Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:3 - ಪರಿಶುದ್ದ ಬೈಬಲ್‌

3 ಮುಂಜಾನೆ ಅಬ್ರಹಾಮನು ಎದ್ದು ಕತ್ತೆಗೆ ತಡಿ ಹಾಕಿಸಿದನು; ಇಸಾಕನನ್ನೂ ಅವನೊಂದಿಗೆ ಇಬ್ಬರು ಸೇವಕರನ್ನೂ ಕರೆದುಕೊಂಡನು; ಯಜ್ಞಕ್ಕಾಗಿ ಕಟ್ಟಿಗೆಯನ್ನು ತೆಗೆದುಕೊಂಡನು. ಬಳಿಕ ದೇವರು ಹೇಳಿದ್ದ ಸ್ಥಳಕ್ಕೆ ಅವರು ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದರಂತೆ ಮುಂಜಾನೆಯೇ ಎದ್ದು ಅಬ್ರಹಾಮನು ಕತ್ತೆಗೆ ತಡಿ ಹಾಕಿಸಿ, ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡೆಸಿ ಅದನ್ನು ತೆಗೆದುಕೊಂಡು ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಬ್ರಹಾಮನು ಮುಂಜಾನೆಯೇ ಎದ್ದು ತನ್ನ ಹೇಸರಗತ್ತೆಗೆ ತಡಿಹಾಕಿಸಿ ಹೋಮಬಲಿಗೆ ಬೇಕಾದ ಕಟ್ಟಿಗೆಯನ್ನು ಸಿಗಿದು ಸಿದ್ಧಮಾಡಿಕೊಂಡು ಸೇವಕರಿಬ್ಬರನ್ನು ಹಾಗೂ ತನ್ನ ಮಗ ಇಸಾಕನನ್ನು ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬೆಳಿಗ್ಗೆ ಅಬ್ರಹಾಮನು ಎದ್ದು ಕತ್ತೆಗೆ ತಡಿಹಾಕಿಸಿ ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡಿಸಿ ತನ್ನ ಸೇವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಬ್ರಹಾಮನು ಬೆಳಿಗ್ಗೆ ಎದ್ದು, ತನ್ನ ಕತ್ತೆಗೆ ತಡಿ ಕಟ್ಟಿ, ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗ ಇಸಾಕನನ್ನೂ, ದಹನಬಲಿಗಳಿಗಾಗಿ ಕಟ್ಟಿಗೆಗಳನ್ನೂ ತೆಗೆದುಕೊಂಡು, ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:3
16 ತಿಳಿವುಗಳ ಹೋಲಿಕೆ  

ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ತಡಮಾಡದೆ ಬೇಗನೆ ಹಿಂತಿರುಗಿದೆನು.


“ಯಾರಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆ ಅಥವಾ ತಾಯಿಯನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ. ಯಾವನಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಇಲ್ಲವೆ ಮಗಳನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ.


“ನನ್ನ ಬಳಿಗೆ ಬರುವವನು ನನ್ನನ್ನು ಪ್ರೀತಿಸುವುದಕ್ಕಿಂತಲೂ ಹೆಚ್ಚಾಗಿ ತನ್ನ ತಂದೆತಾಯಿಗಳನ್ನು, ಹೆಂಡತಿಯನ್ನು, ಮಕ್ಕಳನ್ನು, ಸಹೋದರ ಸಹೋದರಿಯರನ್ನು ಮತ್ತು ತನ್ನನ್ನು ಪ್ರೀತಿಸುವುದಾದರೆ, ಅವನು ನನ್ನ ಶಿಷ್ಯನಾಗಿರಲು ಸಾಧ್ಯವಿಲ್ಲ.


ಆತನ ಮಗನ ವಿಷಯವಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂಬುದು ದೇವರ ಚಿತ್ತವಾಗಿತ್ತು. ಆದ್ದರಿಂದ ದೇವರು ತನ್ನ ಮಗನನ್ನು ನನಗೆ ತೋರಿಸಿದನು. ಆತನು ನನ್ನನ್ನು ಕರೆದಾಗ ನಾನು ಯಾರಿಂದಲೂ ಸಲಹೆಯನ್ನಾಗಲಿ ಸಹಾಯವನ್ನಾಗಲಿ ತೆಗೆದುಕೊಳ್ಳಲಿಲ್ಲ.


ನಿನ್ನ ಕೆಲಸಕಾರ್ಯಗಳನ್ನು ನಿನ್ನಿಂದಾದಷ್ಟು ಉತ್ತಮವಾಗಿ ಮಾಡು. ಸಮಾಧಿಯಲ್ಲಿ ನಿನಗೆ ಕೆಲಸವಿಲ್ಲ. ಅಲ್ಲಿ ಆಲೋಚನೆಯಾಗಲಿ ಜ್ಞಾನವಾಗಲಿ ವಿವೇಕವಾಗಲಿ ಇರುವುದಿಲ್ಲ. ನಾವೆಲ್ಲರೂ ಮರಣದ ಆ ಸ್ಥಳಕ್ಕೆ ಹೋಗುತ್ತಿದ್ದೇವೆ.


ಮರುದಿನ ಮುಂಜಾನೆ, ಅಬ್ರಹಾಮನು ಸ್ವಲ್ಪ ಆಹಾರವನ್ನು ಮತ್ತು ಸ್ವಲ್ಪ ನೀರನ್ನು ತೆಗೆದು ಹಾಗರಳಿಗೆ ಕೊಟ್ಟನು. ಹಾಗರಳು ಅವುಗಳನ್ನು ತೆಗೆದುಕೊಂಡು ತನ್ನ ಮಗನೊಡನೆ ಅಲ್ಲಿಂದ ಹೊರಟುಹೋದಳು. ಹಾಗರಳು ಆ ಸ್ಥಳವನ್ನು ಬಿಟ್ಟು ಬೇರ್ಷೆಬದ ಮರಳುಗಾಡಿನಲ್ಲಿ ಅಲೆಯತೊಡಗಿದಳು.


ಅದೇ ದಿನದಲ್ಲಿ ಅಬ್ರಹಾಮನು ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಸೇವಕರಿಗೆ ಹುಟ್ಟಿದ ಗಂಡುಮಕ್ಕಳಿಗೂ ಪರದೇಶಿಯರಿಂದ ಕೊಂಡುತಂದಿದ್ದ ಸೇವಕರಿಗೂ ದೇವರು ಹೇಳಿದಂತೆಯೇ ಸುನ್ನತಿ ಮಾಡಿಸಿದನು.


ದೇವರು ತಾನು ಕೊಡುತ್ತೇನೆಂದು ವಾಗ್ದಾನ ಮಾಡಿದ್ದ ಸ್ಥಳಕ್ಕೆ ಪ್ರಯಾಣ ಮಾಡಬೇಕೆಂದು ಅಬ್ರಹಾಮನನ್ನು ಕರೆದನು. ಆ ಸ್ಥಳವು ಎಲ್ಲಿದೆಯೆಂಬುದು ಅವನಿಗೆ ತಿಳಿದಿರಲಿಲ್ಲ. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ, ದೇವರಿಗೆ ವಿಧೇಯನಾಗಿ ಪ್ರಯಾಣ ಮಾಡಲಾರಂಭಿಸಿದನು.


ಆಗ ದೇವರು ಅವನಿಗೆ, “ನಿನಗೆ ಪ್ರಿಯನಾಗಿರುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಮೊರೀಯ ದೇಶಕ್ಕೆ ಕರೆದುಕೊಂಡು ಹೋಗು. ನಾನು ನಿನಗೆ ತಿಳಿಸುವ ಬೆಟ್ಟದ ಮೇಲೆ ಅವನನ್ನು ಯಜ್ಞವನ್ನಾಗಿ ಅರ್ಪಿಸು” ಎಂದು ಹೇಳಿದನು.


ಅವರು ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಅಬ್ರಹಾಮನು ದೃಷ್ಟಿಸಿ ನೋಡಿದಾಗ ತಾವು ಹೋಗಲಿದ್ದ ಸ್ಥಳವು ದೂರದಲ್ಲಿ ಅವನಿಗೆ ಕಾಣಿಸಿತು.


ನೀನು ನನಗೆ ವಿಧೇಯನಾದದ್ದರಿಂದ ನಿನ್ನ ಸಂತತಿಗಳವರ ಮೂಲಕವಾಗಿ ಭೂಮಿಯ ಮೇಲಿರುವ ಪ್ರತಿಯೊಂದು ಜನಾಂಗವೂ ಆಶೀರ್ವಾದ ಹೊಂದುವುದು” ಎಂದು ಹೇಳಿದನು.


ಮರುದಿನ ಬೆಳಿಗ್ಗೆ ಯೆಹೋಶುವನು ಎಲ್ಲ ಜನರನ್ನು ಒಂದು ಕಡೆ ಬೇಗನೆ ಸೇರಿಸಿದನು. ಆಮೇಲೆ ಯೆಹೋಶುವನು ಮತ್ತು ಇಸ್ರೇಲಿನ ನಾಯಕರು ಜನರನ್ನು “ಆಯಿ”ಗೆ ಮುನ್ನಡೆಸಿದರು.


ಮರುದಿನ, ಬೆಳಗಿನ ಜಾವದಲ್ಲಿ ಯೆಹೋಶುವನು ಮತ್ತು ಎಲ್ಲಾ ಇಸ್ರೇಲರು ಎದ್ದು ಆಕಾಶಿಯದಿಂದ ಹೊರಟು ಜೋರ್ಡನ್ ನದಿಯವರೆಗೆ ಬಂದರು. ಅವರು ಜೋರ್ಡನ್ ನದಿಯನ್ನು ದಾಟುವ ಮೊದಲು ಅಲ್ಲಿ ಪಾಳೆಯ ಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು