33 ನಂತರ ಲಾಬಾನನು ಅವನಿಗೆ ಊಟವನ್ನು ಕೊಟ್ಟನು. ಆದರೆ ಆ ಸೇವಕನು ಊಟಮಾಡದೆ ಅವರಿಗೆ, “ನಾನು ಬಂದ ಉದ್ದೇಶವನ್ನು ತಿಳಿಸದೆ ಊಟಮಾಡುವುದಿಲ್ಲ” ಎಂದು ಹೇಳಿದನು. ಅದಕ್ಕೆ ಲಾಬಾನನು, “ಸರಿ, ಹೇಳು” ಅಂದನು.
ಕೆಲವರಿಗೆ ವಿಶ್ವಾಸಿಗಳಾದ ಯಜಮಾನರಿದ್ದಾರೆ. ಆದ್ದರಿಂದ ಆ ಗುಲಾಮರು ಮತ್ತು ಯಜಮಾನರು ಸಹೋದರರಾಗಿದ್ದಾರೆ. ಆದರೆ ಅವರು ತಮ್ಮ ಯಜಮಾನರಿಗೆ ಕಡಿಮೆ ಗೌರವ ಕೊಡದೆ ತಮ್ಮ ಯಜಮಾನರ ಸೇವೆಯನ್ನು ಇನ್ನೂ ಉತ್ತಮವಾಗಿ ಮಾಡಬೇಕು. ಏಕೆಂದರೆ ಅವರು ಒಳ್ಳೆಯ ಕೆಲಸಗಳಿಗಾಗಿ ತಮ್ಮನ್ನು ಪ್ರತಿಷ್ಠಿಸಿಕೊಳ್ಳುವ ವಿಶ್ವಾಸಿಗಳಾಗಿದ್ದಾರೆ ಮತ್ತು ಸ್ನೇಹಿತರಾಗಿದ್ದಾರೆ. ಈ ಕಾರ್ಯಗಳನ್ನು ಮಾಡುವಂತೆ ನೀನು ಜನರಿಗೆ ಉಪದೇಶಿಸಬೇಕು ಮತ್ತು ತಿಳಿಸಬೇಕು.
ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ಆ ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು.
ನಿನ್ನ ಕೆಲಸಕಾರ್ಯಗಳನ್ನು ನಿನ್ನಿಂದಾದಷ್ಟು ಉತ್ತಮವಾಗಿ ಮಾಡು. ಸಮಾಧಿಯಲ್ಲಿ ನಿನಗೆ ಕೆಲಸವಿಲ್ಲ. ಅಲ್ಲಿ ಆಲೋಚನೆಯಾಗಲಿ ಜ್ಞಾನವಾಗಲಿ ವಿವೇಕವಾಗಲಿ ಇರುವುದಿಲ್ಲ. ನಾವೆಲ್ಲರೂ ಮರಣದ ಆ ಸ್ಥಳಕ್ಕೆ ಹೋಗುತ್ತಿದ್ದೇವೆ.
ಆದ್ದರಿಂದ ಅಬ್ರಹಾಮನ ಸೇವಕನು ಲಾಬಾನನ ಮನೆಗೆ ಹೋದನು. ಒಂಟೆಗಳ ಮೇಲಿದ್ದ ಹೊರೆಗಳನ್ನು ಇಳಿಸಲು ಲಾಬಾನನು ಸಹಾಯಮಾಡಿದನು; ಒಂಟೆಗಳಿಗೆ ಸ್ಥಳಮಾಡಿಕೊಟ್ಟು ಮೇವನ್ನು ಕೊಡಿಸಿದನು; ಆಮೇಲೆ ಆ ಸೇವಕನಿಗೆ ಮತ್ತು ಅವನ ಸಂಗಡ ಇದ್ದವರಿಗೆ, ಕಾಲು ತೊಳೆದುಕೊಳ್ಳಲು ನೀರು ಕೊಟ್ಟನು.
ಬಳಿಕ ಆ ವೃದ್ಧನು ಆ ಲೇವಿಯನನ್ನು ಮತ್ತು ಅವನ ಸಂಗಡ ಇದ್ದ ಜನರನ್ನು ತನ್ನ ಮನೆಗೆ ಕರೆದುಕೊಂಡು ಹೋದನು; ಅವರ ಕತ್ತೆಗಳಿಗೆ ಮೇವು ಹಾಕಿದನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡರು. ಆಮೇಲೆ ಅವರು ಅನ್ನಪಾನಗಳನ್ನು ತೆಗೆದುಕೊಂಡರು.