Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:13 - ಪರಿಶುದ್ದ ಬೈಬಲ್‌

13 ನಾನು ಈ ನೀರಿನ ಬಾವಿಯ ಬಳಿಯಲ್ಲಿ ನಿಂತಿರುತ್ತೇನೆ; ಈ ಊರಿನ ಯುವತಿಯರು ನೀರನ್ನು ತೆಗೆದುಕೊಳ್ಳಲು ಇಲ್ಲಿಗೆ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಗೋ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನೆ; ಈ ಊರಿನ ಹೆಣ್ಣುಮಕ್ಕಳು ನೀರಿಗೆ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇಗೋ, ನೀರಿನ ಬುಗ್ಗೆಯ ಬಳಿಯಲ್ಲೇ ನಿಂತಿದ್ದೇನೆ; ಈ ಊರಿನ ಹೆಣ್ಣುಮಕ್ಕಳು ನೀರಿಗೆ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಗೋ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನೆ; ಈ ಊರಿನ ಹೆಣ್ಣುಮಕ್ಕಳು ನೀರಿಗೆ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನು ನೀರಿನ ಬಾವಿಯ ಬಳಿಯಲ್ಲಿ ನಿಂತುಕೊಂಡಿದ್ದೇನೆ. ಊರಿನ ಜನರ ಪುತ್ರಿಯರು ನೀರು ಸೇದುವುದಕ್ಕೆ ಹೊರಗೆ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:13
10 ತಿಳಿವುಗಳ ಹೋಲಿಕೆ  

ನಾನು ಬಾವಿಯ ಬಳಿಯಲ್ಲಿ ನಿಂತುಕೊಂಡು ನೀರನ್ನು ತೆಗೆದುಕೊಳ್ಳಲು ಬರುವ ಒಬ್ಬ ಯುವತಿಗಾಗಿ ಕಾದಿರುತ್ತೇನೆ. ಆಮೇಲೆ ನಾನು ಆಕೆಗೆ, “ದಯವಿಟ್ಟು ಕುಡಿಯಲು ನಿನ್ನ ಕೊಡದಿಂದ ನೀರನ್ನು ಕೊಡು” ಎಂದು ಕೇಳುತ್ತೇನೆ.


ಯೆಹೋವನನ್ನು ಆಶ್ರಯಿಸಿಕೊ, ಆತನಲ್ಲಿ ಭರವಸವಿಡು. ನಿನಗೆ ಅಗತ್ಯವಾದದ್ದನ್ನು ಆತನೇ ಮಾಡುವನು.


ಸಮಾರ್ಯದ ಸ್ತ್ರೀಯೊಬ್ಬಳು ನೀರನ್ನು ತೆಗೆದುಕೊಂಡು ಹೋಗುವುದಕ್ಕಾಗಿ ಆ ಬಾವಿಗೆ ಬಂದಳು. ಯೇಸು ಆಕೆಗೆ, “ದಯವಿಟ್ಟು, ಕುಡಿಯಲು ಸ್ವಲ್ಪ ನೀರು ಕೊಡು” ಎಂದು ಕೇಳಿದನು.


ನಿನ್ನ ಎಲ್ಲಾ ಕಾರ್ಯಗಳಲ್ಲಿ ಆತನನ್ನು ಜ್ಞಾಪಿಸಿಕೊ. ಆಗ ಆತನು ನಿನಗೆ ಸಹಾಯ ಮಾಡುವನು.


ಸೌಲನು ಮತ್ತು ಆ ಸೇವಕನು ಬೆಟ್ಟದ ಮೇಲೆ ನಡೆಯುತ್ತಾ ಆ ಪಟ್ಟಣಕ್ಕೆ ಹೋದರು. ಆ ದಾರಿಯಲ್ಲಿ ಅವರು ಕೆಲವು ಸ್ತ್ರೀಯರನ್ನು ಸಂಧಿಸಿದರು. ಆ ಸ್ತ್ರೀಯರು ನೀರನ್ನು ತರಲು ಹೋಗುತ್ತಿದ್ದರು. ಸೌಲನು ಮತ್ತು ಆ ಸೇವಕನು, “ದರ್ಶಿಯು ಇಲ್ಲಿರುವನೇ?” ಎಂದು ಆ ಯುವತಿಯರನ್ನು ಕೇಳಿದರು.


ತಾಳ ಝಲ್ಲರಿಗಳ ಧ್ವನಿಯನ್ನು ಕೇಳಿರಿ; ಬಾವಿಗಳ ಹತ್ತಿರ ನೆರೆದ ಜನಸಮೂಹದ ಧ್ವನಿಯನ್ನು ಕೇಳಿರಿ; ಅಲ್ಲಿ ಅವು ಯೆಹೋವನ ವಿಜಯದ ಬಗ್ಗೆ ಹೇಳುತ್ತವೆ. ಯೆಹೋವನ ಜನರು ಪಟ್ಟಣ ದ್ವಾರದಲ್ಲಿ ಯುದ್ಧಕ್ಕೆ ಹೋದಾಗ ಇಸ್ರೇಲಿನಲ್ಲಿ ಅವರ ವಿಜಯದ ಬಗ್ಗೆ ಹೇಳುತ್ತವೆ.


ಮೋಶೆಯು ಮಿದ್ಯಾನ್ಯರ ಒಂದು ಬಾವಿಯ ಬಳಿ ಕುಳಿತುಕೊಂಡಿದ್ದನು. ಮಿದ್ಯಾನ್ಯರ ಒಬ್ಬ ಪುರೋಹಿತನಿಗೆ ಏಳು ಮಂದಿ ಹೆಣ್ಣುಮಕ್ಕಳಿದ್ದರು. ಆ ಹುಡುಗಿಯರು ಬಂದು ತಮ್ಮ ತಂದೆಯ ಕುರಿಗಳಿಗೆ ನೀರನ್ನು ಕುಡಿಸಲು ಬಾವಿಯಿಂದ ನೀರು ಸೇದಿ ತೊಟ್ಟಿಗಳಲ್ಲಿ ಹಾಕುತ್ತಿದ್ದರು.


ಅವನು ಊರ ಹೊರಗಿದ್ದ ಬಾವಿಯ ಬಳಿಯಲ್ಲಿ ಒಂಟೆಗಳನ್ನು ಮಲಗಿಸಿದನು; ಪ್ರತಿಸಾಯಂಕಾಲ ಸ್ತ್ರೀಯರು ನೀರನ್ನು ತೆಗೆದುಕೊಂಡು ಹೋಗುವುದಕ್ಕಾಗಿ ಆ ಬಾವಿಗೆ ಬರುತ್ತಿದ್ದರು.


ಇಸಾಕನಿಗೆ ಯೋಗ್ಯಳಾದ ಕನ್ಯೆಯನ್ನು ಕಂಡುಕೊಳ್ಳಲು ನಾನು ಒಬ್ಬಳಿಗೆ, ‘ದಯವಿಟ್ಟು ನಿನ್ನ ಕೊಡವನ್ನು ಕೆಳಗಿಳಿಸಿ ಕುಡಿಯಲು ನೀರು ಕೊಡು’ ಎನ್ನುವೆ. ಆಕೆ ನನಗೆ, ‘ನೀನೂ ಕುಡಿ, ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ’ ಎಂದರೆ ಆಕೆಯೇ ನಿನ್ನಿಂದ ಆಯ್ಕೆಗೊಂಡ ಯೋಗ್ಯ ಕನ್ಯೆಯೆಂದೂ ನೀನು ನನ್ನ ಒಡೆಯನಿಗೆ ಕರುಣೆ ತೋರಿದೆಯೆಂದೂ ನಾನು ತಿಳಿದುಕೊಳ್ಳುವೆ” ಎಂದು ಪ್ರಾರ್ಥಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು