Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:3 - ಪರಿಶುದ್ದ ಬೈಬಲ್‌

3 ಕಾನಾನ್ ದೇಶದ ಕನ್ನಿಕೆಯನ್ನು ನನ್ನ ಮಗನು ಮದುವೆಯಾಗದಂತೆ ನೀನು ನೋಡಿಕೊಳ್ಳುವುದಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅನಂತರ ಯೆಹೋವನ ಆಣೆ ನಾನು ವಾಸವಾಗಿರುವ ಈ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಾದ ಇಸಾಕನಿಗೆ ಹೆಣ್ಣನ್ನು ತಂದು ಮದುವೆ ಮಾಡದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನನ್ನ ಮಗ ಇಸಾಕನಿಗೆ ಹೆಣ್ಣನ್ನು ನಾನು ವಾಸಮಾಡುತ್ತಿರುವ ಕಾನಾನ್ಯರಿಂದ ತರಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು ವಾಸವಾಗಿರುವ ಕಾನಾನ್ಯರಲ್ಲಿ ನೀನು ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಳ್ಳದೆ ನನ್ನ ಸ್ವದೇಶಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:3
49 ತಿಳಿವುಗಳ ಹೋಲಿಕೆ  

ಗಂಡನು ಬದುಕಿರುವ ತನಕ ಹೆಂಡತಿಯು ಅವನೊಂದಿಗೆ ಬಾಳ್ವೆ ನಡೆಸಬೇಕು. ಆದರೆ ಗಂಡನು ಸತ್ತುಹೋದರೆ, ಆ ಸ್ತ್ರೀಯು ತಾನು ಬಯಸಿದವರನ್ನು ಮದುವೆಯಾಗಲು ಸ್ವತಂತ್ರಳಾಗಿದ್ದಾಳೆ. ಆದರೆ ಅವನು ಪ್ರಭುವನ್ನು ಅನುಸರಿಸುವವನಾಗಿರಬೇಕು.


“ನೀವು ತಪ್ಪು ಕೆಲಸಮಾಡಿದಿರಿ” ಎಂದು ಅವರನ್ನು ಶಪಿಸಿದೆನು. ಕೆಲವರಿಗೆ ಹೊಡೆದೆನು; ಕೆಲವರ ಕೂದಲು ಎಳೆದು ಕಿತ್ತುಬಿಟ್ಟೆನು. ದೇವರ ಹೆಸರಿನಲ್ಲಿ ಪ್ರತಿಜ್ಞೆ ಮಾಡಲು ಅವರನ್ನು ಒತ್ತಾಯಪಡಿಸಿ, “ನೀವು ಆ ಜನರ ಹೆಣ್ಣುಮಕ್ಕಳನ್ನು ಮದುವೆಯಾಗಬಾರದು. ಅನ್ಯರ ಹೆಣ್ಣುಮಕ್ಕಳು ನಿಮ್ಮ ಗಂಡುಮಕ್ಕಳನ್ನು ಮದುವೆಯಾಗದಂತೆ ನೋಡಿಕೊಳ್ಳಿರಿ.


ತನ್ನ ತಂದೆಗೆ ತನ್ನ ಗಂಡುಮಕ್ಕಳು ಕಾನಾನಿನ ಸ್ತ್ರೀಯರನ್ನು ಮದುವೆಯಾಗುವುದು ಇಷ್ಟವಿಲ್ಲವೆಂಬುದೂ ಏಸಾವನಿಗೆ ತಿಳಿಯಿತು.


ಯೆಹೋವನು ಹೇಳುತ್ತಾನೆ, “ಈ ಸಂದೇಶವನ್ನು ಆ ಜನರಿಗೆ ಹೇಳು: ‘ಆ ಸುಳ್ಳುದೇವರುಗಳು ಭೂಲೋಕವನ್ನೂ ಪರಲೋಕವನ್ನೂ ಸೃಷ್ಟಿ ಮಾಡಿಲ್ಲ. ಆ ಸುಳ್ಳುದೇವರುಗಳನ್ನು ನಾಶಮಾಡಲಾಗುವುದು; ಅವುಗಳು ಭೂಲೋಕದಿಂದಲೂ ಆಕಾಶದಿಂದಲೂ ಕಣ್ಮರೆಯಾಗುವವು.’”


ಹಿಜ್ಕೀಯನು ಯೆಹೋವನ ಸನ್ನಿಧಿಯಲ್ಲಿ, “ಯೆಹೋವನೇ, ಕೆರೂಬಿಗಳ ಮೇಲೆ ರಾಜನಾಗಿ ಕುಳಿತುಕೊಳ್ಳುವ ಇಸ್ರೇಲರ ದೇವರೇ, ಲೋಕದ ರಾಜ್ಯಗಳಿಗೆಲ್ಲಾ ನೀನೊಬ್ಬನೇ ದೇವರಾಗಿರುವೆ. ನೀನು ಪರಲೋಕವನ್ನು ಮತ್ತು ಈ ಲೋಕವನ್ನು ಸೃಷ್ಟಿಸಿದೆ!


ನೀವು ಅವರ ಪುತ್ರಿಯರಲ್ಲಿ ಕೆಲವರನ್ನು ನಿಮ್ಮ ಪುತ್ರರಿಗೆ ಹೆಂಡತಿಯರಾಗುವುದಕ್ಕೆ ಆರಿಸಿಕೊಳ್ಳುವಿರಿ. ಅವರ ಪುತ್ರಿಯರು ಸುಳ್ಳುದೇವರುಗಳ ಸೇವೆ ಮಾಡುತ್ತಾರೆ. ನಿಮ್ಮ ಪುತ್ರರನ್ನೂ ಅವರು ಅದೇ ಸೇವೆಗೆ ನಡೆಸುತ್ತಾರೆ.


ನೀನು ದೇವರಾಗಿರುವೆ. ಯೆಹೋವನೇ, ನೀನೊಬ್ಬನೇ ದೇವರು. ನೀನು ಆಕಾಶವನ್ನು ಉಂಟುಮಾಡಿರುವೆ. ಪರಲೋಕವನ್ನು ನೀನೇ ಮಾಡಿರುವೆ. ಅದರಲ್ಲಿರುವದನ್ನೆಲ್ಲಾ ನೀನೇ ನಿರ್ಮಿಸಿರುವೆ. ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ್ದು ನೀನೇ. ಸಮುದ್ರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ. ಎಲ್ಲಾದಕ್ಕೂ ಜೀವಕೊಡುವಾತನು ನೀನೇ. ಪರಲೋಕದ ದೂತರು ನಿನಗಡ್ಡಬಿದ್ದು ಆರಾಧಿಸುವರು.


ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ, ಆತನು ಭೂಪರಲೋಕಗಳನ್ನು ಉಂಟುಮಾಡಿದನು. ಅರಸನಾದ ದಾವೀದನಿಗೆ ಒಬ್ಬ ಜ್ಞಾನವುಳ್ಳ ಮಗನನ್ನು ಅನುಗ್ರಹಿಸಿದ್ದಾನೆ. ನಿನಗೆ ಜ್ಞಾನವೂ ತಿಳುವಳಿಕೆಯೂ ಇರುವದರಿಂದ ನೀನು ದೇವಾಲಯವನ್ನು ಕಟ್ಟುವೆ ಮತ್ತು ನಿನಗೂ ಒಂದು ಅರಮನೆಯನ್ನು ಕಟ್ಟುವೆ.


ಈಗ ನೀವು ನನಗೊಂದು ಪ್ರಮಾಣ ಮಾಡಬೇಕು. ನಾನು ನಿಮಗೆ ದಯೆತೋರಿ ಸಹಾಯ ಮಾಡಿದೆ. ಆದ್ದರಿಂದ ನೀವು ಸಹ ನನ್ನ ಕುಟುಂಬದವರಿಗೆ ದಯೆತೋರುವಿರೆಂಬುದಕ್ಕೆ ಒಂದು ಗುರುತನ್ನು ಕೊಡಿರಿ.


“ನೀವು ನಿಮ್ಮ ದೇವರಾದ ಯೆಹೋವನನ್ನು ಗೌರವಿಸಿ ಆತನೊಬ್ಬನನ್ನೇ ಆರಾಧಿಸಬೇಕು. ಆತನನ್ನು ಬಿಟ್ಟು ತೊಲಗದಿರಿ. ವಾಗ್ದಾನ, ಒಡಂಬಡಿಕೆಗಳನ್ನು ಮಾಡುವಾಗ ಆತನ ಹೆಸರಿನಲ್ಲಿಯೇ ಮಾಡಿರಿ.


ಆತನ ಹೆಸರಿನಲ್ಲಿಯೇ ವಾಗ್ದಾನಗಳನ್ನು ಮಾಡಿರಿ; ಅನ್ಯ ದೇವರ ಹೆಸರಿನಲ್ಲಿ ಮಾಡಕೂಡದು.


ಆದ್ದರಿಂದ ನೀನು ಈ ವಿಶೇಷ ಜಲವನ್ನು ಕುಡಿಯುವಾಗ, ನಿನಗೆ ಹಾನಿಯುಂಟಾಗುವುದು. ನಿನಗೆ ಮಕ್ಕಳಾಗುವುದಿಲ್ಲ. ನೀನು ಬಸುರಾಗಿದ್ದರೆ, ನಿನ್ನ ಮಗು ಸಾಯುವುದು. ಆಗ ನಿನ್ನ ಜನರು ನಿನ್ನನ್ನು ದೂರಮಾಡಿ ನಿನ್ನ ವಿರುದ್ಧವಾಗಿ ಕೆಟ್ಟ ಸಂಗತಿಗಳನ್ನು ಹೇಳುವರು.’ “ಬಳಿಕ ಯಾಜಕನು ಆ ಸ್ತ್ರೀಗೆ ಪ್ರಮಾಣ ಮಾಡಲು ಹೇಳಬೇಕು. ಅವಳು, ‘ನಾನು ಸುಳ್ಳಾಡಿದ್ದರೆ, ಈ ಕೆಟ್ಟ ಸಂಗತಿಗಳು ನನಗೆ ಸಂಭವಿಸಲಿ’ ಎಂದು ಹೇಳಬೇಕು.


“ನೀವು ಈ ಆಜ್ಞೆಗಳಿಗೆಲ್ಲಾ ಜಾಗರೂಕತೆಯಿಂದ ವಿಧೇಯರಾಗಬೇಕು. ಸುಳ್ಳುದೇವರುಗಳನ್ನು ಆರಾಧಿಸಬೇಡಿರಿ. ನೀವು ಅವುಗಳ ಹೆಸರುಗಳನ್ನು ಉಚ್ಚರಿಸಲೂ ಕೂಡದು.


“ನಿಮ್ಮ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ಅಲ್ಲದೆ ಯೋಸೇಫನು ತನ್ನ ಸಹೋದರರಿಗೆ, “ದೇವರು ನಿಮ್ಮನ್ನು ಈ ದೇಶದಿಂದ ಹೊರಗೆ ನಡೆಸಿದಾಗ ನನ್ನ ಮೂಳೆಗಳನ್ನು ನಿಮ್ಮೊಂದಿಗೆ ತೆಗೆದುಕೊಂಡು ಹೋಗುವಿರೆಂದು ಪ್ರಮಾಣ ಮಾಡಿ” ಎಂದು ಹೇಳಿ ಅವರಿಂದ ಪ್ರಮಾಣ ಮಾಡಿಸಿಕೊಂಡನು.


ನಂತರ ರೆಬೆಕ್ಕಳು ಇಸಾಕನಿಗೆ, “ನಿನ್ನ ಮಗನಾದ ಏಸಾವನು ಹಿತ್ತಿಯರ ಸ್ತ್ರೀಯರನ್ನು ಮದುವೆ ಮಾಡಿಕೊಂಡಿದ್ದಾನೆ. ಆ ಸ್ತ್ರೀಯರಿಂದ ನನಗೆ ಸಾಕಾಗಿ ಹೋಗಿದೆ; ಯಾಕೆಂದರೆ ಅವರು ನಮ್ಮ ಜನರಲ್ಲ. ಯಾಕೋಬನು ಸಹ ಇಂಥ ಸ್ತ್ರೀಯರಲ್ಲಿ ಒಬ್ಬಳನ್ನು ಮದುವೆ ಮಾಡಿಕೊಂಡರೆ ನಾನು ಸಾಯುವುದೇ ಮೇಲು” ಎಂದು ಹೇಳಿದಳು.


ಆದ್ದರಿಂದ ನೀನು ನನ್ನೊಡನೆ ಮತ್ತು ನನ್ನ ಮಕ್ಕಳೊಡನೆ ನ್ಯಾಯವಾಗಿ ನಡೆದುಕೊಳ್ಳುವುದಾಗಿ ದೇವರ ಮೇಲೆ ಪ್ರಮಾಣಮಾಡು. ನನಗೂ ಮತ್ತು ನೀನು ವಾಸಿಸುತ್ತಿರುವ ಈ ನಾಡಿಗೂ ದಯೆತೋರುವುದಾಗಿ ನೀನು ಪ್ರಮಾಣಮಾಡು. ನಾನು ನಿನಗೆ ದಯೆತೋರಿದಂತೆ ನೀನೂ ನನಗೆ ದಯೆತೋರುವುದಾಗಿ ಪ್ರಮಾಣಮಾಡು” ಎಂದು ಹೇಳಿದನು.


ಅಬ್ರಾಮನನ್ನು ಹೀಗೆ ಆಶೀರ್ವದಿಸಿದನು: “ಅಬ್ರಾಮನೇ, ಮಹೋನ್ನತನಾದ ದೇವರು ನಿನ್ನನ್ನು ಆಶೀರ್ವದಿಸಲಿ. ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದಾತನು ಆತನೇ.


ಈ ಹೆಣ್ಣುಮಕ್ಕಳ ಸೌಂದರ್ಯವನ್ನು ಕಂಡ ದೇವಪುತ್ರರು ತಮಗೆ ಬೇಕಾದ ಸ್ತ್ರೀಯರನ್ನು ಆರಿಸಿಕೊಂಡು ಮದುವೆಯಾದರು. ಈ ಸ್ತ್ರೀಯರು ಮಕ್ಕಳನ್ನು ಹೆತ್ತರು. ಆ ಕಾಲದಲ್ಲಿ ಮತ್ತು ಆ ಕಾಲದ ನಂತರ ನೆಫೇಲಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಪ್ರಸಿದ್ಧರಾದ ಪರಾಕ್ರಮಶಾಲಿಗಳಾಗಿದ್ದರು. ಬಳಿಕ ಯೆಹೋವನು, “ಜನರು ಕೇವಲ ಮಾನವರಷ್ಟೆ; ನನ್ನ ಆತ್ಮವು ಅವರಿಂದ ಯಾವಾಗಲೂ ತೊಂದರೆಗೆ ಗುರಿಯಾಗಕೂಡದು. ಅವರು 120 ವರ್ಷ ಬದುಕುವಂತೆ ಮಾಡುವೆನು” ಅಂದುಕೊಂಡನು.


ಜನರು ವಾಗ್ದಾನ ಮಾಡುವಾಗ ಯಾವಾಗಲೂ ತಮಗಿಂತ ದೊಡ್ಡವರಾದ ಯಾರಾದರೊಬ್ಬರನ್ನು ಬಳಸಿಕೊಳ್ಳುತ್ತಾರೆ. ಅವರು ಹೇಳಿದ್ದು ನಿಜವೆಂಬುದನ್ನು ಆ ವಾಗ್ದಾನವು ಶ್ರುತಪಡಿಸುತ್ತದೆ. ಇದರಿಂದಾಗಿ ಅವರ ಎಲ್ಲಾ ವಾಗ್ವಾದಗಳಿಗೆ ಕೊನೆಯಾಗುತ್ತದೆ.


ತಮ್ಮ ಮಾಳಿಗೆಯ ಮೇಲೆ ಹತ್ತಿ ನಕ್ಷತ್ರಗಳನ್ನು ಆರಾಧಿಸುತ್ತಾರೋ ನಾನು ಅವರನ್ನು ನಿರ್ಮೂಲ ಮಾಡುತ್ತೇನೆ. ಜನರು ತಮ್ಮ ಸುಳ್ಳು ಪುರೋಹಿತರನ್ನು ಮರೆತುಬಿಡುವರು. ಕೆಲವರು ತಮ್ಮನ್ನು ನನ್ನ ಆರಾಧಕರೆಂದು ಹೇಳಿಕೊಳ್ಳುವರು. ಆದರೆ ಈಗ ಅವರು ಸುಳ್ಳು ದೇವರಾದ ಮಲ್ಕಾಮನನ್ನು ಆರಾಧಿಸುತ್ತಾರೆ. ಅಂಥವರನ್ನು ಅವರ ಸ್ಥಳಗಳಿಂದ ತೆಗೆದುಹಾಕುವೆನು.


ಆ ಜನರು ತಮ್ಮ ಪಾಠಗಳನ್ನು ಸರಿಯಾಗಿ ಕಲಿತುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ಮೊದಲು, ಆ ಜನರು ಬಾಳನ ಹೆಸರೆತ್ತಿ ಪ್ರಮಾಣ ಮಾಡುವುದನ್ನು ನನ್ನ ಜನರಿಗೆ ಕಲಿಸಿಕೊಟ್ಟರು. ಈಗ ಆ ಜನರು ಅದೇ ರೀತಿಯಲ್ಲಿ ತಮ್ಮ ಪಾಠವನ್ನು ಕಲಿತುಕೊಳ್ಳಬೇಕೆಂಬುದು ನನ್ನ ಇಚ್ಛೆ. ಅವರು, ‘ಯೆಹೋವನ ಜೀವದಾಣೆ’ ಎಂದು ಹೇಳಿದರೆ ಅವರನ್ನು ಅಭಿವೃದ್ಧಿಪಡಿಸಿ ಅವರನ್ನು ನಮ್ಮ ಜನರ ಮಧ್ಯದಲ್ಲಿ ನೆಲೆಗೊಳಿಸುವೆನು.


ನೀನು ಹೀಗೆ ಮಾಡಿದರೆ ನನ್ನ ಹೆಸರಿನ ಮೇಲೆ ಪ್ರಮಾಣ ಮಾಡಲು ಶಕ್ತಳಾಗುವೆ. ‘ಹಾದು, ಯೆಹೋವನಾಣೆ’ ಎಂದು ಹೇಳಶಕ್ತಳಾಗುವೆ. ನೀನು ಆ ಪದಗಳನ್ನು ಸತ್ಯವಾಗಿಯೂ ಪ್ರಾಮಾಣಿಕವಾಗಿಯೂ ಸರಿಯಾಗಿ ಉಪಯೋಗಿಸಲು ಸಾಧ್ಯವಾಗುತ್ತದೆ. ನೀನು ಹೀಗೆ ಮಾಡಿದರೆ, ಎಲ್ಲಾ ಜನಾಂಗಗಳು ಯೆಹೋವನ ಆಶೀರ್ವಾದವನ್ನು ಪಡೆಯುತ್ತವೆ. ಆತನ ಕಾರ್ಯಗಳಿಗಾಗಿ ಆತನಿಗೆ ಸ್ತೋತ್ರ ಮಾಡುತ್ತವೆ.”


“ಈಗ ಜನರು ಭೂಮಿಯಿಂದ ಆಶೀರ್ವಾದ ಕೇಳುತ್ತಾರೆ. ಆದರೆ ಮುಂದಿನ ದಿನಗಳಲ್ಲಿ ಅವರು ನಂಬಿಗಸ್ತನಾದ ದೇವರಿಂದ ಆಶೀರ್ವಾದ ಕೇಳುವರು. ಈಗ ಜನರು ವಾಗ್ದಾನ ಮಾಡುವಾಗ ಭೂಮಿಯ ಬಲದಲ್ಲಿ ಭರವಸವಿಡುವರು. ಆದರೆ ಮುಂದಿನ ದಿನಗಳಲ್ಲಿ ನಂಬಿಗಸ್ತನಾದ ದೇವರ ಮೇಲೆ ಭರವಸವಿಡುವರು. ಯಾಕೆಂದರೆ ಗತಿಸಿದ ಸಂಕಟಗಳೆಲ್ಲವೂ ಮರೆತುಹೋಗುತ್ತವೆ. ಇವುಗಳು ನನ್ನ ಕಣ್ಣುಗಳಿಗೆ ಮರೆಯಾಗಿರುತ್ತವೆ.”


ಯೆಹೋವನು ಹೇಳುವುದೇನೆಂದರೆ, “ಯಾಕೋಬನ ಮನೆತನದವರೇ, ನನ್ನ ಮಾತುಗಳನ್ನು ಕೇಳಿರಿ. ಜನರು ನಿಮ್ಮನ್ನು ಇಸ್ರೇಲ್ ಎಂದು ಕರೆಯುತ್ತಾರೆ. ನೀವು ಯೆಹೂದದ ಕುಟುಂಬದವರು. ನೀವು ಯೆಹೋವನ ಹೆಸರಿನಲ್ಲಿ ಒಡಂಬಡಿಕೆ ಮಾಡಿಕೊಳ್ಳುವಿರಿ. ನೀವು ಯೆಹೋವನ ನಾಮವನ್ನು ಸ್ತುತಿಸುವಿರಿ, ಆದರೆ ನೀವು ಇವುಗಳನ್ನು ಮಾಡುವಾಗ ನಂಬಿಗಸ್ತರಾಗಿರುವದಿಲ್ಲ; ಯಥಾರ್ಥರಾಗಿರುವುದಿಲ್ಲ.


“ನನ್ನ ಪರಾಕ್ರಮದಿಂದ ನಾನು ವಾಗ್ದಾನ ಮಾಡುತ್ತೇನೆ. ನನ್ನ ಆಜ್ಞೆಯು ನ್ಯಾಯವಾದದ್ದೂ ನೀತಿಯುಳ್ಳದ್ದೂ ಆಗಿದೆ. ಇಂಥದ್ದು ನಾನು ಆಜ್ಞಾಪಿಸಿದಂತೆಯೇ ಸಂಭವಿಸುವದು. ಎಲ್ಲಾ ಜನರು ನನ್ನ ಮುಂದೆ ಅಡ್ಡಬೀಳುವರೆಂದು ನಾನು ವಾಗ್ದಾನ ಮಾಡುತ್ತೇನೆ. ಪ್ರತಿಯೊಬ್ಬನೂ ನನ್ನನ್ನು ಹಿಂಬಾಲಿಸಲು ಪ್ರತಿಜ್ಞೆ ಮಾಡುವನು.


ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಪರಲೋಕವನ್ನೂ ಭೂಲೋಕವನ್ನೂ ಸೃಷ್ಟಿಮಾಡಿದಾತನು ಆತನೇ.


ಯೋನಾತಾನನು ದಾವೀದನಿಂದ ತನ್ನ ಪ್ರೀತಿಯ ವಾಗ್ದಾನವನ್ನು ಮತ್ತೆ ಹೇಳಿಸಿದನು. ಯೋನಾತಾನನು ತನ್ನನ್ನು ತಾನು ಪ್ರೀತಿಸುತ್ತಿದ್ದಷ್ಟೆ ದಾವೀದನನ್ನೂ ಪ್ರೀತಿಸುತ್ತಿದ್ದುದ್ದೇ ಅದಕ್ಕೆ ಕಾರಣ.


ನೀವು ನನ್ನ ಹೆಸರನ್ನು ಉಪಯೋಗಿಸಿ ಸುಳ್ಳಾಣೆ ಇಟ್ಟುಕೊಳ್ಳಬಾರದು; ಇಲ್ಲವಾದರೆ ನೀವು ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸುವಿರಿ; ನಾನೇ ನಿಮ್ಮ ದೇವರಾದ ಯೆಹೋವನು!


ಆ ನೆರೆಯವನು ಆ ಪಶುವನ್ನು ಕದ್ದಿಲ್ಲದ್ದಿದ್ದರೆ ತಾನು ಕದ್ದಿಲ್ಲವೆಂದು ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಬೇಕು. ಪಶುವಿನ ಮಾಲೀಕನು ಈ ಪ್ರಮಾಣವನ್ನು ಸ್ವೀಕರಿಸಬೇಕು. ನೆರೆಯವನು ಮಾಲೀಕನಿಗೆ ಪಶುವಿಗಾಗಿ ಈಡು ಕೊಡಬೇಕಾಗಿಲ್ಲ.


ಆದರೆ ಅಬ್ರಾಮನು ಅವನಿಗೆ, “ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದ ಮಹೋನ್ನತನಾಗಿರುವ ದೇವರಾದ ಯೆಹೋವನಿಗೆ ಪ್ರಮಾಣಮಾಡಿ ಹೇಳುವುದೇನೆಂದರೆ,


ಪರಲೋಕದ ದೇವರಾದ ಯೆಹೋವನು ನನ್ನನ್ನು ಸ್ವದೇಶದಿಂದ ಈ ಸ್ಥಳಕ್ಕೆ ಕರೆದುಕೊಂಡು ಬಂದನು. ಆ ದೇಶ ನನ್ನ ತಂದೆಗೂ ನನ್ನ ಕುಟುಂಬಕ್ಕೂ ಸೇರಿದೆ. ಆದರೆ ಯೆಹೋವನು ಈ ದೇಶವನ್ನು ನನ್ನ ಸಂತತಿಗೆ ಕೊಡುವುದಾಗಿ ವಾಗ್ದಾನ ಮಾಡಿದನು. ನೀನು ನನ್ನ ಮಗನಿಗೆ ಕನ್ಯೆಯನ್ನು ಹುಡುಕಿ ಕರೆದುಕೊಂಡು ಬರಲು ಸಾಧ್ಯವಾಗುವಂತೆ ಯೆಹೋವನು ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸಲಿ.


ಇಸಾಕನು ಯಾಕೋಬನನ್ನು ಕರೆದು ಅವನನ್ನು ಆಶೀರ್ವದಿಸಿ ಅವನಿಗೆ, “ನೀನು ಕಾನಾನಿನ ಸ್ತ್ರೀಯನ್ನು ಮದುವೆಯಾಗಕೂಡದು.


ಇಸ್ರೇಲನು, “ನನಗೆ ಪ್ರಮಾಣ ಮಾಡು” ಎಂದು ಹೇಳಿದ್ದರಿಂದ ಯೋಸೇಫನು ಅವನಿಗೆ ಪ್ರಮಾಣ ಮಾಡಿದನು. ಆಮೇಲೆ ಇಸ್ರೇಲನು ಹಾಸಿಗೆಯ ಮೇಲೆ ಮತ್ತೆ ತನ್ನ ತಲೆಬಾಗಿ ದೇವರಿಗೆ ನಮಸ್ಕರಿಸಿದನು.


ಅವನ ತಂದೆತಾಯಿಗಳು, “ಇಸ್ರೇಲರಲ್ಲಿಯೇ ಒಬ್ಬ ಸ್ತ್ರೀ ಇದ್ದಾಳೆ. ನೀನು ಅವಳನ್ನು ಮದುವೆಯಾಗು. ನೀನು ಫಿಲಿಷ್ಟಯರ ಹೆಣ್ಣನ್ನು ಮದುವೆಯಾಗುವುದೇಕೆ? ಅವರು ಸುನ್ನತಿಯನ್ನು ಮಾಡಿಸಿಕೊಂಡವರಲ್ಲ” ಎಂದರು. ಆದರೆ ಸಂಸೋನನು, “ನನಗೆ ಆಕೆಯೊಡನೇ ಮದುವೆಮಾಡಿಸಿ. ನಾನು ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ” ಎಂದನು.


ಪರಲೋಕದ ದೇವರನ್ನು ಸ್ತುತಿಸಿರಿ! ಆತನ ಪ್ರೀತಿ ಶಾಶ್ವತವಾದದ್ದು.


ಈ ಮದುವೆಯು ನಮಗಾಗಿರುವ ಒಂದು ವಿಶೇಷ ಒಪ್ಪಂದವನ್ನು ತೋರಿಸುತ್ತದೆ. ಅದೇನೆಂದರೆ, ನಮ್ಮ ಗಂಡಸರು ನಿಮ್ಮ ಸ್ತ್ರೀಯರನ್ನು ಮದುವೆಯಾಗಬಹುದು ಮತ್ತು ನಿಮ್ಮ ಗಂಡಸರು ನಮ್ಮ ಸ್ತ್ರೀಯರನ್ನು ಮದುವೆಯಾಗಬಹುದು.


ಯೆಹೂದನು ಅಲ್ಲಿ ಒಬ್ಬ ಕಾನಾನ್ಯನ ಮಗಳನ್ನು ಕಂಡು ಆಕೆಯನ್ನು ಮದುವೆಮಾಡಿಕೊಂಡನು. ಆ ಹುಡುಗಿಯ ತಂದೆಯ ಹೆಸರು ಶೂಗ.


ದಾವೀದನು ಈಜಿಪ್ಟಿನವನನ್ನು, “ನಮ್ಮ ಕುಟುಂಬಗಳನ್ನು ಅಪಹರಿಸಿರುವ ಜನರ ಹತ್ತಿರಕ್ಕೆ ನಮ್ಮನ್ನು ಕರೆದುಕೊಂಡು ಹೋಗುವೆಯಾ?” ಎಂದು ಕೇಳಿದನು. ಈಜಿಪ್ಟಿನವನು, “ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಇಲ್ಲವೆ ನನ್ನ ಒಡೆಯನಿಗೆ ಮರಳಿ ಒಪ್ಪಿಸುವುದಿಲ್ಲವೆಂದು ದೇವರ ಮುಂದೆ ಪ್ರಮಾಣ ಮಾಡಿರಿ. ಆಗ ನಾನು ನಿಮ್ಮವರನ್ನು ಕಂಡು ಹಿಡಿಯಲು ಸಹಾಯ ಮಾಡುತ್ತೇನೆ” ಎಂದು ಹೇಳಿದನು.


ಅದಕ್ಕೆ ಅವರು ಈ ರೀತಿಯಾಗಿ ಉತ್ತರಕೊಟ್ಟರು: “ಭೂಪರಲೋಕಗಳ ದೇವರ ಸೇವಕರಾದ ನಾವು ಬಹಳ ವರ್ಷಗಳ ಹಿಂದೆ ಇಸ್ರೇಲರ ರಾಜನು ಕಟ್ಟಿಸಿ ಮುಗಿಸಿದ ದೇವಾಲಯವನ್ನು ಮತ್ತೆ ಕಟ್ಟುತ್ತಿದ್ದೇವೆ.


ಮದುವೆ ಮಾಡಿಕೊಳ್ಳಿರಿ; ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೂ ನಿಮ್ಮ ಹೆಣ್ಣುಮಕ್ಕಳಿಗೂ ಮದುವೆ ಮಾಡಿರಿ. ಅವರಿಗೂ ಗಂಡು ಮತ್ತು ಹೆಣ್ಣು ಮಕ್ಕಳಾಗಲಿ. ಅನೇಕ ಮಕ್ಕಳನ್ನು ಹೆತ್ತು ಬಾಬಿಲೋನಿನಲ್ಲಿ ಬಹುಸಂಖ್ಯಾತರಾಗಿ. ಅಲ್ಪಸಂಖ್ಯಾತರಾಗಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು