Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:15 - ಪರಿಶುದ್ದ ಬೈಬಲ್‌

15 “ಸ್ವಾಮೀ, ನನ್ನ ಮಾತನ್ನು ಕೇಳು. ಆ ಸ್ಥಳದ ಬೆಲೆ ನಾನೂರು ಬೆಳ್ಳಿ ರೂಪಾಯಿಗಳಷ್ಟೇ. ಆದರೆ ನಿನಗಾಗಲಿ, ನನಗಾಗಲಿ ಆ ನಾನೂರು ರೂಪಾಯಿ ಹೆಚ್ಚೇನೂ ಅಲ್ಲ. ಸ್ಥಳವನ್ನು ತೆಗೆದುಕೊಂಡು ನಿನ್ನ ಹೆಂಡತಿಯನ್ನು ಸಮಾಧಿಮಾಡು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಸ್ವಾಮಿ, ನನ್ನ ಮಾತನ್ನು ಲಾಲಿಸು; ನಾನೂರು ಬೆಳ್ಳಿ ನಾಣ್ಯಗಳ ಬೆಲೆಬಾಳುವ ಭೂಮಿಯ ವಿಷಯದಲ್ಲಿ ನಿನಗೂ ನನಗೂ ವಾದವೇತಕ್ಕೆ? ಸಮಾಧಿಮಾಡಬಹುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾನೂರು ರೂಪಾಯಿ ಬಾಳುವ ಭೂವಿುಯ ವಿಷಯದಲ್ಲಿ ನಿನಗೂ ನನಗೂ ವಾದವೇತಕ್ಕೆ? ಸಮಾಧಿಮಾಡಬಹುದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ನನ್ನ ಒಡೆಯನೇ, ನನ್ನ ಮಾತನ್ನು ಕೇಳು. ಆ ಭೂಮಿಯು ನಾನೂರು ಬೆಳ್ಳಿಯ ನಾಣ್ಯಗಳ ಬೆಲೆಯುಳ್ಳದ್ದು, ಈ ಕುರಿತು ನಮ್ಮೊಳಗೇ ವಾದವೇಕೆ? ನಿನ್ನ ಹೆಂಡತಿಯ ಶವವನ್ನು ಹೂಳಿಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:15
6 ತಿಳಿವುಗಳ ಹೋಲಿಕೆ  

ಒಂದು ಶೆಕೆಲ್ ಇಪ್ಪತ್ತು ಗೆರಾ ಇರಬೇಕು. ಒಂದು ಮಿನವು ಅರವತ್ತು ಶೆಕೆಲ್‌ನಷ್ಟು ಇರಬೇಕು. ಅದು ಇಪ್ಪತ್ತು ಶೆಕೆಲ್ ಮತ್ತು ಇಪ್ಪತ್ತೈದು ಶೆಕೆಲ್ ಮತ್ತು ಹದಿನೈದು ಶೆಕೆಲ್‌ಗಳಿಗೆ ಸಮಾನವಾಗಿರಬೇಕು.


ಐಶ್ವರ್ಯವಂತರು ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು; ಬಡವರು ಅರ್ಧಶೆಕೆಲಿಗಿಂತ ಕಡಿಮೆ ಕೊಡಬಾರದು. ಜನರೆಲ್ಲರೂ ಈ ಕಾಣಿಕೆಯನ್ನು ಯೆಹೋವನಿಗೆ ಅರ್ಪಿಸಬೇಕು. ಇದು ನಿಮ್ಮ ಪ್ರಾಣರಕ್ಷಣೆಯ ತೆರಿಗೆಯಾಗಿದೆ.


ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನು ಅಧಿಕೃತ ಅಳತೆಗನುಸಾರವಾಗಿರುವ ಅರ್ಧಶೆಕೆಲ್ ಕಪ್ಪಕಾಣಿಕೆಯನ್ನು ಕೊಡಬೇಕು. ಈ ಅರ್ಧಶೆಕೆಲ್ ಯೆಹೋವನಿಗೆ ಕಾಣಿಕೆಯಾಗಿರುತ್ತದೆ.


ಎಫ್ರೋನನು ಅಬ್ರಹಾಮನಿಗೆ,


ಯಾಕೋಬನು ನೂರು ಬೆಳ್ಳಿನಾಣ್ಯಗಳನ್ನು ಕೊಟ್ಟು ಶೆಕೆಮನ ತಂದೆಯಾದ ಹಮೋರನ ಕುಟುಂಬದಿಂದ ಆ ಹೊಲವನ್ನು ಕೊಂಡುಕೊಂಡನು.


“ಬೆಳ್ಳಿಯ ಗಣಿಗಳು ಇವೆ; ಚಿನ್ನವನ್ನು ಶುದ್ಧೀಕರಿಸುವ ಸ್ಥಳಗಳೂ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು