎಂದು ಅವನನ್ನು ಕರೆದನು. ಅವನು, “ಇಲ್ಲಿ ಇದ್ದೇನೆ,” ಎಂದನು. ಅಧ್ಯಾಯವನ್ನು ನೋಡಿ |
ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”
ಯೆಹೋವನ ದೂತನು ಗಿಲ್ಗಾಲ್ ನಗರದಿಂದ ಬೋಕೀಮ್ ನಗರದವರೆಗೆ ಹೋದನು. ಆ ದೂತನು ಇಸ್ರೇಲರಿಗೆ ಯೆಹೋವನ ಒಂದು ಸಂದೇಶವನ್ನು ತಿಳಿಸಿದನು. ಆ ಸಂದೇಶವು ಹೀಗೆದೆ: “ನಾನು ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ಹೊರಗೆತಂದೆ. ನಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ‘ನಾನು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದಿಗೂ ಮುರಿಯುವುದಿಲ್ಲ.