ಆದಿಕಾಂಡ 24:5 - ಪರಿಶುದ್ದ ಬೈಬಲ್5 ಸೇವಕನು ಅವನಿಗೆ, “ಆ ಕನ್ಯೆಯು ನನ್ನೊಡನೆ ಈ ದೇಶಕ್ಕೆ ಬರಲು ಒಪ್ಪದಿದ್ದರೆ, ನಾನು ನಿನ್ನ ಮಗನನ್ನು ನಿನ್ನ ಸ್ವದೇಶಕ್ಕೆ ಕರೆದುಕೊಂಡು ಹೋಗಬೇಕೇ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದಕ್ಕೆ ಆ ಸೇವಕನು, “ಒಂದು ವೇಳೆ ನನ್ನೊಡನೆ ಈ ದೇಶಕ್ಕೆ ಬರುವುದಕ್ಕೆ ಆ ಸ್ತ್ರೀಗೆ ಮನಸ್ಸಿಲ್ಲದೆ ಹೋದರೆ, ನೀನು ಬಿಟ್ಟು ಬಂದ ಆ ದೇಶಕ್ಕೆ ನಾನು ನಿನ್ನ ಮಗನನ್ನು ತಿರುಗಿ ಕರೆದುಕೊಂಡು ಹೋಗಬೇಕೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅದಕ್ಕೆ ಆ ಸೇವಕ, “ಒಂದು ವೇಳೆ ಆ ಕನ್ಯೆಗೆ ಈ ನಾಡಿಗೆ ನನ್ನೊಡನೆ ಬರಲು ಇಷ್ಟವಿಲ್ಲದೆ ಹೋದೀತು. ಆಗ, ನೀವು ಬಿಟ್ಟುಬಂದ ನಾಡಿಗೆ ನಿಮ್ಮ ಮಗನನ್ನು ಮರಳಿ ಕರೆದುಕೊಂಡು ಹೋಗಬಹುದೆ?” ಎಂದು ವಿಚಾರಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅದಕ್ಕೆ ಆ ಸೇವಕನು - ಒಂದು ವೇಳೆ ನನ್ನ ಹಿಂದೆ ಈ ದೇಶಕ್ಕೆ ಬರುವದಕ್ಕೆ ಆ ಕನ್ಯೆಗೆ ಇಷ್ಟವಿಲ್ಲದೆ ಹೋದೀತು; ನೀನು ಬಿಟ್ಟುಬಂದ ಆ ದೇಶಕ್ಕೆ ನಾನು ನಿನ್ನ ಮಗನನ್ನು ತಿರಿಗಿ ಕರಕೊಂಡು ಹೋಗಬೇಕನ್ನುತ್ತೀಯೋ ಎಂದು ಕೇಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆ ಸೇವಕನು ಅವನಿಗೆ, “ಒಂದು ವೇಳೆ ನನ್ನನ್ನು ಹಿಂಬಾಲಿಸಿ, ಈ ದೇಶಕ್ಕೆ ಬರಲು ಆ ಸ್ತ್ರೀಗೆ ಮನಸ್ಸಿಲ್ಲದೆ ಹೋದರೆ, ನೀನು ಬಿಟ್ಟುಬಂದ ದೇಶಕ್ಕೆ ನಿನ್ನ ಮಗನನ್ನು ತಿರುಗಿ ಕರೆದುಕೊಂಡು ಹೋಗಬೇಕೋ?” ಎಂದನು. ಅಧ್ಯಾಯವನ್ನು ನೋಡಿ |