ಆದಿಕಾಂಡ 24:10 - ಪರಿಶುದ್ದ ಬೈಬಲ್10 ಆ ಸೇವಕನು ಅಬ್ರಹಾಮನ ಹತ್ತು ಒಂಟೆಗಳನ್ನು ಸಿದ್ಧಮಾಡಿ ಶ್ರೇಷ್ಠವಾದ ಅನೇಕ ಉಡುಗೊರೆಗಳನ್ನು ತೆಗೆದುಕೊಂಡು ಮೆಸೊಪೋಟೊಮಿಯಕ್ಕೆ ಬಂದು ನಾಹೋರನು ವಾಸವಾಗಿದ್ದ ಊರನ್ನು ತಲುಪಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ತರುವಾಯ ಆ ಸೇವಕನು ತನ್ನ ದಣಿಯ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ಸಿದ್ಧಮಾಡಿ, ದಣಿಯ ಬಳಿಯಿದ್ದ ಶ್ರೇಷ್ಠವಾದ ಒಡವೆಗಳನ್ನು ತನ್ನ ವಶಕ್ಕೆ ತೆಗೆದುಕೊಂಡು ಹೊರಟು, ಅರಾಮ್ ನಾಹಾರಾಯಿಮ್ ಸೀಮೆಗೆ ಸೇರಿದ ನಾಹೋರನು ವಾಸಿಸಿದ ಊರನ್ನು ಮುಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ತರುವಾಯ ಆ ಸೇವಕ ತನ್ನ ಒಡೆಯನ ಒಂಟೆಗಳಲ್ಲಿ ಹತ್ತನ್ನು ಸಿದ್ಧಮಾಡಿಕೊಂಡು, ಅವನ ಆಸ್ತಿಯಿಂದ ಶ್ರೇಷ್ಠವಾದ ಒಡವೆಗಳನ್ನು ತೆಗೆದುಕೊಂಡು ಹೊರಟನು. ಎರಡು ನದಿಗಳ ಮಧ್ಯೆ ಇರುವ ಉತ್ತರ ಮೆಸಪೊಟೇಮಿಯಾ ನಾಡಿಗೆ ಬಂದನು. ಅಲ್ಲಿಂದ ನಾಹೋರನು ವಾಸಿಸಿದ್ದ ಊರನ್ನು ಮುಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ತರುವಾಯ ಆ ಸೇವಕನು ತನ್ನ ದಣಿಯ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ಸಿದ್ಧಮಾಡಿ ದಣಿಯ ಆಸ್ತಿಯಿಂದ ಶ್ರೇಷ್ಠವಾದ ಒಡವೆಗಳನ್ನು ತನ್ನ ವಶಕ್ಕೆ ತೆಗೆದುಕೊಂಡು ಹೊರಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ಸೀಮೆಗೆ ಬಂದು ನಾಹೋರನು ವಾಸಿಸಿದ ಊರನ್ನು ಮುಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನೂ, ತನ್ನ ಯಜಮಾನನಿಂದ ಎಲ್ಲಾ ತರಹದ ವಸ್ತ್ರಗಳನ್ನೂ ತೆಗೆದುಕೊಂಡು ಅರಾಮ್ ನಹರೈಮಿಗೆ ಹೊರಟು, ನಾಹೋರನು ವಾಸವಾಗಿದ್ದ ಊರನ್ನು ಸೇರಿದನು. ಅಧ್ಯಾಯವನ್ನು ನೋಡಿ |