ಆದಿಕಾಂಡ 23:9 - ಪರಿಶುದ್ದ ಬೈಬಲ್9 ಮಕ್ಪೇಲದ ಗವಿಯನ್ನು ಕೊಂಡುಕೊಳ್ಳಲು ನನಗೆ ಇಷ್ಟವಿದೆ. ಅದು ಎಫ್ರೋನನದು. ಅದು ಅವನ ಜಮೀನಿನ ಅಂಚಿನಲ್ಲಿದೆ. ಅದಕ್ಕಾಗುವ ಬೆಲೆಯನ್ನು ನಾನು ಪೂರ್ತಿ ಕೊಡುತ್ತೇನೆ. ನಾನು ಅದನ್ನು ಸಮಾಧಿಯ ಸ್ಥಳಕ್ಕಾಗಿ ಕೊಂಡುಕೊಂಡಿರುವೆ ಎಂಬುದಕ್ಕೆ ನೀವೆಲ್ಲರೂ ಸಾಕ್ಷಿಗಳಾಗಿರಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವನ ಭೂಮಿಯ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಿಸಿ ಎಂದು ಕೇಳಿದನು. ಅವನು ನನ್ನ ಸ್ವಂತಕ್ಕೆ ಈ ಸಮಾಧಿಯ ಸ್ಥಳ ನಿಮ್ಮೆದುರಿನಲ್ಲಿ ನನಗೆ ಕೊಟ್ಟರೆ ಪೂರ್ಣ ಕ್ರಯವನ್ನು ಕೊಡುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವನ ಜಮೀನಿನ ಅಂಚಿನಲ್ಲಿರುವ ಮಕ್ಪೇಲದ ಗವಿಯನ್ನು ನನಗೆ ಕೊಡಿಸಬೇಕೆಂದು ವಿನಂತಿಸುತ್ತೇನೆ. ಅವನು ಆ ಸಮಾಧಿಯ ಸ್ಥಳವನ್ನು ನನ್ನ ಸ್ವಂತಕ್ಕೆ ನಿಮ್ಮ ಎದುರಿಗೇ ಬಿಟ್ಟುಕೊಟ್ಟರೆ ಪೂರ್ಣಕ್ರಯವನ್ನು ಕೊಟ್ಟುಬಿಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವನ ಭೂವಿುಯ ಅಂಚಿನಲ್ಲಿರುವ ಮಕ್ಪೇಲದ ಗವಿಯನ್ನು ನನಗೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ. ಅವನು ಸಮಾಧಿಯ ಸ್ಥಳವನ್ನು ನನ್ನ ಸ್ವಂತಕ್ಕಾಗಿ ನಿಮ್ಮೆದುರಿನಲ್ಲಿ ಕೊಟ್ಟರೆ ಪೂರ್ಣಕ್ರಯವನ್ನು ಕೊಡುತ್ತೇನೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲಾ ಗವಿಯನ್ನು ನನಗೆ ಕೊಡಲಿ. ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ,” ಎಂದನು. ಅಧ್ಯಾಯವನ್ನು ನೋಡಿ |