ಆದಿಕಾಂಡ 24:53 - ಪರಿಶುದ್ದ ಬೈಬಲ್53 ಆಮೇಲೆ ಆ ಸೇವಕನು ತಾನು ತಂದಿದ್ದ ಉಡುಗೊರೆಗಳನ್ನು ರೆಬೆಕ್ಕಳಿಗೆ ಕೊಟ್ಟನು. ಅವನು ರೆಬೆಕ್ಕಳಿಗೆ ಬೆಳ್ಳಿಬಂಗಾರಗಳ ಒಡವೆಗಳನ್ನೂ ಶ್ರೇಷ್ಠವಾದ ಬಟ್ಟೆಗಳನ್ನೂ ಕೊಟ್ಟನು. ಇದಲ್ಲದೆ ಅವನು ಬೆಲೆಬಾಳುವ ಉಡುಗೊರೆಗಳನ್ನು ಆಕೆಯ ಅಣ್ಣನಿಗೂ ತಾಯಿಗೂ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಆ ಮೇಲೆ ತಾನು ತಂದಿದ್ದ ಬೆಳ್ಳಿ ಬಂಗಾರದ ಒಡವೆಗಳನ್ನೂ, ವಸ್ತ್ರಗಳನ್ನೂ ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಸಹ ಬೆಲೆಯುಳ್ಳ ವಸ್ತುಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ಬಳಿಕ ತಾನು ತಂದಿದ್ದ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ವಸ್ತ್ರಗಳನ್ನು ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಬೆಲೆಬಾಳುವ ಉಡುಗೊರೆಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ಆಮೇಲೆ ತಾನು ತಂದಿದ್ದ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಸಹ ಬೆಲೆಯುಳ್ಳ ಉಡುಗೊರೆಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ಅವನು ಬೆಳ್ಳಿಯ ಒಡವೆ, ಬಂಗಾರದ ಒಡವೆ, ವಸ್ತ್ರಗಳನ್ನೂ ತಂದು, ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ, ಆಕೆಯ ತಾಯಿಗೂ ಅಮೂಲ್ಯವಾದ ಉಡುಗೊರೆಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿ |
“ಪ್ರತಿಯೊಬ್ಬ ಇಬ್ರಿಯ ಸ್ತ್ರೀಯು ಈಜಿಪ್ಟಿನ ನೆರೆಯವರನ್ನಾಗಲಿ ಅಥವಾ ತನ್ನ ಮನೆಯಲ್ಲಿ ವಾಸಿಸುತ್ತಿರುವ ಯಾವುದೇ ಸ್ತ್ರೀಯನ್ನಾಗಲಿ ಕೇಳಿದರೆ ಅವರು ಆಕೆಗೆ ಉಡುಗೊರೆಗಳನ್ನು ಕೊಡುವರು. ನಿನ್ನ ಜನರು ಬೆಳ್ಳಿಬಂಗಾರಗಳನ್ನು, ಶ್ರೇಷ್ಠವಾದ ಬಟ್ಟೆಗಳನ್ನು ಪಡೆಯುವರು. ನೀವು ಈಜಿಪ್ಟನ್ನು ಬಿಡುವಾಗ ಆ ಉಡುಗೊರೆಗಳನ್ನು ನಿಮ್ಮ ಮಕ್ಕಳಿಗೆ ತೊಡಿಸುವಿರಿ. ಈ ರೀತಿಯಲ್ಲಿ ನೀವು ಈಜಿಪ್ಟಿನವರ ಐಶ್ವರ್ಯವನ್ನು ತೆಗೆದುಕೊಂಡು ಹೋಗುವಿರಿ” ಅಂದನು.
ಅವುಗಳನ್ನು ನೋಡಿ ಹಿಜ್ಕೀಯನಿಗೆ ಬಹು ಸಂತೋಷವಾಯಿತು. ಅವನು ಬಾಬಿಲೋನಿನ ದೂತರಿಗೆ ತನ್ನ ಅರಮನೆಯ ಉಗ್ರಾಣದಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನೂ ತಾನು ಕೊಡಿಸಿಟ್ಟಿದ್ದ ಬೆಳ್ಳಿಬಂಗಾರಗಳನ್ನೂ ಸಾಂಬಾರ ಪದಾರ್ಥಗಳನ್ನೂ ಮತ್ತು ಸುಗಂಧದ್ರವ್ಯಗಳನ್ನೂ ತೋರಿಸಿದನು. ಅಲ್ಲದೆ ಯುದ್ಧದಲ್ಲಿ ಉಪಯೋಗಿಸುವ ಖಡ್ಗಗಳನ್ನು, ಗುರಾಣಿಗಳನ್ನು ತೋರಿಸಿದನು; ಅಲ್ಲದೆ ತನ್ನ ರಾಜ್ಯದಲ್ಲಿರುವ ಪ್ರತಿಯೊಂದು ವಿಷಯಗಳನ್ನು ಅವರಿಗೆ ಪ್ರದರ್ಶಿಸಿದನು.