Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:28 - ಪರಿಶುದ್ದ ಬೈಬಲ್‌

28 ಆಗ ರೆಬೆಕ್ಕಳು ಬೇಗನೆ ಹೋಗಿ ಈ ಸಂಗತಿಗಳನ್ನೆಲ್ಲಾ ತನ್ನ ಕುಟುಂಬದವರಿಗೆ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆ ಹುಡುಗಿಯು ಓಡಿ ಹೋಗಿ ನಡೆದ ಸಂಗತಿಯನ್ನು ತಾಯಿಯ ಮನೆಯವರಿಗೆ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆ ಹುಡುಗಿ ಓಡಿಹೋಗಿ ನಡೆದ ಸಂಗತಿಯನ್ನು ತಾಯಿಯ ಮನೆಯಲ್ಲಿದ್ದ ಎಲ್ಲರಿಗೂ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆ ಹುಡುಗಿ ಓಡಿಹೋಗಿ ನಡೆದ ಸಂಗತಿಯನ್ನು ತಾಯಿಯ ಮನೆಯಲ್ಲಿದ್ದವರೆಲ್ಲರಿಗೆ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ಆ ಹುಡುಗಿಯು ಓಡಿಹೋಗಿ ಈ ವಿಷಯಗಳನ್ನು ತನ್ನ ತಾಯಿಯ ಮನೆಯಲ್ಲಿದ್ದವರಿಗೆ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:28
6 ತಿಳಿವುಗಳ ಹೋಲಿಕೆ  

ಆದ್ದರಿಂದ ಲಾಬಾನನು ಹೋಗಿ ಯಾಕೋಬನ ಪಾಳೆಯದಲ್ಲಿಯೂ ಗುಡಾರದಲ್ಲಿಯೂ ಲೇಯಳ ಗುಡಾರದಲ್ಲಿಯೂ ಹುಡುಕಿದನು. ಬಳಿಕ ಇಬ್ಬರು ಸೇವಕಿಯರಿದ್ದ ಗುಡಾರಕ್ಕೂ ಹೋಗಿ ಹುಡುಕಿದನು; ಅಲ್ಲಿಯೂ ಅವನಿಗೆ ಅವನ ವಿಗ್ರಹಗಳು ಸಿಕ್ಕಲಿಲ್ಲ. ಅಲ್ಲಿಂದ ರಾಹೇಲಳ ಗುಡಾರಕ್ಕೆ ಹೋದನು.


ನಂತರ ಇಸಾಕನು ಆಕೆಯನ್ನು ಕರೆದುಕೊಂಡು ತನ್ನ ತಾಯಿಯ ಗುಡಾರಕ್ಕೆ ಬಂದನು. ಅಂದು ರೆಬೆಕ್ಕಳು ಇಸಾಕನ ಹೆಂಡತಿಯಾದಳು. ಇಸಾಕನು ಅವಳನ್ನು ಬಹಳವಾಗಿ ಪ್ರೀತಿಸಿದನು. ತಾಯಿಯ ಸಾವಿನಿಂದ ಉಂಟಾಗಿದ್ದ ದುಃಖವು ಕಡಿಮೆಯಾಗಿ ಇಸಾಕನಿಗೆ ಆದರಣೆಯಾಯಿತು.


ರೆಬೆಕ್ಕಳ ತಾಯಿ ಮತ್ತು ಅಣ್ಣನು ಅವರಿಗೆ, “ರೆಬೆಕ್ಕಳು ಸ್ವಲ್ಪ ದಿನಗಳವರೆಗೆ ನಮ್ಮ ಜೊತೆ ಇರಲಿ. ಹತ್ತು ದಿನಗಳವರೆಗಾದರೂ ನಮ್ಮೊಡನೆ ಇರಲಿ. ಆಮೇಲೆ ಆಕೆಯನ್ನು ಕರೆದುಕೊಂಡು ಹೋಗು” ಎಂದು ಹೇಳಿದರು.


ಆ ಸಮಯದಲ್ಲಿ ನಾನು ತಲೆಬಾಗಿ ಯೆಹೋವನಿಗೆ ವಂದನೆ ಸಲ್ಲಿಸಿದೆನು. ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನನ್ನು ಸ್ತುತಿಸಿ ಕೊಂಡಾಡಿದೆನು; ಯಾಕೆಂದರೆ ಆತನು ನನ್ನನ್ನು ನನ್ನ ಒಡೆಯನ ತಮ್ಮನ ಮೊಮ್ಮಗಳ ಬಳಿಗೆ ನೇರವಾಗಿ ನಡೆಸಿದನು.


ಯಾಕೋಬನು ರಾಹೇಲಳಿಗೆ, ತಾನು ಅವಳ ತಂದೆಯ ಕುಟುಂಬದವನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ರಾಹೇಲಳು ಮನೆಗೆ ಓಡಿಹೋಗಿ ತನ್ನ ತಂದೆಗೆ ಈ ಸುದ್ದಿಯನ್ನು ತಿಳಿಸಿದಳು.


ರೆಬೆಕ್ಕಳಿಗೆ ಒಬ್ಬ ಅಣ್ಣನಿದ್ದನು. ಅವನ ಹೆಸರು ಲಾಬಾನ. ನಡೆದ ಸಂಗತಿಗಳನ್ನೆಲ್ಲ ರೆಬೆಕ್ಕಳು ಅವನಿಗೆ ತಿಳಿಸಿದಳು. ಲಾಬಾನನು ಆಕೆಯ ಮಾತುಗಳನ್ನೆಲ್ಲ ಕೇಳಿದಾಗ ಮತ್ತು ಉಂಗುರವನ್ನು ಮತ್ತು ಕೈಗಳಲ್ಲಿದ್ದ ಬಳೆಗಳನ್ನು ಕಂಡಾಗ ಬಾವಿಯ ಬಳಿಗೆ ಓಡಿಹೋದನು. ಬಾವಿಯ ಬಳಿಯಲ್ಲಿ ಒಂಟೆಗಳ ಹತ್ತಿರ ಆ ಸೇವಕನು ನಿಂತುಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು