ಆದಿಕಾಂಡ 23:16 - ಪರಿಶುದ್ದ ಬೈಬಲ್16 ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಅಬ್ರಹಾಮನು ಆ ಸ್ಥಳಕ್ಕಾಗಿ ನಾನೂರು ಬೆಳ್ಳಿ ರೂಪಾಯಿಗಳನ್ನು ಹಿತ್ತಿಯರ ಎದುರಿನಲ್ಲಿ ಹೇಳಿದ ಎಫ್ರೋನನಿಗೆ ಎಣಿಸಿಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ನಾನೂರು ನಾಣ್ಯಗಳನ್ನು ಅಬ್ರಹಾಮನು ವರ್ತಕರಲ್ಲಿ ಸಲ್ಲುವ ಬೆಳ್ಳಿಯಿಂದ ತೂಕ ಮಾಡಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿ, ಅವನು ಆ ಹಿತ್ತಿಯರ ಮುಂದೆ ಸೂಚಿಸಿದ ನಾನೂರು ಬೆಳ್ಳಿ ನಾಣ್ಯಗಳನ್ನು, ವ್ಯಾಪಾರಿಗಳಲ್ಲಿ ಪ್ರಚಲಿತವಾಗಿದ್ದ ಬೆಳ್ಳಿಯಿಂದ ತೂಕಮಾಡಿ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ನಾನೂರು ರೂಪಾಯಿಗಳನ್ನು ಅಬ್ರಹಾಮನು ಸಾಹುಕಾರರಲ್ಲಿ ಸಲ್ಲುವ ಬೆಳ್ಳಿಯಿಂದ ತೂಕ ಮಾಡಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿಕೊಂಡು, ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ಬೆಲೆ ಅಂದರೆ, ವರ್ತಕರಲ್ಲಿ ನಡೆಯುವ ನಾನೂರು ಬೆಳ್ಳಿ ನಾಣ್ಯಗಳನ್ನು ತೂಕಮಾಡಿ ಅವನಿಗೆ ಕೊಟ್ಟನು. ಅಧ್ಯಾಯವನ್ನು ನೋಡಿ |
ಮನೆಗೆ ಹೋಗುವಾಗ ದಾರಿಯಲ್ಲಿ ನಾವು ನಮ್ಮ ಚೀಲಗಳನ್ನು ಬಿಚ್ಚಿದಾಗ ಪ್ರತಿಯೊಂದು ಚೀಲದಲ್ಲಿಯೂ ನಾವು ಪಾವತಿಮಾಡಿದ್ದ ಹಣವನ್ನು ಕಂಡೆವು. ಆ ಹಣವು ಅಲ್ಲಿಗೆ ಹೇಗೆ ಬಂತೋ ನಮಗೆ ಗೊತ್ತಿಲ್ಲ. ಆದರೆ ಆ ಹಣವನ್ನು ನಿಮಗೆ ಕೊಡುವುದಕ್ಕಾಗಿ ನಮ್ಮೊಂದಿಗೆ ತೆಗೆದುಕೊಂಡು ಬಂದಿದ್ದೇವೆ. ಈ ಸಲ ನಾವು ಖರೀದಿ ಮಾಡಬೇಕೆಂದಿರುವ ಆಹಾರಕ್ಕೆ ಕೊಡಲು ಹೆಚ್ಚು ಹಣವನ್ನು ತಂದಿದ್ದೇವೆ” ಎಂದು ಹೇಳಿದರು.