ಆದಿಕಾಂಡ 24:47 - ಪರಿಶುದ್ದ ಬೈಬಲ್47 ಆಮೇಲೆ ನಾನು ಆಕೆಗೆ, ‘ನಿನ್ನ ತಂದೆ ಯಾರು?’ ಎಂದು ಕೇಳಿದೆ, ಆಕೆ ‘ನನ್ನ ತಂದೆಯ ಹೆಸರು ಬೆತೂವೇಲ. ಅವನು ಮಿಲ್ಕಳ ಮತ್ತು ನಾಹೋರನ ಮಗನು’ ಎಂದು ಹೇಳಿದಳು. ಆಗ ನಾನು ಆಕೆಗೆ ಉಂಗುರವನ್ನೂ ಕೈಬಳೆಗಳನ್ನೂ ಕೊಟ್ಟೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ನೀನು ಯಾರ ಮಗಳೆಂದು ನಾನು ಕೇಳಿದ್ದಕ್ಕೆ ಆಕೆಯು, ‘ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು’ ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ನೀನು ಯಾರ ಮಗಳೆಂದು ಕೇಳಿದ್ದಕ್ಕೆ, 'ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು’ ಎಂದಳು. ಅದನ್ನು ಕೇಳಿ ನಾನು ಆಕೆಗೆ ಮೂಗುತಿಯನ್ನೂ ಕೈಗಳಿಗೆ ಬಳೆಗಳನ್ನೂ ತೊಡಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ನೀನು ಯಾರ ಮಗಳೆಂದು ನಾನು ಕೇಳಿದ್ದಕ್ಕೆ ಆಕೆ - ನಾಹೋರನಿಗೆ ವಿುಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು ಅಂದಳು. ಅದನ್ನು ಕೇಳಿ ನಾನು ಆಕೆಯ ಮೂಗಿಗೆ ಮೂಗುತಿಯನ್ನೂ ಕೈಗಳಿಗೆ ಬಳೆಗಳನ್ನೂ ಇಟ್ಟು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 “ನಾನು ಆಕೆಗೆ, ‘ನೀನು ಯಾರ ಮಗಳು?’ ಎಂದು ಕೇಳಿದೆನು. “ಅದಕ್ಕವಳು, ‘ನಾಹೋರನಿಗೆ ಮಿಲ್ಕಾಳು ಹೆತ್ತ ಮಗನಾದ ಬೆತೂಯೇಲನ ಮಗಳು,’ ಎಂದಳು. “ಆಗ ನಾನು ಆಕೆಗೆ ಮೂಗುತಿಯನ್ನೂ, ಆಕೆಯ ಕೈಗಳಿಗೆ ಬಳೆಗಳನ್ನೂ ಕೊಟ್ಟು, ಅಧ್ಯಾಯವನ್ನು ನೋಡಿ |