Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:52 - ಪರಿಶುದ್ದ ಬೈಬಲ್‌

52 ಅಬ್ರಹಾಮನ ಸೇವಕನು ಈ ಮಾತುಗಳನ್ನು ಕೇಳಿ ಯೆಹೋವನಿಗೆ ನೆಲದವರೆಗೂ ತಲೆಬಾಗಿ ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಅಬ್ರಹಾಮನ ಸೇವಕನು ಅವರ ಮಾತನ್ನು ಕೇಳಿದಾಗ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ಅಬ್ರಹಾಮನ ಸೇವಕನು ಅವರ ಮಾತನ್ನು ಕೇಳಿ ಸಾಷ್ಟಾಂಗವೆರಗಿ ಸರ್ವೇಶ್ವರ ಸ್ವಾಮಿಯನ್ನು ವಂದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಅಬ್ರಹಾಮನ ಸೇವಕನು ಅವರ ಮಾತನ್ನು ಕೇಳಿದಾಗ ಯೆಹೋವನಿಗೆ ಬೊಗ್ಗಿ ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಅಬ್ರಹಾಮನ ಸೇವಕನು ಅವರ ಮಾತನ್ನು ಕೇಳಿದಾಗ ಯೆಹೋವ ದೇವರ ಮುಂದೆ ಅಡ್ಡಬಿದ್ದು, ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:52
12 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ನಾನು ತಲೆಬಾಗಿ ಯೆಹೋವನಿಗೆ ವಂದನೆ ಸಲ್ಲಿಸಿದೆನು. ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನನ್ನು ಸ್ತುತಿಸಿ ಕೊಂಡಾಡಿದೆನು; ಯಾಕೆಂದರೆ ಆತನು ನನ್ನನ್ನು ನನ್ನ ಒಡೆಯನ ತಮ್ಮನ ಮೊಮ್ಮಗಳ ಬಳಿಗೆ ನೇರವಾಗಿ ನಡೆಸಿದನು.


ಆಗ ಆ ಸೇವಕನು ತಲೆಬಾಗಿ ಯೆಹೋವನನ್ನು ಆರಾಧಿಸಿದನು.


ಬನ್ನಿರಿ, ಆತನಿಗೆ ಅಡ್ಡಬಿದ್ದು ಆರಾಧಿಸೋಣ. ನಮ್ಮನ್ನು ಸೃಷ್ಟಿಸಿದ ಯೆಹೋವನನ್ನು ಕೊಂಡಾಡೋಣ.


ಯೆಹೋಷಾಫಾಟನು ನೆಲದ ಮೇಲೆ ಸಾಷ್ಟಾಂಗನಮಸ್ಕಾರ ಮಾಡಿದನು. ಹಾಗೆಯೇ, ನೆರೆದಿದ್ದ ಜನರೆಲ್ಲರೂ ಯೆಹೋವನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.


ನೆರೆದು ಬಂದವರಿಗೆ ದಾವೀದನು, “ದೇವರಾದ ಯೆಹೋವನಿಗೆ ಸ್ತೋತ್ರಮಾಡಿರಿ” ಎಂದನು. ಆಗ ಎಲ್ಲರೂ ಅವರ ಪೂರ್ವಿಕರ ದೇವರಿಗೆ ಸ್ತುತಿಸುತ್ತಾ ತಲೆಬಾಗಿ ದೇವರನ್ನೂ ಅರಸನನ್ನೂ ನಮಸ್ಕರಿಸಿದರು.


ಅವರು ಆ ಮನೆಗೆ ಬಂದಾಗ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ಅಲ್ಲದೆ ತಾವು ಮಗುವಿಗಾಗಿ ತಂದಿದ್ದ ಕಾಣಿಕೆಗಳನ್ನು ತೆರೆದು ಚಿನ್ನ, ಧೂಪ ಮತ್ತು ಸುಗಂಧ ದ್ರವ್ಯಗಳನ್ನು ನೀಡಿದರು.


ರೆಬೆಕ್ಕಳು ನಿಮ್ಮವಳು. ನೀನು ಆಕೆಯನ್ನು ಕರೆದುಕೊಂಡು ಹೋಗಿ ಯೆಹೋವನ ಇಷ್ಟಕ್ಕನುಸಾರವಾಗಿ ನಿನ್ನ ಒಡೆಯನ ಮಗನಿಗೆ ಮದುವೆ ಮಾಡಿಸು” ಎಂದು ಹೇಳಿದರು.


ಈಗ ನಾನು ಈ ಮಗನನ್ನು ಯೆಹೋವನಿಗೆ ಒಪ್ಪಿಸುತ್ತೇನೆ. ಇವನು ಜೀವದಿಂದಿರುವ ತನಕ ಯೆಹೋವನಿಗೆ ಪ್ರತಿಷ್ಠಿತನಾಗಿರುತ್ತಾನೆ” ಎಂದು ಏಲಿಗೆ ಹೇಳಿದಳು. ಬಳಿಕ ಹನ್ನಳು ಆ ಬಾಲಕನನ್ನು ಅಲ್ಲಿಯೇ ಬಿಟ್ಟು ಯೆಹೋವನನ್ನು ಆರಾಧಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು