ಆದಿಕಾಂಡ 23:11 - ಪರಿಶುದ್ದ ಬೈಬಲ್11 “ಸ್ವಾಮೀ ನಾನು ಆ ಸ್ಥಳವನ್ನೂ ಆ ಗವಿಯನ್ನೂ ನನ್ನ ಜನರ ಎದುರಿನಲ್ಲಿಯೇ ನಿನಗೆ ಕೊಡುವೆನು. ನಿನ್ನ ಹೆಂಡತಿಯನ್ನು ಅಲ್ಲಿ ಸಮಾಧಿಮಾಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ಹಾಗಲ್ಲ ಸ್ವಾಮಿ, ನನ್ನ ಮಾತನ್ನು ಲಾಲಿಸು. ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ನಿನಗೆ ದಾನವಾಗಿ ಕೊಡುತ್ತೇನೆ; ನನ್ನ ಜನರ ಮುಂದೆಯೇ ಕೊಡುತ್ತೇನೆ; ಮರಣಹೊಂದಿದ ನಿನ್ನ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ಒಡೆಯಾ, ನನ್ನ ಮಾತಿಗೆ ಸ್ವಲ್ಪ ಕಿವಿಗೊಡಿ; ಆ ಜಮೀನನ್ನೂ ಅದರಲ್ಲಿರುವ ಗವಿಯನ್ನೂ ನಿಮಗೆ ದಾನಮಾಡಿಬಿಡುತ್ತೇನೆ; ನನ್ನ ಈ ಜನರ ಮುಂದೆಯೇ ದಾನಕೊಡುತ್ತೇನೆ; ಮೃತಳಾದ ನಿಮ್ಮ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಹಾಗಲ್ಲ ಸ್ವಾಮೀ, ನನ್ನ ಮಾತನ್ನು ಲಾಲಿಸು. ಆ ಭೂವಿುಯನ್ನೂ ಅದರಲ್ಲಿರುವ ಗವಿಯನ್ನೂ ನಿನಗೆ ಸುಮ್ಮನೆ ಕೊಡುತ್ತೇನೆ; ನನ್ನ ಜನರ ಮುಂದೆಯೇ ಕೊಡುತ್ತೇನೆ; ತೀರಿಹೋದ ನಿನ್ನ ಪತ್ನಿಗೆ ಅದರಲ್ಲಿ ಸಮಾಧಿಮಾಡಬಹುದು ಎಂದು ಹೇಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ಒಡೆಯನೇ ಹಾಗಲ್ಲ, ನನ್ನ ಮಾತನ್ನು ಕೇಳು. ಆ ಹೊಲವನ್ನು ನಿನಗೆ ಕೊಡುತ್ತೇನೆ. ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ. ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ. ನಿನ್ನ ಹೆಂಡತಿಯ ಶವವನ್ನು ಹೂಳಿಡು,” ಎಂದನು. ಅಧ್ಯಾಯವನ್ನು ನೋಡಿ |
ನಾನು ಇದರ ಬಗ್ಗೆ ನಿನಗೆ ಈ ಜನರ ಸಮ್ಮುಖದಲ್ಲಿ ಮತ್ತು ನಮ್ಮ ಹಿರಿಯರ ಸಮ್ಮುಖದಲ್ಲಿ ಹೇಳಬೇಕೆಂದು ತೀರ್ಮಾನಿಸಿದ್ದೇನೆ. ನೀನು ಆ ಹೊಲವನ್ನು ಕೊಂಡುಕೊಳ್ಳ ಬಯಸಿದರೆ ಕೊಂಡುಕೋ. ನಿನಗೆ ಕೊಂಡುಕೊಳ್ಳಲು ಇಷ್ಟವಿಲ್ಲದಿದ್ದರೆ ನನಗೆ ಹೇಳು. ನಿನ್ನ ಬಳಿಕ ಆ ಹೊಲವನ್ನು ಕೊಂಡುಕೊಳ್ಳುವ ಹಕ್ಕು ನನಗಿದೆ. ನೀನು ಆ ಹೊಲವನ್ನು ಕೊಂಡುಕೊಳ್ಳದಿದ್ದರೆ ನಾನು ಕೊಂಡುಕೊಳ್ಳುತ್ತೇನೆ.” ಅದಕ್ಕೆ ಅವನು, “ಸರಿ, ನಾನೇ ಕೊಂಡುಕೊಳ್ಳುತ್ತೇನೆ.” ಎಂದನು.