ಆದಿಕಾಂಡ 22:16 - ಪರಿಶುದ್ದ ಬೈಬಲ್16 “ನೀನು ನನಗೋಸ್ಕರವಾಗಿ ನಿನ್ನ ಒಬ್ಬನೇ ಮಗನನ್ನು ವಧಿಸಲು ಸಿದ್ಧನಾಗಿದ್ದೆ. ಆದ್ದರಿಂದ ನಾನು ನಿನಗೆ ಈ ವಾಗ್ದಾನವನ್ನು ಮಾಡುತ್ತೇನೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೆ ಹಿಂದೆಗೆಯದೆ ಹೋದುದರಿಂದ, ಯೆಹೋವನಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಸರ್ವೇಶ್ವರನ ವಾಕ್ಯವನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಬಲಿಕೊಡಲು ಹಿಂತೆಗೆಯದೆ ಹೋದುದರಿಂದ ನಾನು ನಿನ್ನನ್ನು ತಪ್ಪದೆ ಆಶೀರ್ವದಿಸುತ್ತೇನೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೆಹೋವನು ನುಡಿದದ್ದನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವದಕ್ಕೆ ಹಿಂದೆಗೆಯದೆ ಹೋದದ್ದರಿಂದ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ನೀನು ಈ ಕಾರ್ಯವನ್ನು ಮಾಡಿ, ನಿನ್ನ ಒಬ್ಬನೇ ಮಗನನ್ನು ಸಹ ನನಗೆ ಕೊಡುವುದಕ್ಕೆ ಹಿಂಜರಿಯದೆ ಇದ್ದುದರಿಂದ, ಯೆಹೋವ ದೇವರಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ, ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆನ್ನುತ್ತಾನೆ, “ನನ್ನ ಸ್ವಸಾಮರ್ಥ್ಯದಿಂದ ನಾನು ಈ ಪ್ರಮಾಣ ಮಾಡುವೆನು. ನಾನು ಆಣೆಯಿಟ್ಟು ಹೇಳುವೆನು. ಬೊಚ್ರ ನಗರವನ್ನು ನಾಶಮಾಡಲಾಗುವುದು. ಆ ನಗರ ಒಂದು ಹಾಳು ದಿಬ್ಬವಾಗುವುದು. ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಶಪಿಸುವಾಗ ಜನರು ‘ಬೊಚ್ರದಂತೆ ಹಾಳಾಗಲಿ’ ಎಂದು ಈ ನಗರದ ಉದಾಹರಣೆಯನ್ನು ಕೊಡುವರು. ಜನರು ಈ ನಗರವನ್ನು ಅವಮಾನ ಮಾಡುವರು. ಬೊಚ್ರ ನಗರದ ಸುತ್ತಮುತ್ತಲಿನ ಪಟ್ಟಣಗಳು ಶಾಶ್ವತವಾಗಿ ಹಾಳುಬೀಳುವವು.”
ನಿನ್ನ ಸೇವೆಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಯಾಕೋಬನನ್ನು ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಆ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ವಾಗ್ದಾನ ಮಾಡಿದಂತೆ ಈ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ಈ ದೇಶ ಎಂದೆಂದಿಗೂ ಅವರದಾಗಿರುವುದು’ ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನ ಮಾಡಿದೆಯಲ್ಲಾ” ಅಂದನು.
ಆದರೆ, ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಎಲ್ಲಾ ಯೆಹೂದ್ಯರೇ, ಯೆಹೋವನ ಸಂದೇಶವನ್ನು ಕೇಳಿರಿ. ‘ನಾನು ಆಣೆಮಾಡಿ ಹೀಗೆ ಹೇಳುತ್ತೇನೆ. ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದಿಯರಲ್ಲಿ ಯಾರೊಬ್ಬರೂ ಇನ್ನು ಮುಂದೆ ನನ್ನ ಹೆಸರಿನ ಮೇಲೆ ಆಣೆಯಿಟ್ಟು ಹೇಳಲಾರರು ಎಂದು ನಾನು ನನ್ನ ಮಹತ್ತಾದ ನಾಮದ ಮೇಲೆ ಆಣೆಯಿಟ್ಟುಕೊಂಡು ಹೇಳುತ್ತೇನೆ. ಇನ್ನು ಮುಂದೆ ಎಂದೂ ಅವರು “ದೇವರ ಆಣೆಯಾಗಿ” ಎಂದು ಹೇಳಲಾರರು.