Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:14 - ಪರಿಶುದ್ದ ಬೈಬಲ್‌

14 ಇಸಾಕನಿಗೆ ಯೋಗ್ಯಳಾದ ಕನ್ಯೆಯನ್ನು ಕಂಡುಕೊಳ್ಳಲು ನಾನು ಒಬ್ಬಳಿಗೆ, ‘ದಯವಿಟ್ಟು ನಿನ್ನ ಕೊಡವನ್ನು ಕೆಳಗಿಳಿಸಿ ಕುಡಿಯಲು ನೀರು ಕೊಡು’ ಎನ್ನುವೆ. ಆಕೆ ನನಗೆ, ‘ನೀನೂ ಕುಡಿ, ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ’ ಎಂದರೆ ಆಕೆಯೇ ನಿನ್ನಿಂದ ಆಯ್ಕೆಗೊಂಡ ಯೋಗ್ಯ ಕನ್ಯೆಯೆಂದೂ ನೀನು ನನ್ನ ಒಡೆಯನಿಗೆ ಕರುಣೆ ತೋರಿದೆಯೆಂದೂ ನಾನು ತಿಳಿದುಕೊಳ್ಳುವೆ” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ಯಾವ ಹುಡುಗಿಗೆ, ‘ನೀನು ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ನನಗೆ ಕುಡಿಯುವುದಕ್ಕೆ ನೀರನ್ನು ಕೊಡು’ ಎಂದು ಹೇಳುವಾಗ, ‘ನೀನು ಕುಡಿಯಬಹುದು ಮತ್ತು ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ’ ಎನ್ನುವಳೋ, ಅವಳೇ ನಿನ್ನ ದಾಸನಾದ ಇಸಾಕನಿಗೆ ನೀನು ನೇಮಿಸಿರುವ ಕನ್ಯೆಯಾಗಲಿ. ನನ್ನ ದಣಿಯ ಮೇಲೆ ನಿನ್ನ ದಯೆಯಿದೆ ಎಂದು ಇದರಿಂದ ನನಗೆ ಗೊತ್ತಾಗುವುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾನು ಯಾವ ಹುಡುಗಿ಼ಗೆ ‘ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ಕುಡಿಯುವುದಕ್ಕೆ ಕೊಡು’ ಎಂದು ಹೇಳುವಾಗ ‘ನೀನೂ ಕುಡಿ, ನಿನ್ನ ಒಂಟೆಗಳಿಗೂ ಕುಡಿಯ ಕೊಡುತ್ತೇನೆ’ ಎನ್ನುತ್ತಾಳೋ ಅವಳೇ ನಿಮ್ಮ ದಾಸ ಇಸಾಕನಿಗೆ ನೀವು ಚುನಾಯಿಸಿರುವ ಕನ್ಯೆಯಾಗಲಿ. ನನ್ನೊಡೆಯನ ಮೇಲೆ ನಿಮ್ಮ ದಯೆಯಿದೆ ಎಂದು ಇದರಿಂದ ಗೊತ್ತಾಗುವುದು,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ಯಾವ ಹುಡುಗಿಗೆ - ನೀನು ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ನನಗೆ ಕುಡಿಯುವದಕ್ಕೆ ಕೊಡು ಎಂದು ಹೇಳುವಾಗ - ನೀನು ಕುಡಿಯಬಹುದು, ಮತ್ತು ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ ಅನ್ನುವಳೋ, ಅವಳೇ ನಿನ್ನ ದಾಸನಾದ ಇಸಾಕನಿಗೆ ನೀನು ನೇವಿುಸಿರುವ ಕನ್ಯೆಯಾಗಲಿ. ನನ್ನ ದಣಿಯ ಮೇಲೆ ನಿನ್ನ ದಯವದೆ ಎಂದು ಇದರಿಂದ ನನಗೆ ಗೊತ್ತಾಗುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ಯಾವ ಹುಡುಗಿಗೆ, ‘ನೀರು ಕುಡಿಯುವ ಹಾಗೆ ನಿನ್ನ ಕೊಡವನ್ನು ಇಳಿಸು,’ ಎಂದು ಕೇಳಿಕೊಂಡಾಗ, ‘ನೀನೂ ಕುಡಿ, ನಿನ್ನ ಒಂಟೆಗಳಿಗೆ ಸಹ ಕುಡಿಯುವುದಕ್ಕೆ ಕೊಡುತ್ತೇನೆ,’ ಎಂದು ಹೇಳುವಳೋ, ಆಕೆಯನ್ನೇ ನೀವು ನಿಮ್ಮ ಸೇವಕನಾದ ಇಸಾಕನಿಗೆ ನೇಮಕ ಮಾಡಿದ್ದೀರಿ ಮತ್ತು ಯಜಮಾನನಿಗೆ ದಯೆ ತೋರಿಸಿದ್ದೀರಿ, ಎಂದು ಇದರಿಂದ ನಾನು ತಿಳಿದುಕೊಳ್ಳುವೆನು,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:14
22 ತಿಳಿವುಗಳ ಹೋಲಿಕೆ  

ನಾನು ಕಣದಲ್ಲಿ ಕುರಿಯ ತುಪ್ಪಟವನ್ನು ಹಾಸುತ್ತೇನೆ. ನೆಲವೆಲ್ಲ ಒಣಗಿದ್ದು ಕೇವಲ ಕುರಿಯ ತುಪ್ಪಟದ ಮೇಲೆ ಇಬ್ಬನಿ ಬಿದ್ದರೆ, ನೀನು ಹೇಳಿದಂತೆಯೇ ಇಸ್ರೇಲನ್ನು ರಕ್ಷಿಸಲು ನನ್ನನ್ನು ಬಳಸುವೆ ಎಂದು ಅರಿತುಕೊಳ್ಳುವೆ” ಅಂದನು.


ಆಗ ಗಿದ್ಯೋನನು ಯೆಹೋವನಿಗೆ, “ನೀನು ನನಗೆ ಕೃಪೆ ತೋರಿದರೆ, ನೀನು ನಿಜವಾಗಿಯೂ ಯೆಹೋವನು ಎಂಬುದಕ್ಕೆ ನನಗೆ ಒಂದು ಗುರುತನ್ನು ಕೊಡು.


ಅದಕ್ಕೆ ಅಬ್ರಾಮನು, “ಯೆಹೋವನೇ, ನನ್ನ ಒಡೆಯನೇ, ನನಗೆ ಈ ದೇಶವು ದೊರೆಯುತ್ತದೆಯೆಂದು ಖಚಿತಪಡಿಸಿಕೊಳ್ಳುವುದು ಹೇಗೆ?” ಎಂದು ಕೇಳಿದನು.


ಯೆಹೋವನು ಅವನಿಗೆ, “ಇವೆಲ್ಲಾ ಸತ್ಯವೆಂದು ಮನದಟ್ಟು ಮಾಡಿಕೊಳ್ಳಲು ಒಂದು ಗುರುತನ್ನು ಕೇಳಿಕೊ. ನಿನಗೆ ಯಾವ ಗುರುತನ್ನು ಬೇಕಾದರೂ ಕೇಳಿಕೊ. ಆ ಗುರುತು ಆಳವಾದ ನರಕದಿಂದ ಬಂದ ಗುರುತಾದರೂ ಸರಿಯೇ ಅಥವಾ ಉನ್ನತವಾದ ಆಕಾಶದಿಂದ ಬಂದ ಗುರುತಾದರೂ ಸರಿಯೇ, ನಿನಗೆ ದಯಪಾಲಿಸುವೆನು” ಎಂದು ಹೇಳಿದನು.


ಮಕ್ಕಳು ತಂದೆಯಿಂದ ಮನೆಗಳನ್ನು ಮತ್ತು ಹಣವನ್ನು ಸ್ವಾಸ್ತ್ಯವಾಗಿ ಪಡೆದುಕೊಳ್ಳುವರು. ವಿವೇಕಿಯಾದ ಹೆಂಡತಿಯಾದರೋ ಯೆಹೋವನಿಂದ ಬಂದ ಉಡುಗೊರೆ.


ಮರಗಳ ತುದಿಯಲ್ಲಿರುವ ನಿಮಗೆ ಫಿಲಿಷ್ಟಿಯರು ಯುದ್ಧಕ್ಕೆ ಹೊರಡುವುದು ಕೇಳಿಸುತ್ತದೆ. ಆಗ ನೀನು ತ್ವರಿತಗತಿಯಿಂದ ಕಾರ್ಯನಿರತನಾಗು. ಆಗ ಯೆಹೋವನಾದ ನಾನು ನಿನಗಾಗಿ ಅದೇ ಸಮಯದಲ್ಲಿ ಫಿಲಿಷ್ಟಿಯರನ್ನು ಸೋಲಿಸಲು ನಿಮ್ಮ ಮುಂದೆ ನಾನು ಹೋಗುತ್ತೇನೆ” ಎಂದು ಹೇಳಿದನು.


ಅವರು ಅವನಿಗೆ, “ವಾಸಕ್ಕಾಗಿ ಭೂಮಿಯನ್ನು ಹುಡುಕಲು ಕೈಕೊಂಡ ನಮ್ಮ ಪ್ರಯಾಣ ಸಫಲವಾಗುವುದೋ ಇಲ್ಲವೋ ಎಂಬುದನ್ನು ನಾವು ತಿಳಿದುಕೊಳ್ಳಬೇಕಾಗಿದೆ. ದಯವಿಟ್ಟು ದೇವರಲ್ಲಿ ಈ ವಿಷಯ ಕೇಳು” ಎಂದು ಕೇಳಿಕೊಂಡರು.


ಅವನು ಅಮಾಸನನ್ನು, “ಸೋದರನೇ, ನೀವೆಲ್ಲ ಕ್ಷೇಮವೇ?” ಎಂದು ಕೇಳಿದನು. ಯೋವಾಬನು ಅಮಾಸನಿಗೆ ಮುದ್ದಿಡಲು ಅವನ ಗಡ್ಡವನ್ನು ಬಲಗೈಯಲ್ಲಿ ಹಿಡಿದನು.


ನಿನ್ನ ತಂದೆಯು, ‘ಒಳ್ಳೆಯದಾಯಿತು’ ಎಂದರೆ ನಾನು ಬದುಕಿದೆ. ಆದರೆ ನಿನ್ನ ತಂದೆಯು ಕೋಪಗೊಂಡರೆ ಅವನು ನನಗೆ ಕೇಡುಮಾಡಲು ಬಯಸಿದ್ದಾನೆಂದು ತಿಳಿದುಕೋ.


ಅವಳು ನನಗೆ, “ನೀನೂ ನೀರನ್ನು ಕುಡಿ, ನಿನ್ನ ಒಂಟೆಗಳಿಗೂ ನೀರನ್ನು ತಂದುಕೊಡುವೆ” ಎಂದು ಹೇಳಿದರೆ, ನನ್ನ ಒಡೆಯನ ಮಗನಿಗೆ ಯೆಹೋವನು ಆರಿಸಿಕೊಂಡಿರುವ ಕನ್ನಿಕೆ ಇವಳೇ ಎಂಬುದಾಗಿ ತಿಳಿದುಕೊಳ್ಳುವೆ’ ಎಂದು ಪ್ರಾರ್ಥಿಸಿದೆ.


ನಾನು ಈ ನೀರಿನ ಬಾವಿಯ ಬಳಿಯಲ್ಲಿ ನಿಂತಿರುತ್ತೇನೆ; ಈ ಊರಿನ ಯುವತಿಯರು ನೀರನ್ನು ತೆಗೆದುಕೊಳ್ಳಲು ಇಲ್ಲಿಗೆ ಬರುತ್ತಾರೆ.


ಆ ಸೇವಕನು ಪ್ರಾರ್ಥನೆ ಮಾಡಿ ಮುಗಿಸುವುದಕ್ಕಿಂತ ಮೊದಲೇ ರೆಬೆಕ್ಕ ಎಂಬ ಯುವತಿಯು ಬಾವಿಯ ಬಳಿಗೆ ಬಂದಳು. ರೆಬೆಕ್ಕಳು ಬೆತೂವೇಲನ ಮಗಳು. ಬೆತೂವೇಲನು ಮಿಲ್ಕಳ ಮತ್ತು ನಾಹೋರನ ಮಗನು. ನಾಹೋರನು ಅಬ್ರಹಾಮನ ತಮ್ಮ. ರೆಬೆಕ್ಕಳು ತನ್ನ ಹೆಗಲ ಮೇಲೆ ನೀರಿನ ಕೊಡವನ್ನು ತೆಗೆದುಕೊಂಡು ಬಾವಿಗೆ ಬಂದಳು.


ರೆಬೆಕ್ಕಳು ಕೂಡಲೇ ತನ್ನ ಕೊಡವನ್ನು ಹೆಗಲ ಮೇಲಿಂದ ಕೆಳಗಿಳಿಸಿ ಅವನಿಗೆ ಕುಡಿಯಲು ನೀರನ್ನು ಕೊಟ್ಟು, “ಅಯ್ಯಾ, ನೀರನ್ನು ಕುಡಿ” ಅಂದಳು.


ಅವನು ನೀರು ಕುಡಿದಾದ ಮೇಲೆ ಆಕೆ ಅವನಿಗೆ, “ನಿನ್ನ ಒಂಟೆಗಳಿಗೂ ಬೇಕಾದಷ್ಟು ನೀರನ್ನು ತಂದುಕೊಡುತ್ತೇನೆ” ಎಂದು ಹೇಳಿ,


ನಾನು ಬಾವಿಯ ಬಳಿಯಲ್ಲಿ ನಿಂತುಕೊಂಡು ನೀರನ್ನು ತೆಗೆದುಕೊಳ್ಳಲು ಬರುವ ಒಬ್ಬ ಯುವತಿಗಾಗಿ ಕಾದಿರುತ್ತೇನೆ. ಆಮೇಲೆ ನಾನು ಆಕೆಗೆ, “ದಯವಿಟ್ಟು ಕುಡಿಯಲು ನಿನ್ನ ಕೊಡದಿಂದ ನೀರನ್ನು ಕೊಡು” ಎಂದು ಕೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು