Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:9 - ಪರಿಶುದ್ದ ಬೈಬಲ್‌

9 ದೇವರು ತಿಳಿಸಿದ್ದ ಸ್ಥಳಕ್ಕೆ ಬಂದರು. ಅಲ್ಲಿ ಅಬ್ರಹಾಮನು ಒಂದು ಯಜ್ಞವೇದಿಕೆಯನ್ನು ಕಟ್ಟಿ ಅದರ ಮೇಲೆ ಕಟ್ಟಿಗೆಯನ್ನು ಜೋಡಿಸಿದನು; ಆಮೇಲೆ ಅವನು ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಯಜ್ಞವೇದಿಕೆಯ ಮೇಲಿದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ, ಕಟ್ಟಿಗೆಯನ್ನು ಜೋಡಿಸಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಅವನನ್ನು ಯಜ್ಞವೇದಿಯ ಮೇಲೆ ಇದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದೇವರು ಹೇಳಿದ ಸ್ಥಳಕ್ಕೆ ಬಂದು ಸೇರಿದಾಗ ಅಬ್ರಹಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿದ. ಕಟ್ಟಿಗೆಯನ್ನು ಅದರ ಮೇಲೆ ಒಟ್ಟಿ, ಮಗ ಇಸಾಕನ ಕೈಕಾಲುಗಳನ್ನು ಬಿಗಿದು, ಕಟ್ಟಿಗೆಗಳ ಮೇಲೆ ಅವನನ್ನು ಕೆಡವಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ ಕಟ್ಟಿಗೆಯನ್ನು ಒಟ್ಟಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಬಿಗಿದು ಅವನನ್ನು ವೇದಿಯಲ್ಲಿ ಕಟ್ಟಿಗೆಯ ಮೇಲೆ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರು ಅವನಿಗೆ ಹೇಳಿದ ಸ್ಥಳಕ್ಕೆ ಬಂದಾಗ, ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ, ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ, ತನ್ನ ಮಗ ಇಸಾಕನನ್ನು ಕಟ್ಟಿ, ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:9
23 ತಿಳಿವುಗಳ ಹೋಲಿಕೆ  

ಅಬ್ರಹಾಮನು ನಮ್ಮ ಪಿತೃ. ಅವನು ತನ್ನ ಕ್ರಿಯೆಗಳಿಂದ ನೀತಿವಂತನಾದನು. ಅವನು ಯಜ್ಞವೇದಿಕೆಯ ಮೇಲೆ ತನ್ನ ಮಗನಾದ ಇಸಾಕನನ್ನು ದೇವರಿಗೆ ಅರ್ಪಿಸಿದನು.


ಕ್ರಿಸ್ತನು ನಮ್ಮ ಪಾಪಗಳನ್ನೆಲ್ಲಾ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನೇರಿದನು. ನಾವು ಪಾಪಕ್ಕೋಸ್ಕರ ಜೀವಿಸದೆ, ನೀತಿವಂತರಾಗಿ ಜೀವಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಆತನ (ಕ್ರಿಸ್ತನ) ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಅದರಂತೆಯೇ ಕ್ರಿಸ್ತನು ಅನೇಕ ಜನರ ಪಾಪಗಳನ್ನು ತೆಗೆದುಹಾಕಲು ಒಂದು ಸಲ ಮಾತ್ರ ತನ್ನನ್ನು ಯಜ್ಞವನ್ನಾಗಿ ಅರ್ಪಿಸಿಕೊಂಡನು. ಕ್ರಿಸ್ತನು ಎರಡನೆ ಸಲ ಪ್ರತ್ಯಕ್ಷನಾಗುವುದು ಜನರ ಪಾಪನಿವಾರಣೆಗೋಸ್ಕರವಲ್ಲ. ತನಗಾಗಿ ಕಾಯುತ್ತಿರುವ ಜನರನ್ನು ಬಿಡುಗಡೆ ಮಾಡುವುದಕ್ಕಾಗಿಯಷ್ಟೇ.


ಪ್ರೀತಿಯಿಂದ ಬಾಳಿರಿ. ಕ್ರಿಸ್ತನು ನಮ್ಮನ್ನು ಪ್ರೀತಿಸಿದಂತೆ ನೀವೂ ಇತರರನ್ನು ಪ್ರೀತಿಸಿರಿ. ಕ್ರಿಸ್ತನು ನಮಗೋಸ್ಕರವಾಗಿ ತನ್ನನ್ನೇ ಪರಿಮಳದ ಕಾಣಿಕೆಯಾಗಿಯೂ ಯಜ್ಞವಾಗಿಯೂ ದೇವರಿಗೆ ಸಮರ್ಪಿಸಿಕೊಂಡನು.


ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಆ ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.”


ಅವನು ಓದುತ್ತಿದ್ದ ಪವಿತ್ರ ಗ್ರಂಥದ ಭಾಗವು ಇಂತಿದೆ: “ವಧ್ಯಸ್ಥಾನಕ್ಕೆ ಒಯ್ದ ಕುರಿಯಂತೆ ಆತನಿದ್ದನು. ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವ ಕುರಿಯಂತೆ ಆತನಿದ್ದನು. ಆತನು ಬಾಯಿ ತೆರೆಯಲಿಲ್ಲ.


ಮುಂಜಾನೆ ನಸುಕಿನಲ್ಲೇ, ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಧರ್ಮೋಪದೇಶಕರು ಮತ್ತು ಯೆಹೂದ್ಯ ಸಮಿತಿಯವರು ಸಭೆಸೇರಿ ಯೇಸುವಿಗೆ ಮಾಡಬೇಕಾದದ್ದನ್ನು ನಿರ್ಧರಿಸಿದರು. ಅವರು ಯೇಸುವನ್ನು ಬಂಧಿಸಿ, ರಾಜ್ಯಪಾಲನಾದ ಪಿಲಾತನ ಬಳಿಗೆ ಕರೆದುಕೊಂಡು ಹೋಗಿ ಅವನಿಗೆ ಒಪ್ಪಿಸಿದರು.


ಅವರು ಆತನನ್ನು ಸರಪಣಿಗಳಿಂದ ಬಂಧಿಸಿ ರಾಜ್ಯಪಾಲನಾದ ಪಿಲಾತನ ಬಳಿಗೆ ಕರೆದೊಯ್ದು ಅವನಿಗೆ ಒಪ್ಪಿಸಿದರು.


ಯೆಹೋವನೇ ದೇವರು. ಆತನು ನಮ್ಮನ್ನು ಸ್ವೀಕರಿಸಿಕೊಳ್ಳುವನು. ಯಜ್ಞಕ್ಕೋಸ್ಕರ ಕುರಿಮರಿಯನ್ನು ಕಟ್ಟಿ ಯಜ್ಞವೇದಿಕೆಯ ಕೊಂಬುಗಳ ಸಮೀಪಕ್ಕೆ ಹೊತ್ತುಕೊಂಡು ಬನ್ನಿರಿ” ಎಂದು ಯಾಜಕರು ಉತ್ತರಿಸಿದರು.


ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು. ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು.


ಆಮೇಲೆ ನೋಹನು ಯೆಹೋವನಿಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿ ಶುದ್ಧವಾದ ಕೆಲವು ಪಶುಪಕ್ಷಿಗಳನ್ನು ತೆಗೆದುಕೊಂಡು ಅವುಗಳನ್ನು ದೇವರಿಗೆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮ ಮಾಡಿದನು.


ಆಮೇಲೆ ಅಬ್ರಾಮನು ಆ ಸ್ಥಳದಿಂದ ಹೊರಟು ಬೇತೇಲಿಗೆ ಪೂರ್ವದಲ್ಲಿರುವ ಗುಡ್ಡಗಳ ಬಳಿಗೆ ಪ್ರಯಾಣ ಮಾಡಿದನು. ಅಲ್ಲಿ ಅಬ್ರಾಮನು ತನ್ನ ಗುಡಾರಗಳನ್ನು ಹಾಕಿದನು. ಪಶ್ಚಿಮಕ್ಕೆ ಬೇತೇಲ್ ಪಟ್ಟಣವಿತ್ತು, ಪೂರ್ವಕ್ಕೆ ಆಯಿ ಪಟ್ಟಣವಿತ್ತು. ಆ ಸ್ಥಳದಲ್ಲಿ ಅವನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಕೆಯನ್ನು ಕಟ್ಟಿ ಅಲ್ಲಿ ಅವನು ಯೆಹೋವನನ್ನು ಆರಾಧಿಸಿದನು.


ಆದ್ದರಿಂದ ಅಬ್ರಾಮನು ತನ್ನ ಗುಡಾರಗಳನ್ನು ಕೀಳಿಸಿ, ದೊಡ್ಡ ಮರಗಳಿರುವ ಮಮ್ರೆಯ ಸಮೀಪಕ್ಕೆ ಹೋಗಿ ವಾಸಿಸತೊಡಗಿದನು. ಇದು ಹೆಬ್ರೋನ್ ನಗರಕ್ಕೆ ಸಮೀಪದಲ್ಲಿತ್ತು. ಆ ಸ್ಥಳದಲ್ಲಿ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಯಜ್ಞವೇದಿಕೆಯನ್ನು ಕಟ್ಟಿದನು.


ಅಬ್ರಹಾಮನು, “ಮಗನೇ, ಯಜ್ಞಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದು ಹೇಳಿದನು. ಹೀಗೆ ಅಬ್ರಹಾಮನು ಮತ್ತು ಅವನ ಮಗನು ಆ ಸ್ಥಳಕ್ಕೆ ಹೊರಟು


ಬಳಿಕ ಅವನು ತನ್ನ ಮಗನನ್ನು ವಧಿಸಲು ಕತ್ತಿಯನ್ನು ಮೇಲೆತ್ತಲು.


ನಂತರ ಎಲೀಯನು ಸೌದೆಯನ್ನು ಯಜ್ಞವೇದಿಕೆಯ ಮೇಲೆ ಇಟ್ಟನು. ಅವನು ಹೋರಿಯನ್ನು ತುಂಡುತುಂಡಾಗಿ ಕತ್ತರಿಸಿದನು. ಅವನು ಆ ತುಂಡುಗಳನ್ನು ಸೌದೆಯ ಮೇಲಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು