ಆದಿಕಾಂಡ 23:6 - ಪರಿಶುದ್ದ ಬೈಬಲ್6 “ಸ್ವಾಮೀ, ನೀನು ನಮ್ಮ ಮಹಾನಾಯಕರುಗಳಲ್ಲಿ ಒಬ್ಬನು. ತೀರಿಕೊಂಡ ನಿನ್ನ ಹೆಂಡತಿಯ ಸಮಾಧಿಗಾಗಿ ನಮ್ಮಲ್ಲಿರುವ ಸ್ಮಶಾನಗಳಲ್ಲಿ ಅತ್ಯುತ್ತಮವಾದ ಸ್ಥಳವನ್ನು ನೀನು ತೆಗೆದುಕೊಳ್ಳಬಹುದು. ನಿನ್ನ ಹೆಂಡತಿಯನ್ನು ಸಮಾಧಿಮಾಡಲು ನಮ್ಮಲ್ಲಿ ಯಾರೂ ಅಡ್ಡಿ ಮಾಡುವುದಿಲ್ಲ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ಸ್ವಾಮಿ, ನಮ್ಮ ಮಾತನ್ನು ಕೇಳು. ನೀನು ನಮಗೆ ಮಹಾ ಪ್ರಭುವಾಗಿದ್ದೀಯಷ್ಟೆ. ಮರಣಹೊಂದಿರುವ ನಿನ್ನ ಪತ್ನಿಯ ದೇಹವನ್ನು ನಮಗಿರುವ ಸಮಾಧಿಯೊಳಗೆ ಶೇಷ್ಠವಾದದ್ದರಲ್ಲಿ ಇಡಬಹುದು. ನಿನ್ನ ಹೆಂಡತಿಯ ಶವವನ್ನು ಇಡುವುದಕ್ಕೆ ನಮ್ಮೊಳಗೆ ಯಾರೂ ಸ್ಮಶಾನ ಭೂಮಿಯನ್ನು ಕೊಡುವುದಕ್ಕೆ ಹಿಂದೆಗೆಯುವುದಿಲ್ಲ” ಎಂದು ಉತ್ತರ ಕೊಡಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಒಡೆಯಾ, ನಮ್ಮ ಮಾತನ್ನು ಕೇಳು, ನೀನು ನಮ್ಮ ಮಧ್ಯದಲ್ಲಿ ಮಹಾಪ್ರಭುವಾಗಿದ್ದೀ. ನಮ್ಮ ಸಮಾಧಿಗಳೊಳಗೆ ಉತ್ತಮವಾದದ್ದರಲ್ಲಿ ನಿನ್ನ ಹೆಂಡತಿಯ ಶವವನ್ನು ಹೂಳಿಡು. ನಮ್ಮಲ್ಲಿ ಯಾರೂ ನಿನಗೆ ಸಮಾಧಿಯನ್ನು ಕೊಡುವುದಿಲ್ಲ ಎಂದು ಹೇಳಲಾರರು,” ಎಂದರು. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.