ಆದಿಕಾಂಡ 24:50 - ಪರಿಶುದ್ದ ಬೈಬಲ್50 ಅದಕ್ಕೆ ಲಾಬಾನನು ಮತ್ತು ಬೆತೂವೇಲನು, “ನಿನ್ನನ್ನು ಯೆಹೋವನೇ ಕಳುಹಿಸಿದ್ದಾನೆ. ನಡೆಯತಕ್ಕದ್ದನ್ನು ಬದಲಾಯಿಸಲು ನಮಗೆ ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಅದಕ್ಕೆ ಲಾಬಾನನೂ, ಬೆತೂವೇಲನೂ, “ಈ ಕಾರ್ಯವು ಯೆಹೋವನಿಂದಲೇ ಉಂಟಾಯಿತು; ನಾವಂತೂ ಹೌದೆಂದೂ, ಅಲ್ಲವೆಂದೂ ಹೇಳಲಾರೆವು. ರೆಬೆಕ್ಕಳನ್ನು ನಿನ್ನ ವಶಕ್ಕೆ ಕೊಡುತ್ತೇವೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಅದಕ್ಕೆ ಲಾಬಾನನು ಮತ್ತು ಬೆತೂವೇಲನು, ” ಇದು ಸರ್ವೇಶ್ವರ ಸ್ವಾಮಿಯಿಂದಲೇ ಬಂದ ಸೂಚನೆ, ಇದಕ್ಕೆ ನಾವು ನಿನಗೆ 'ಹೌದು - ಇಲ್ಲ’ ಎಂದು ಹೇಳಲಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಅದಕ್ಕೆ ಲಾಬಾನನು ಬೆತೂವೇಲನೂ - ಈ ಕಾರ್ಯವು ಯೆಹೋವನಿಂದಲೇ ಉಂಟಾಯಿತು. ನಾವಂತೂ ಹೌದೆಂದೂ ಅಲ್ಲವೆಂದೂ ಹೇಳಲಾರೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಅದಕ್ಕೆ ಲಾಬಾನನು ಮತ್ತು ಬೆತೂಯೇಲನು, “ಈ ಕಾರ್ಯವು ಯೆಹೋವ ದೇವರಿಂದಲೇ ಉಂಟಾಯಿತು. ನಾವಂತೂ ಹೌದೆಂದೂ ಅಲ್ಲವೆಂದೂ ಹೇಳಲಾರೆವು ಅಧ್ಯಾಯವನ್ನು ನೋಡಿ |
ನೀನು ಅವರಿಗೆ, ‘ನಿಮ್ಮ ಸೋದರರಾದ ಇಸ್ರೇಲರ ವಿರುದ್ಧ ನೀವು ಯುದ್ಧಕ್ಕೆ ಹೋಗಲೇಬಾರದೆಂದು ಯೆಹೋವನು ಹೇಳುತ್ತಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ಮನೆಗೆ ಹೋಗಬೇಕು. ಈ ಸಂಗತಿಗಳೆಲ್ಲ ಸಂಭವಿಸುವಂತೆ ನಾನೇ ಮಾಡಿದೆನು’ ಎಂದು ಹೇಳು” ಎಂಬುದಾಗಿ ತಿಳಿಸಿದನು. ಆದ್ದರಿಂದ ರೆಹಬ್ಬಾಮನ ಸೈನ್ಯದಲ್ಲಿನ ಜನರೆಲ್ಲರೂ ಯೆಹೋವನ ಆಜ್ಞೆಯನ್ನು ಅನುಸರಿಸಿದರು. ಅವರು ತಮ್ಮ ಮನೆಗಳಿಗೆ ಹೋದರು.