42 ನಾನು ಈ ಹೊತ್ತು ಈ ಊರಿನ ಬುಗ್ಗೆಯ ಬಳಿಗೆ ಬಂದಾಗ, “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನಷ್ಟೆ; ನೀನು ನನ್ನ ಪ್ರಯಾಣವನ್ನು ಸಫಲಮಾಡುವುದಾದರೆ
42 “ನಾನು ಇಂದು ಈ ಊರಿನ ಬುಗ್ಗೆಯ ಬಳಿಗೆ ಬಂದೆ. ‘ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರಾ, ಇಗೋ, ನೀರಿನ ಬುಗ್ಗೆಯ ಬಳಿಯಲ್ಲೇ ನಿಂತಿದ್ದೇನೆ. ನೀವು ನನ್ನ ಪ್ರಯಾಣವನ್ನು ಸಫಲ ಮಾಡಿದ್ದಾದರೆ
42 ನಾನು ಈ ಹೊತ್ತು ಈ ಊರಿನ ಬುಗ್ಗೆಯ ಬಳಿಗೆ ಬಂದಾಗ - ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನಷ್ಟೆ; ನೀನು ನನ್ನ ಪ್ರಯಾಣವನ್ನು ಸಫಲಮಾಡಿದ್ದಾದರೆ ನೀರಿಗೆ ಬರುವ ಯಾವ ಹುಡುಗಿಗೆ -
ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.”
ಅಹವಾ ನದಿಯ ದಡದಲ್ಲಿದ್ದಾಗ ನಮಗೆ ಸುಖ ಪ್ರಯಾಣ ದೊರೆಯುವಂತೆ ಎಲ್ಲಾ ತರದ ತೊಂದರೆಗಳಿಂದ ಪಾರು ಮಾಡುವಂತೆ ಮತ್ತು ನಮ್ಮಲ್ಲಿರುವ ಸ್ವತ್ತುಗಳನ್ನು ಕಾಪಾಡುವಂತೆ ನಮ್ಮ ದೇವರಲ್ಲಿ ದೀನತೆಯಿಂದ ಉಪವಾಸ ಪ್ರಾರ್ಥನೆ ಮಾಡಬೇಕೆಂದು ನೆರೆದುಬಂದ ಜನರಿಗೆ ಪ್ರಕಟಿಸಿದೆನು.
ಆ ಜನರು, “ಕೊರ್ನೇಲಿಯ ಎಂಬ ಒಬ್ಬ ಸೇನಾಧಿಕಾರಿ ಇದ್ದಾನೆ. ಅವನು ಧಾರ್ಮಿಕ ವ್ಯಕ್ತಿ. ಅವನು ದೇವರನ್ನು ಆರಾಧಿಸುತ್ತಾನೆ. ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನೀನು ಹೇಳುವ ಸಂಗತಿಗಳನ್ನು ಕೇಳಬೇಕೆಂದು ದೇವದೂತನೊಬ್ಬನು ಕೊರ್ನೇಲಿಯನಿಗೆ ತಿಳಿಸಿದ್ದಾನೆ” ಎಂದು ಹೇಳಿದರು.
ಲಾಬಾನನು ಅವನಿಗೆ, “ಯೆಹೋವನ ಆಶೀರ್ವಾದ ಹೊಂದಿದವನೇ, ಒಳಗೆ ಬಾ. ನೀನು ಹೊರಗಡೆ ನಿಂತುಕೊಳ್ಳಬೇಕಾಗಿಲ್ಲ. ನೀನು ಇಳಿದುಕೊಳ್ಳುವುದಕ್ಕಾಗಿ ಕೋಣೆಯನ್ನೂ ನಿನ್ನ ಒಂಟೆಗಳಿಗಾಗಿ ಸ್ಥಳವನ್ನೂ ಸಿದ್ಧಪಡಿಸಿದ್ದೇನೆ” ಎಂದು ಹೇಳಿದನು.
ಬಳಿಕ ಆಕೆಗೆ, “ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನ ಒಡೆಯನಿಗೆ ದಯಾಳುವೂ ನಂಬಿಗಸ್ತನೂ ಆಗಿದ್ದಾನೆ. ನನ್ನ ಒಡೆಯನ ಮಗನಿಗಾಗಿ ಯೆಹೋವನು ನನ್ನನ್ನು ನನ್ನ ಒಡೆಯನ ಕುಟುಂಬಕ್ಕೆ ನಡೆಸಿದ್ದಾನೆ” ಎಂದು ಹೇಳಿದನು.
ಆದರೆ ಆ ಸೇವಕನು, “ಈ ಪಟ್ಟಣದಲ್ಲಿ ಒಬ್ಬ ದೇವರ ಮನುಷ್ಯನಿದ್ದಾನೆ. ಜನರು ಅವನನ್ನು ಗೌರವಿಸುತ್ತಾರೆ. ಅವನು ಹೇಳುವ ವಿಷಯಗಳೆಲ್ಲ ನಿಜವಾಗುತ್ತವೆ. ಆದ್ದರಿಂದ ಈ ಪಟ್ಟಣಕ್ಕೆ ಹೋಗೋಣ ಬಹುಶಃ ನಾವು ಮುಂದೆ ಎಲ್ಲಿಗೆ ಹೋಗಬೇಕೆಂಬುದನ್ನು ಈ ದೇವರ ಮನುಷ್ಯನು ತಿಳಿಸಬಹುದು” ಎಂದು ಉತ್ತರಿಸಿದನು.