Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:12 - ಪರಿಶುದ್ದ ಬೈಬಲ್‌

12 ಆ ಸೇವಕನು, “ಯೆಹೋವನೇ, ನೀನು ನನ್ನ ಒಡೆಯನಾದ ಅಬ್ರಹಾಮನ ದೇವರು. ಈ ದಿನ ಅವನ ಮಗನಿಗಾಗಿ ಕನ್ಯೆಯನ್ನು ಕಂಡುಕೊಳ್ಳಲು ಸಹಾಯಮಾಡು. ನನ್ನ ಒಡೆಯನಾದ ಅಬ್ರಹಾಮನಿಗೋಸ್ಕರವಾಗಿಯೇ ಈ ಉಪಕಾರ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಸಫಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ದಯೆಯನ್ನು ತೋರಿಸಬೇಕೆಂದು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರಾ, ಈ ದಿನ ನಾನು ಬಂದ ಕಾರ್ಯವನ್ನು ಕೈಗೂಡಿಸಿ, ನನ್ನೊಡೆಯ ಅಬ್ರಹಾಮನಿಗೆ ಉಪಕಾರಮಾಡಬೇಕೆಂದು ಪ್ರಾರ್ಥಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಅನುಕೂಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ಉಪಕಾರಮಾಡಬೇಕೆಂದು ಬೇಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಅವನು, “ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಯೆಹೋವ ದೇವರೇ, ಈ ಹೊತ್ತು ನನಗೆ ಅನುಕೂಲವನ್ನು ಉಂಟುಮಾಡಿ, ನನ್ನ ಯಜಮಾನನಾದ ಅಬ್ರಹಾಮನಿಗೆ ದಯೆ ತೋರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:12
29 ತಿಳಿವುಗಳ ಹೋಲಿಕೆ  

ಬಳಿಕ ಆಕೆಗೆ, “ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನ ಒಡೆಯನಿಗೆ ದಯಾಳುವೂ ನಂಬಿಗಸ್ತನೂ ಆಗಿದ್ದಾನೆ. ನನ್ನ ಒಡೆಯನ ಮಗನಿಗಾಗಿ ಯೆಹೋವನು ನನ್ನನ್ನು ನನ್ನ ಒಡೆಯನ ಕುಟುಂಬಕ್ಕೆ ನಡೆಸಿದ್ದಾನೆ” ಎಂದು ಹೇಳಿದನು.


ಎಲೀಷನು ನೀರನ್ನು ಹೊಡೆದಾಗ, ನೀರು ಎರಡು ಭಾಗವಾಗಿ ಬಲಗಡೆಯಲ್ಲೂ ಎಡಗಡೆಯಲ್ಲೂ ನಿಂತುಕೊಂಡಿತು! ಎಲೀಷನು ನದಿಯನ್ನು ದಾಟಿದನು.


ಇದಲ್ಲದೆ ದೇವರು ಮೋಶೆಗೆ, “ನೀನು ಇಸ್ರೇಲರಿಗೆ, ‘ನಿಮ್ಮ ಪೂರ್ವಿಕರ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವನು ನಿಮ್ಮಲ್ಲಿಗೆ ನನ್ನನ್ನು ಕಳುಹಿಸಿದ್ದಾನೆ. ಇದೇ ನನ್ನ ಶಾಶ್ವತವಾದ ಹೆಸರು; ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ಹೆಸರು ಇದೇ ಎಂದು ಹೇಳಬೇಕು’” ಅಂದನು.


ನಾನು ನಿನ್ನ ಪೂರ್ವಿಕರ ದೇವರು, ನಾನು ಅಬ್ರಹಾಮನ ದೇವರು, ನಾನು ಇಸಾಕನ ದೇವರು, ನಾನು ಯಾಕೋಬನ ದೇವರು” ಎಂದು ಹೇಳಿದನು. ದೇವರನ್ನು ನೋಡುವುದಕ್ಕೆ ಭಯಪಟ್ಟು ಮೋಶೆ ತನ್ನ ಮುಖವನ್ನು ಮುಚ್ಚಿಕೊಂಡನು.


ಆ ರಾತ್ರಿ ಯೆಹೋವನು ಇಸಾಕನಿಗೆ ಪ್ರತ್ಯಕ್ಷನಾಗಿ, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು. ಭಯಪಡಬೇಡ, ನಾನು ನಿನ್ನ ಸಂಗಡವಿದ್ದೇನೆ. ನಾನು ನಿನ್ನನ್ನು ಆಶೀರ್ವದಿಸುವೆನು. ನಾನು ನಿನ್ನ ಕುಟುಂಬವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಸೇವಕನಾದ ಅಬ್ರಹಾಮನಿಗಾಗಿಯೇ ಇದನ್ನು ಮಾಡುತ್ತೇನೆ” ಎಂದು ಹೇಳಿದನು.


ಆ ಸಮಯದಲ್ಲಿ ನಾನು ತಲೆಬಾಗಿ ಯೆಹೋವನಿಗೆ ವಂದನೆ ಸಲ್ಲಿಸಿದೆನು. ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನನ್ನು ಸ್ತುತಿಸಿ ಕೊಂಡಾಡಿದೆನು; ಯಾಕೆಂದರೆ ಆತನು ನನ್ನನ್ನು ನನ್ನ ಒಡೆಯನ ತಮ್ಮನ ಮೊಮ್ಮಗಳ ಬಳಿಗೆ ನೇರವಾಗಿ ನಡೆಸಿದನು.


“ಇಂದು ನಾನು ಈ ಬಾವಿಯ ಬಳಿಗೆ ಬಂದು, ‘ನನ್ನ ಒಡೆಯನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ದಯವಿಟ್ಟು ನನ್ನ ಪ್ರವಾಸವನ್ನು ಯಶಸ್ವಿಗೊಳಿಸು.


ಯಾವುದರ ಬಗ್ಗೆಯೂ ಚಿಂತಿಸಬೇಡಿ. ಆದರೆ ಪ್ರಾರ್ಥನೆ ಮಾಡುತ್ತಾ ನಿಮ್ಮ ಅಗತ್ಯತೆಗಳಿಗೆಲ್ಲಾ ದೇವರಲ್ಲಿ ವಿಜ್ಞಾಪಿಸಿರಿ. ನೀವು ಪ್ರಾರ್ಥನೆ ಮಾಡುವಾಗಲೆಲ್ಲಾ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ.


‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿರುವುದನ್ನು ನೀವು ಓದಿಲ್ಲವೇ? ಹೀಗಿರುವಲ್ಲಿ, ದೇವರು ಜೀವಿತರಿಗೆ ಮಾತ್ರ ದೇವರೇ ಹೊರತು ಸತ್ತವರಿಗಲ್ಲಾ” ಅಂದನು.


ನಿನ್ನ ಎಲ್ಲಾ ಕಾರ್ಯಗಳಲ್ಲಿ ಆತನನ್ನು ಜ್ಞಾಪಿಸಿಕೊ. ಆಗ ಆತನು ನಿನಗೆ ಸಹಾಯ ಮಾಡುವನು.


ಯೆಹೋವನು ಮನೆಯನ್ನು ಕಟ್ಟದಿದ್ದರೆ, ಕಟ್ಟುವವರ ಸಮಯವೆಲ್ಲಾ ವ್ಯರ್ಥ. ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರ ಸಮಯವೆಲ್ಲಾ ವ್ಯರ್ಥ.


ಜೆರುಸಲೇಮಿನ ಶಾಂತಿಗೋಸ್ಕರ ಪ್ರಾರ್ಥಿಸಿರಿ: “ನಿನ್ನನ್ನು ಪ್ರೀತಿಸುವ ಜನರು ಅಲ್ಲಿ ಶಾಂತಿಯನ್ನು ಕಂಡುಕೊಳ್ಳಲಿ.


“ಯೆಹೋವನಿಗೆ ಸ್ತೋತ್ರವಾಗಲಿ! ಆತನು ನಮ್ಮನ್ನು ರಕ್ಷಿಸಿದ್ದಾನೆ.


ಯೆಹೋವನನ್ನು ಆಶ್ರಯಿಸಿಕೊ, ಆತನಲ್ಲಿ ಭರವಸವಿಡು. ನಿನಗೆ ಅಗತ್ಯವಾದದ್ದನ್ನು ಆತನೇ ಮಾಡುವನು.


ಆಗ ಅರಸನು, “ನಾನು ನಿನಗೆ ಏನುಮಾಡಬೇಕೆಂದು ಅಪೇಕ್ಷಿಸುವೆ?” ಎಂದು ಕೇಳಿದಾಗ ಅವನಿಗೆ ಉತ್ತರಿಸುವ ಮೊದಲು ನಾನು ಪರಲೋಕದ ದೇವರಿಗೆ ಪ್ರಾರ್ಥಿಸಿದೆನು.


ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.”


ಅದು ಮಧ್ಯಾಹ್ನದ ಯಜ್ಞಗಳನ್ನು ಅರ್ಪಿಸುವ ಸಮಯ. ಪ್ರವಾದಿಯಾದ ಎಲೀಯನು ಯಜ್ಞವೇದಿಕೆಯ ಹತ್ತಿರಕ್ಕೆ ಹೋಗಿ, “ಅಬ್ರಹಾಮನ, ಇಸಾಕನ ಮತ್ತು ಯಾಕೋಬನ ದೇವರಾದ ಯೆಹೋವನೇ, ನೀನು ಇಸ್ರೇಲಿನಲ್ಲಿರುವ ದೇವರೆಂಬುದನ್ನು ರುಜುವಾತುಪಡಿಸಲು ನಾನೀಗ ನಿನ್ನನ್ನು ಪ್ರಾರ್ಥಿಸುತ್ತಿದ್ದೇನೆ. ನಾನು ನಿನ್ನ ಸೇವಕನೆಂಬುದನ್ನೂ ನೀನು ನಿರೂಪಿಸು. ಈ ಕಾರ್ಯಗಳನ್ನೆಲ್ಲಾ ನಾನು ಮಾಡುವಂತೆ ನೀನು ಆಜ್ಞಾಪಿಸಿದೆ ಎನ್ನುವುದನ್ನೂ ಈ ಜನರಿಗೆ ತೋರಿಸು.


ನೀವು ರಾಜ್ಯಪಾಲನ ಮುಂದೆ ನಿಂತುಕೊಂಡಾಗ ಸರ್ವಶಕ್ತನಾದ ದೇವರು ನಿಮಗೆ ಸಹಾಯ ಮಾಡುವಂತೆ ನಾನು ಪ್ರಾರ್ಥಿಸುತ್ತೇನೆ. ಬೆನ್ಯಾಮೀನನನ್ನೂ ಸಿಮೆಯೋನನನ್ನೂ ಕಳುಹಿಸಿಕೊಡುವಂತೆ ಮತ್ತು ನೀವು ಸುರಕ್ಷಿತವಾಗಿ ಮರಳಿಬರುವಂತೆ ನಾನು ಪ್ರಾರ್ಥಿಸುತ್ತೇನೆ. ಇಲ್ಲವಾದರೆ, ನನ್ನ ಮಗನನ್ನು ಕಳೆದುಕೊಂಡು ನಾನು ಮತ್ತೆ ದುಃಖಿತನಾಗುವೆ” ಎಂದು ಹೇಳಿದನು.


ಯಾಕೋಬನು, “ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರಾಗಿರುವ ಯೆಹೋವನೇ, ನನ್ನ ದೇಶಕ್ಕೆ ಮತ್ತು ನನ್ನ ಕುಟುಂಬಕ್ಕೆ ಹಿಂತಿರುಗಿ ಬರುವಂತೆ ನೀನು ಹೇಳಿದೆ. ನೀನು ನನಗೆ ಒಳ್ಳೆಯದನ್ನು ಮಾಡುವುದಾಗಿ ಹೇಳಿದೆ.


ಆದರೆ ನನ್ನ ಪೂರ್ವಿಕರ ದೇವರೂ ಅಬ್ರಹಾಮನ ದೇವರೂ ಇಸಾಕನು ಭಯಪಡುವ ದೇವರೂ ನನ್ನ ಸಂಗಡವಿದ್ದನು. ದೇವರು ನನ್ನ ಜೊತೆಯಲ್ಲಿ ಇಲ್ಲದಿದ್ದರೆ ನೀನು ನನ್ನನ್ನು ಬರಿಗೈಲಿ ಕಳುಹಿಸಿಬಿಡುತ್ತಿದ್ದೆ. ಆದರೆ ನನ್ನ ಕಷ್ಟವನ್ನೂ ನಾನು ಮಾಡಿದ ಕೆಲಸವನ್ನೂ ದೇವರು ನೋಡಿದನು. ನಿನ್ನೆಯ ರಾತ್ರಿ ನಾನು ತಪ್ಪಿತಸ್ಥನಲ್ಲವೆಂದು ದೇವರು ನಿನಗೆ ತೋರಿಸಿಕೊಟ್ಟಿದ್ದಾನೆ” ಎಂದು ಹೇಳಿದನು.


ಯೆಹೋವನು ಏಣಿಯ ತುದಿಯಲ್ಲಿ ನಿಂತಿರುವುದನ್ನು ಯಾಕೋಬನು ಕಂಡನು. ಯೆಹೋವನು ಅವನಿಗೆ, “ನಿನ್ನ ತಾತನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ ನಾನು. ನಾನು ಇಸಾಕನ ದೇವರು. ಈಗ ನೀನು ಮಲಗಿಕೊಂಡಿರುವ ದೇಶವನ್ನು ನಾನು ನಿನಗೆ ಕೊಡುವೆನು. ನಾನು ಈ ದೇಶವನ್ನು ನಿನಗೂ ನಿನ್ನ ಮಕ್ಕಳಿಗೂ ಕೊಡುವೆನು.


ಆದರೆ ಇಸಾಕನು ತನ್ನ ಮಗನಿಗೆ, “ನೀನು ಇಷ್ಟು ಬೇಗನೆ ಬೇಟೆಯಾಡಿಕೊಂಡು ಬಂದೆಯಾ?” ಎಂದು ಕೇಳಿದನು. ಅದಕ್ಕೆ ಯಾಕೋಬನು, “ನಾನು ಬಹುಬೇಗನೆ ಪ್ರಾಣಿಗಳನ್ನು ಕಂಡುಕೊಳ್ಳುವಂತೆ ನಿನ್ನ ದೇವರಾದ ಯೆಹೋವನು ಸಹಾಯ ಮಾಡಿದನು” ಎಂದು ಉತ್ತರಿಸಿದನು.


ನೀನು ಆ ಅಡಿಗೆಯನ್ನು ನಿನ್ನ ತಂದೆಗೆ ತೆಗೆದುಕೊಂಡು ಹೋಗು. ಆಗ ಅವನು ತಾನು ಸಾಯುವ ಮೊದಲೇ ನಿನ್ನನ್ನು ಆಶೀರ್ವದಿಸುವನು” ಅಂದಳು.


ಈ ಸಂಗತಿಗಳಾದ ಮೇಲೆ, ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ಸಂದೇಶ ಬಂದಿತು. ದೇವರು ಅವನಿಗೆ, “ಅಬ್ರಾಮನೇ ಭಯಪಡಬೇಡ; ನಾನೇ ನಿನಗೆ ಗುರಾಣಿಯಾಗಿದ್ದೇನೆ. ನಾನು ನಿನಗೆ ದೊಡ್ಡ ಪ್ರತಿಫಲವನ್ನು ಕೊಡುತ್ತೇನೆ” ಎಂದು ಹೇಳಿದನು.


ಆ ಸೇವಕನು ಆಕೆಯನ್ನೇ ಗಮನಿಸುತ್ತಾ, ಯೆಹೋವನು ತನ್ನ ಪ್ರಾರ್ಥನೆಗೆ ಉತ್ತರ ಕೊಟ್ಟನೋ ಇಲ್ಲವೋ ಎಂದು ಖಚಿತಪಡಿಸಿಕೊಳ್ಳಲು ಕಾದುಕೊಂಡಿದ್ದನು.


ನೀನು ನನಗೆ ತುಂಬ ಕರುಣೆ ತೋರಿದೆ. ನೀನು ನನಗೆ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದೆ. ಮೊದಲನೆ ಸಲ ನಾನು ಜೋರ್ಡನ್ ನದಿಯನ್ನು ದಾಟಿ ಪ್ರಯಾಣ ಮಾಡಿದಾಗ, ಕೇವಲ ನನ್ನ ಊರುಗೋಲೇ ಹೊರತು ಬೇರೇನೂ ನನಗಿರಲಿಲ್ಲ. ಆದರೆ ಈಗ ಎರಡು ಗುಂಪುಗಳಿಗೆ ಬೇಕಾದ ವಸ್ತುಗಳನ್ನು ನಾನು ಪಡೆದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು