ಆದಿಕಾಂಡ 23:2 - ಪರಿಶುದ್ದ ಬೈಬಲ್2 ಅವಳು ಕಾನಾನ್ ದೇಶದ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಮರಣಹೊಂದಿದಳು. ಅಬ್ರಹಾಮನು ಅವಳಿಗೋಸ್ಕರ ಅಲ್ಲಿ ಬಹಳವಾಗಿ ಅತ್ತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಗಾಗಿ ಗೋಳಾಡಿ ಕಣ್ಣೀರು ಸುರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇಷ್ಟು ವರ್ಷಗಳಾದ ಮೇಲೆ ಆಕೆ ಕಾನಾನ್ ನಾಡಿನ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಕಾಲವಾದಳು. ಅಬ್ರಹಾಮನು ಅಲ್ಲಿಗೆ ಬಂದು ಅವಳಿಗಾಗಿ ಕಣ್ಣೀರಿಟ್ಟು ಗೋಳಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಷ್ಟು ವರುಷ ಬದುಕಿದ ಮೇಲೆ ಆಕೆ ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಯ ನಿವಿುತ್ತ ಗೋಳಾಡಿ ಕಣ್ಣೀರು ಸುರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವಳು ಕಾನಾನ್ ದೇಶದಲ್ಲಿರುವ ಹೆಬ್ರೋನಿನಲ್ಲಿ ಅಂದರೆ ಕಿರ್ಯತ್ ಅರ್ಬದಲ್ಲಿ ಮರಣಹೊಂದಿದಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡಿದನು. ಅಧ್ಯಾಯವನ್ನು ನೋಡಿ |
ಯೋಷೀಯನ ಮಗನಾದ ಯೆಹೋಯಾಕೀಮನಿಗೆ ಯೆಹೋವನು ಹೀಗೆ ಹೇಳುವನು, “ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಗೋಳಾಡುವದಿಲ್ಲ. ಅವರು ಒಬ್ಬರಿಗೊಬ್ಬರು, ‘ನನ್ನ ಸೋದರನೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ, ನನ್ನ ಸೋದರಿಯೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ’ ಎಂದು ಹೇಳುವದಿಲ್ಲ. ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಅಳುವದಿಲ್ಲ. ಅವರು ಅವನ ಬಗ್ಗೆ ‘ಒಡೆಯನೇ, ನನ್ನ ರಾಜನೇ, ನನಗೆ ತುಂಬಾ ದುಃಖವಾಗಿದೆ’ ಎಂದು ಹೇಳುವದಿಲ್ಲ.