Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:51 - ಪರಿಶುದ್ದ ಬೈಬಲ್‌

51 ರೆಬೆಕ್ಕಳು ನಿಮ್ಮವಳು. ನೀನು ಆಕೆಯನ್ನು ಕರೆದುಕೊಂಡು ಹೋಗಿ ಯೆಹೋವನ ಇಷ್ಟಕ್ಕನುಸಾರವಾಗಿ ನಿನ್ನ ಒಡೆಯನ ಮಗನಿಗೆ ಮದುವೆ ಮಾಡಿಸು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಕರೆದುಕೊಂಡು ಹೋಗಬಹುದು; ಯೆಹೋವನು ಹೇಳಿದಂತೆಯೇ ರೆಬೆಕ್ಕಳು ನಿನ್ನ ದಣಿಯ ಮಗನಿಗೆ ಹೆಂಡತಿಯಾಗಲಿ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ರೆಬೆಕ್ಕಳನ್ನು ಇಗೋ ನಿನ್ನ ವಶಕ್ಕೆ ಒಪ್ಪಿಸುತ್ತಿದ್ದೇವೆ; ಕರೆದುಕೊಂಡು ಹೋಗಬಹುದು. ಸರ್ವೇಶ್ವರ ಹೇಳಿದಂತೆಯೇ ಆಕೆ ನಿನ್ನೊಡೆಯನ ಮಗನಿಗೆ ಪತ್ನಿ ಆಗಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ರೆಬೆಕ್ಕಳನ್ನು ನಿನ್ನ ವಶಕ್ಕೆ ಕೊಡುತ್ತೇವೆ; ಕರೆದುಕೊಂಡು ಹೋಗಬಹುದು; ಯೆಹೋವನು ಹೇಳಿದಂತೆಯೇ ಆಕೆ ನಿನ್ನ ದಣಿಯ ಮಗನಿಗೆ ಹೆಂಡತಿಯಾಗಲಿ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ರೆಬೆಕ್ಕಳನ್ನು ನಿನ್ನ ವಶಕ್ಕೆ ಕೊಡುತ್ತೇವೆ; ಕರೆದುಕೊಂಡು ಹೋಗಬಹುದು; ಯೆಹೋವ ದೇವರು ಹೇಳಿದಂತೆಯೇ ಆಕೆ ನಿನ್ನೊಡೆಯನ ಮಗನಿಗೆ ಹೆಂಡತಿಯಾಗಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:51
6 ತಿಳಿವುಗಳ ಹೋಲಿಕೆ  

ಆದರೆ ರಾಜನು, “ಚೆರೂಯಳ ಗಂಡುಮಕ್ಕಳೇ, ಈಗ ನಾನೇನು ಮಾಡಲಿ? ಶಿಮ್ಮಿಯು ನನ್ನನ್ನು ಶಪಿಸುತ್ತಿರುವುದು ನಿಜ. ಆದರೆ ನನ್ನನ್ನು ಶಪಿಸಲು ಯೆಹೋವನೇ ಅವನಿಗೆ ಹೇಳಿದ್ದಾನೆ” ಎಂದನು.


ಆ ಸೇವಕನು ಪ್ರಾರ್ಥನೆ ಮಾಡಿ ಮುಗಿಸುವುದಕ್ಕಿಂತ ಮೊದಲೇ ರೆಬೆಕ್ಕ ಎಂಬ ಯುವತಿಯು ಬಾವಿಯ ಬಳಿಗೆ ಬಂದಳು. ರೆಬೆಕ್ಕಳು ಬೆತೂವೇಲನ ಮಗಳು. ಬೆತೂವೇಲನು ಮಿಲ್ಕಳ ಮತ್ತು ನಾಹೋರನ ಮಗನು. ನಾಹೋರನು ಅಬ್ರಹಾಮನ ತಮ್ಮ. ರೆಬೆಕ್ಕಳು ತನ್ನ ಹೆಗಲ ಮೇಲೆ ನೀರಿನ ಕೊಡವನ್ನು ತೆಗೆದುಕೊಂಡು ಬಾವಿಗೆ ಬಂದಳು.


ಅಬೀಮೆಲೆಕನು ಅಬ್ರಹಾಮನಿಗೆ, “ಇಗೋ, ಇದು ನನ್ನ ದೇಶ. ನಿನಗೆ ಇಷ್ಟವಾದ ಸ್ಥಳದಲ್ಲಿ ವಾಸಮಾಡು” ಎಂದು ಹೇಳಿದನು.


ಅದಕ್ಕೆ ಲಾಬಾನನು ಮತ್ತು ಬೆತೂವೇಲನು, “ನಿನ್ನನ್ನು ಯೆಹೋವನೇ ಕಳುಹಿಸಿದ್ದಾನೆ. ನಡೆಯತಕ್ಕದ್ದನ್ನು ಬದಲಾಯಿಸಲು ನಮಗೆ ಸಾಧ್ಯವಿಲ್ಲ.


ಅಬ್ರಹಾಮನ ಸೇವಕನು ಈ ಮಾತುಗಳನ್ನು ಕೇಳಿ ಯೆಹೋವನಿಗೆ ನೆಲದವರೆಗೂ ತಲೆಬಾಗಿ ನಮಸ್ಕರಿಸಿದನು.


ಮದುವೆ ಮಾಡಿಕೊಳ್ಳಿರಿ; ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೂ ನಿಮ್ಮ ಹೆಣ್ಣುಮಕ್ಕಳಿಗೂ ಮದುವೆ ಮಾಡಿರಿ. ಅವರಿಗೂ ಗಂಡು ಮತ್ತು ಹೆಣ್ಣು ಮಕ್ಕಳಾಗಲಿ. ಅನೇಕ ಮಕ್ಕಳನ್ನು ಹೆತ್ತು ಬಾಬಿಲೋನಿನಲ್ಲಿ ಬಹುಸಂಖ್ಯಾತರಾಗಿ. ಅಲ್ಪಸಂಖ್ಯಾತರಾಗಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು