Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:13 - ಪರಿಶುದ್ದ ಬೈಬಲ್‌

13 ಅಬ್ರಹಾಮನು ಕಣ್ಣೆತ್ತಿ ನೋಡಿದಾಗ ಒಂದು ಟಗರನ್ನು ಕಂಡನು. ಆ ಟಗರಿನ ಕೊಂಬುಗಳು ಒಂದು ಪೊದೆಗೆ ಸಿಕ್ಕಿಕೊಂಡಿದ್ದವು. ಕೂಡಲೇ ಅವನು ಹೋಗಿ, ಆ ಟಗರನ್ನು ಎಳೆದುಕೊಂಡು ಬಂದು ದೇವರಿಗೆ ತನ್ನ ಮಗನ ಬದಲಾಗಿ ಯಜ್ಞವಾಗಿ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಬ್ರಹಾಮನು ಕಣ್ಣೆತ್ತಿ ನೋಡಲಾಗಿ ತನ್ನ ಹಿಂದೆ, ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿ ಹಾಕಿಕೊಂಡಿರುವುದನ್ನು ಕಂಡನು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಹೋಮಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಬ್ರಹಾಮನು ಕಣ್ಣೆತ್ತಿ ನೋಡಿದ. ತನ್ನ ಹಿಂದುಗಡೆ ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿಕೊಂಡಿತ್ತು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಅದನ್ನು ದಹನಬಲಿಯನ್ನಾಗಿ ಅರ್ಪಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅಬ್ರಹಾಮನು ಕಣ್ಣೆತ್ತಿ ನೋಡುವಾಗ ತನ್ನ ಹಿಂದುಗಡೆ ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿಕೊಂಡಿತ್ತು. ಅವನು ಹೋಗಿ ಅದನ್ನು ಹಿಡಿದುತಂದು ತನ್ನ ಮಗನಿಗೆ ಬದಲಾಗಿ ಹೋಮಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅಬ್ರಹಾಮನು ಕಣ್ಣೆತ್ತಿ ನೋಡಿದಾಗ, ಅವನ ಹಿಂದೆ ಒಂದು ಟಗರು ಕೊಂಬುಗಳಿಂದ ಪೊದೆಯಲ್ಲಿ ಸಿಕ್ಕಿಕೊಂಡಿತ್ತು. ಅಬ್ರಹಾಮನು ಹೋಗಿ ಆ ಟಗರನ್ನು ತೆಗೆದುಕೊಂಡು, ಅದನ್ನು ತನ್ನ ಮಗನಿಗೆ ಬದಲಾಗಿ ದಹನಬಲಿಯಾಗಿ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:13
10 ತಿಳಿವುಗಳ ಹೋಲಿಕೆ  

ಎಲ್ಲಾ ಜನರಿಗೆ ಬರುವಂತೆ ನಿಮಗೂ ಶೋಧನೆಗಳು ಬರುತ್ತವೆ. ಆದರೆ ದೇವರು ನಂಬಿಗಸ್ತನಾಗಿದ್ದಾನೆ. ನೀವು ಸಹಿಸಿಕೊಳ್ಳಲಾರದ ಶೋಧನೆಯನ್ನು ಆತನು ನಿಮಗೆ ಬರಗೊಡಿಸುವುದಿಲ್ಲ. ಶೋಧನೆಗಳು ಬಂದಾಗ, ಅವುಗಳಿಂದ ಪಾರಾಗುವ ಮಾರ್ಗವನ್ನು ಸಹ ದೇವರು ನಿಮಗೆ ಒದಗಿಸುತ್ತಾನೆ. ಆಗ ನೀವು ಅದನ್ನು ಸಹಿಸಿಕೊಳ್ಳುವುದಕ್ಕೆ ಶಕ್ತರಾಗುವಿರಿ.


ಆದರೆ ನೀವು ತಪ್ಪು ಕಾರ್ಯಮಾಡಿದರೆ, ದುಷ್ಟತ್ವದಲ್ಲಿ ಜೀವಿಸಿದರೆ ನಿಮ್ಮ ಹಿಂದಿನಿಂದ ಒಂದು ಸ್ವರ, “ಇದು ಸರಿಯಾದ ಮಾರ್ಗ. ಈ ಮಾರ್ಗದಲ್ಲಿ ಮುಂದುವರಿಯಿರಿ” ಎಂದು ಹೇಳುವುದು ಕೇಳಿಸುವದು.


ಅಬ್ರಹಾಮನು, “ಮಗನೇ, ಯಜ್ಞಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದು ಹೇಳಿದನು. ಹೀಗೆ ಅಬ್ರಹಾಮನು ಮತ್ತು ಅವನ ಮಗನು ಆ ಸ್ಥಳಕ್ಕೆ ಹೊರಟು


ಯೆಹೋವನ ದೂತನು, “ನಿನ್ನ ಮಗನನ್ನು ವಧಿಸಬೇಡ. ಅವನಿಗೆ ನೋವು ಮಾಡಬೇಡ. ನೀನು ನನಗೋಸ್ಕರವಾಗಿ ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೂ ಹಿಂಜರಿಯಲಿಲ್ಲ; ಆದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ತೋರಿಬಂದಿದೆ” ಎಂದು ಹೇಳಿದನು.


ಅಲ್ಲದೆ ಆ ಸ್ಥಳಕ್ಕೆ “ಯೆಹೋವ ಯೀರೆ” ಎಂದು ಹೆಸರಿಟ್ಟನು. ಇಂದಿಗೂ ಜನರು, “ಯೆಹೋವನ ಬೆಟ್ಟದಲ್ಲಿ ಒದಗಿಸಲ್ಪಡುವುದು” ಎಂದು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು