Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:2 - ಪರಿಶುದ್ದ ಬೈಬಲ್‌

2 ಅಬ್ರಹಾಮನ ಆಸ್ತಿಯನ್ನೆಲ್ಲಾ ನೋಡಿಕೊಳ್ಳಲು ಒಬ್ಬ ಸೇವಕನಿದ್ದನು. ಅಬ್ರಹಾಮನು ಆ ಸೇವಕನನ್ನು ಕರೆದು, “ನನ್ನ ತೊಡೆಯ ಕೆಳಗೆ ನಿನ್ನ ಕೈಯಿಟ್ಟು ನನಗೆ ಪ್ರಮಾಣಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹೀಗಿರಲು ಅವನು ತನಗಿದ್ದ ಆಸ್ತಿಯ ಮೇಲೆ ಆಡಳಿತ ಮಾಡುತ್ತಿದ್ದ ಹಿರಿಯ ಸೇವಕನಿಗೆ ಅಬ್ರಹಾಮನು, “ನೀನು ನನ್ನ ತೊಡೆಯ ಕೆಳಗೆ ಕೈಯಿಡು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಒಮ್ಮೆ ಅವನು, ತನ್ನ ಆಸ್ತಿಯನ್ನು ನೋಡಿಕೊಳ್ಳುತ್ತಿದ್ದ ಹಿರಿಯ ಸೇವಕನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಹೀಗಿರಲು ಅವನು ತನಗಿದ್ದ ಆಸ್ತಿಯ ಮೇಲೆ ಆಡಳಿತ ಮಾಡುತ್ತಿದ್ದ ಹಿರೀ ಸೇವಕನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರಿಯ ಸೇವಕನಿಗೆ, “ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:2
14 ತಿಳಿವುಗಳ ಹೋಲಿಕೆ  

ಇಸ್ರೇಲನು ಸಾಯುವ ಕಾಲ ಸಮೀಪಿಸಿತು. ಅವನಿಗೆ ತಾನು ಸಾಯುತ್ತೇನೆಂದು ತಿಳಿದು ಬಂದಾಗ, ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ನೀನು ನನ್ನನ್ನು ಪ್ರೀತಿಸುವುದಾದರೆ, ನಿನ್ನ ಕೈಯನ್ನು ನನ್ನ ತೊಡೆಯ ಕೆಳಗಿಟ್ಟು ಪ್ರಮಾಣಮಾಡು. ನಾನು ಹೇಳಿದ್ದನ್ನು ನಡೆಸುವುದಾಗಿಯೂ ನನಗೆ ನಂಬಿಗಸ್ತನಾಗಿರುವುದಾಗಿಯೂ ಪ್ರಮಾಣ ಮಾಡು. ನಾನು ಸತ್ತಾಗ, ನನ್ನನ್ನು ಈಜಿಪ್ಟಿನಲ್ಲಿ ಸಮಾಧಿ ಮಾಡಬೇಡ.


ಅದಕ್ಕೆ ಅಬ್ರಾಮನು, “ದೇವರಾದ ಯೆಹೋವನೇ, ನೀನು ನನಗೆ ಏನೇ ಕೊಟ್ಟರೂ ನನಗೆ ಸಂತೋಷವಾಗುವುದಿಲ್ಲ. ಯಾಕೆಂದರೆ, ನನಗೆ ಮಗನೇ ಇಲ್ಲ. ಆದ್ದರಿಂದ ನಾನು ಸತ್ತಮೇಲೆ ನನ್ನ ಆಸ್ತಿಯೆಲ್ಲ ನನ್ನ ಸೇವಕನಾದ ದಮಸ್ಕದ ಎಲೀಯೆಜರನ ಪಾಲಾಗುವುದು” ಎಂದು ಹೇಳಿದನು.


ಎಲ್ಲಾ ನಾಯಕರು, ಸೈನಿಕರು ಮತ್ತು ದಾವೀದನ ಗಂಡುಮಕ್ಕಳು ಸೊಲೊಮೋನನನ್ನು ತಮ್ಮ ಅರಸನನ್ನಾಗಿ ಸ್ವೀಕರಿಸಿ ಅವನಿಗೆ ವಿಧೇಯರಾದರು.


ಬಳಿಕ ಯೋಸೇಫನು ತನ್ನ ಸೇವಕನಿಗೆ ಆಜ್ಞೆಮಾಡಿದನು. ಯೋಸೇಫನು, “ಈ ಜನರು ತೆಗೆದುಕೊಂಡು ಹೋಗಬಹುದಾದಷ್ಟು ದವಸಧಾನ್ಯಗಳನ್ನು ಇವರ ಚೀಲಗಳಲ್ಲಿ ತುಂಬಿ ಪ್ರತಿಯೊಬ್ಬನ ಹಣವನ್ನೂ ಧಾನ್ಯದೊಂದಿಗೆ ಚೀಲದಲ್ಲಿಡು.


ಸಭೆಯನ್ನು ಉತ್ತಮ ಮಾರ್ಗದಲ್ಲಿ ನಡೆಸುವ ಹಿರಿಯರು ಗೌರವಕ್ಕೂ ಸಂಬಳಕ್ಕೂ ಯೋಗ್ಯರಾಗಿದ್ದಾರೆ. ಪ್ರಸಂಗ ಮಾಡುವುದರಲ್ಲಿಯೂ ಉಪದೇಶಮಾಡುವುದರಲ್ಲಿಯೂ ನಿರತರಾಗಿರುವ ಹಿರಿಯರು ಉನ್ನತವಾದ ಗೌರವವನ್ನು ಪಡೆಯುತ್ತಾರೆ.


ಆ ಸೇವಕನು “ನಾನು ಅಬ್ರಹಾಮನ ಸೇವಕನು.


ನನ್ನ ಒಡೆಯನ್ನು ನನ್ನಿಂದ ಒಂದು ಪ್ರಮಾಣವನ್ನು ಬಲವಂತವಾಗಿ ಮಾಡಿಸಿದನು. ನನ್ನ ಒಡೆಯನು ನನಗೆ, ‘ನನ್ನ ಮಗನಿಗೆ ಕಾನಾನಿನ ಹುಡುಗಿಯೊಡನೆ ಮದುವೆಯಾಗದಂತೆ ನೀನು ನೋಡಿಕೊಳ್ಳಬೇಕು; ನಾವು ಈ ಜನರೊಡನೆ ವಾಸಿಸುತ್ತಿದ್ದೇವೆ. ಆದರೆ ಕಾನಾನಿನ ಹುಡುಗಿಯೊಂದಿಗೆ ನನ್ನ ಮಗನಿಗೆ ಮದುವೆಯಾಗುವುದು ನನಗೆ ಇಷ್ಟವಿಲ್ಲ.


ದಾವೀದನ ಕುಟುಂಬದ ನಾಯಕರು ಬಂದು ಅವನನ್ನು ನೆಲದಿಂದ ಮೇಲಕ್ಕೆತ್ತಲು ಪ್ರಯತ್ನಿಸಿದರು. ಆದರೆ ದಾವೀದನು ಮೇಲೇಳಲಿಲ್ಲ. ಅವನು ಈ ನಾಯಕರೊಂದಿಗೆ ಊಟ ಮಾಡಲಿಲ್ಲ.


ಜಿಮ್ರಿಯು ಏಲನ ಅಧಿಕಾರಿಗಳಲ್ಲಿ ಒಬ್ಬನಾಗಿದ್ದನು. ಏಲನ ರಥಬಲದ ಅರ್ಧಭಾಗಕ್ಕೆ ಜಿಮ್ರಿಯು ಅಧಿಪತಿ. ಆದರೆ ಏಲನ ವಿರುದ್ಧ ಜಿಮ್ರಿಯು ಸಂಚುಮಾಡಿದನು. ರಾಜನಾದ ಏಲನು ತಿರ್ಚದಲ್ಲಿದ್ದನು. ಅವನು ಅರ್ಚನ ಮನೆಯಲ್ಲಿ ಕುಡಿದು ಮತ್ತನಾದನು. ಅರ್ಚನು ತಿರ್ಚದಲ್ಲಿದ್ದ ಅರಮನೆಯ ಮೇಲ್ವಿಚಾರಕ.


ಇಸ್ರೇಲನು, “ನನಗೆ ಪ್ರಮಾಣ ಮಾಡು” ಎಂದು ಹೇಳಿದ್ದರಿಂದ ಯೋಸೇಫನು ಅವನಿಗೆ ಪ್ರಮಾಣ ಮಾಡಿದನು. ಆಮೇಲೆ ಇಸ್ರೇಲನು ಹಾಸಿಗೆಯ ಮೇಲೆ ಮತ್ತೆ ತನ್ನ ತಲೆಬಾಗಿ ದೇವರಿಗೆ ನಮಸ್ಕರಿಸಿದನು.


ಆ ಸೇವಕನು, “ಅವಳು ಮೋವಾಬ್ ಬೆಟ್ಟಪ್ರದೇಶದಿಂದ ನೊವೊಮಿಯ ಸಂಗಡ ಬಂದ ಮೋವಾಬ್ಯರ ಸ್ತ್ರೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು