ಆದಿಕಾಂಡ 22:7 - ಪರಿಶುದ್ದ ಬೈಬಲ್7 ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, “ಅಪ್ಪಾ” ಎಂದು ಕರೆದನು. ಅಬ್ರಹಾಮನು, “ಏನು ಮಗನೇ?” ಎಂದು ಉತ್ತರಿಸಿದನು. ಇಸಾಕನು, “ಕಟ್ಟಿಗೆ ಮತ್ತು ಬೆಂಕಿ ನನಗೆ ಕಾಣಿಸುತ್ತಿವೆ. ಆದರೆ ಯಜ್ಞಕ್ಕೆ ಬೇಕಾದ ಕುರಿಮರಿ ಎಲ್ಲಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹೋಗುವಾಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, “ಅಪ್ಪಾ” ಎಂದು ಕರೆಯಲು ಅಬ್ರಹಾಮನು, “ಏನು ಮಗನೇ” ಎಂದನು. ಇಸಾಕನು, “ಇಗೋ, ಬೆಂಕಿಯೂ ಕಟ್ಟಿಗೆಯೂ ಉಂಟು; ಆದರೆ ಹೋಮಕ್ಕೆ ಬೇಕಾದ ಕುರಿ ಎಲ್ಲಿ” ಎಂದು ಕೇಳಿದ್ದಕ್ಕೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹೋಗುತ್ತಾ ಇದ್ದಾಗ ಇಸಾಕನು ತಂದೆ ಅಬ್ರಹಾಮನನ್ನು, “ಅಪ್ಪಾ” ಎಂದು ಕರೆದ; “ಏನು ಮಗನೇ?” ಎಂದ ಅಬ್ರಹಾಮ. ಇಸಾಕನು, “ಬೆಂಕಿ-ಕಟ್ಟಿಗೆಯೇನೋ ಇದೆ; ಆದರೆ ದಹನಬಲಿಗೆ ಬೇಕಾದ ಕುರಿಮರಿ ಎಲ್ಲಿ?” ಎಂದು ಕೇಳಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹೋಗುವಾಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ - ಅಪ್ಪಾ ಎಂದು ಕರೆಯಲು ಅಬ್ರಹಾಮನು - ಏನು ಮಗನೇ ಅಂದನು. ಇಸಾಕನು - ಇಗೋ, ಬೆಂಕಿಯೂ ಕಟ್ಟಿಗೆಯೂ ಉಂಟು; ಆದರೆ ಹೋಮಕ್ಕೆ ಬೇಕಾದ ಕುರಿ ಎಲ್ಲಿ ಎಂದು ಕೇಳಿದ್ದಕ್ಕೆ ಅಬ್ರಹಾಮನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇಸಾಕನು ತನ್ನ ತಂದೆ ಅಬ್ರಹಾಮನಿಗೆ, “ಅಪ್ಪಾ,” ಎಂದನು. ಆಗ ಅಬ್ರಹಾಮನು, “ಏನು ಮಗನೇ?” ಎಂದನು. ಅದಕ್ಕೆ ಅವನು, “ಇಗೋ, ಬೆಂಕಿಯೂ, ಕಟ್ಟಿಗೆಯೂ ಇವೆ, ಆದರೆ ದಹನಬಲಿಗೋಸ್ಕರ ಕುರಿಮರಿಯು ಎಲ್ಲಿ?” ಎಂದನು. ಅಧ್ಯಾಯವನ್ನು ನೋಡಿ |