ಆದಿಕಾಂಡ 24:21 - ಪರಿಶುದ್ದ ಬೈಬಲ್21 ಆ ಸೇವಕನು ಆಕೆಯನ್ನೇ ಗಮನಿಸುತ್ತಾ, ಯೆಹೋವನು ತನ್ನ ಪ್ರಾರ್ಥನೆಗೆ ಉತ್ತರ ಕೊಟ್ಟನೋ ಇಲ್ಲವೋ ಎಂದು ಖಚಿತಪಡಿಸಿಕೊಳ್ಳಲು ಕಾದುಕೊಂಡಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅಷ್ಟರಲ್ಲಿ ಆ ಮನುಷ್ಯನು ಏನೂ ಮಾತನಾಡದೆ ಆಕೆಯನ್ನು ದೃಷ್ಟಿಸಿ ನೋಡುತ್ತಾ, ಯೆಹೋವನು ತನ್ನ ಪ್ರಯಾಣವನ್ನು ಸಫಲ ಮಾಡಿದನೋ ಇಲ್ಲವೋ ಎಂದು ತಿಳಿಯುವುದಕ್ಕಾಗಿ ಕಾದುಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆ ಮನುಷ್ಯ, ತನ್ನ ಪ್ರಯಾಣವನ್ನು ಸರ್ವೇಶ್ವರ ಸಫಲಗೊಳಿಸಿದರೋ ಇಲ್ಲವೋ ಎಂದು ಯೋಚಿಸುತ್ತಾ ಏನೂ ಮಾತಾಡದೆ ಆಕೆಯನ್ನೇ ದೃಷ್ಟಿಸಿ ನೋಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅಷ್ಟರಲ್ಲಿ ಆ ಮನುಷ್ಯನು ಏನೂ ಮಾತಾಡದೆ ಆಕೆಯನ್ನು ದೃಷ್ಟಿಸಿ ನೋಡುತ್ತಾ - ಯೆಹೋವನು ನನ್ನ ಪ್ರಯಾಣವನ್ನು ಸಫಲ ಮಾಡಿದನೋ ಇಲ್ಲವೋ ಎಂದು ತಿಳಿಯುವದಕ್ಕಾಗಿ ಕಾದುಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ಯೆಹೋವ ದೇವರು ತನ್ನ ಪ್ರಯಾಣನ್ನು ಸಫಲ ಮಾಡಿದರೋ ಏನೋ, ಎಂದು ತಿಳಿದುಕೊಳ್ಳುವುದಕ್ಕೆ ಆ ಮನುಷ್ಯನು ಆಕೆಯನ್ನು ಗಮನಿಸುತ್ತಾ, ಆಶ್ಚರ್ಯಪಟ್ಟು ಮೌನವಾಗಿದ್ದನು. ಅಧ್ಯಾಯವನ್ನು ನೋಡಿ |