ಆದಿಕಾಂಡ 24:54 - ಪರಿಶುದ್ದ ಬೈಬಲ್54 ಆ ಸೇವಕನು ಮತ್ತು ಅವನ ಸಂಗಡಿಗರು ಅಲ್ಲಿ ಇಳಿದುಕೊಂಡು ಊಟಮಾಡಿದರು. ಅವರು ಮರುದಿನ ಮುಂಜಾನೆ ಎದ್ದು, “ಈಗ ನಾವು ನಮ್ಮ ಒಡೆಯನ ಬಳಿಗೆ ಹೋಗುತ್ತೇವೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ಬಳಿಕ ಅವನೂ ಅವನ ಸಂಗಡ ಬಂದ ಸೇವಕರೂ ಊಟ ಉಪಚಾರಗಳನ್ನು ಮುಗಿಸಿಕೊಂಡು ರಾತ್ರಿಯೆಲ್ಲಾ ಅಲ್ಲೇ ಇದ್ದರು. ಬೆಳಗ್ಗೆ ಎದ್ದಾಗ ಅವನು, “ನನ್ನ ದಣಿಯ ಬಳಿಗೆ ಹೊರಡುವುದಕ್ಕೆ ನನಗೆ ಅಪ್ಪಣೆಯಾಗಲಿ” ಎಂದು ಕೇಳಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ಅವನು ಮತ್ತು ಅವನ ಸಂಗಡ ಬಂದಿದ್ದವರು ಊಟ ಉಪಚಾರಗಳನ್ನು ಮುಗಿಸಿಕೊಂಡು ರಾತ್ರಿಯನ್ನು ಅಲ್ಲೇ ಕಳೆದರು. ಬೆಳಿಗ್ಗೆ ಎದ್ದು, “ನನ್ನೊಡೆಯನ ಬಳಿಗೆ ಹೋಗಲು ಅಪ್ಪಣೆಯಾಗಬೇಕು,” ಎಂದ ಆ ಸೇವಕ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ಬಳಿಕ ಅವನೂ ಅವನ ಸಂಗಡ ಬಂದ ಮನುಷ್ಯರೂ ಊಟ ಉಪಚಾರಗಳನ್ನು ತೀರಿಸಿಕೊಂಡು ರಾತ್ರಿಯೆಲ್ಲಾ ಅಲ್ಲೇ ಇದ್ದರು. ಬೆಳಿಗ್ಗೆ ಎದ್ದಾಗ ಅವನು - ನನ್ನ ದಣಿಯ ಬಳಿಗೆ ಹೊರಡುವದಕ್ಕೆ ನನಗೆ ಅಪ್ಪಣೆಯಾಗಲಿ ಎಂದು ಕೇಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ತರುವಾಯ ಅವನೂ, ಅವನ ಸಂಗಡ ಇದ್ದ ಜನರೂ ಊಟಮಾಡಿ, ಕುಡಿದು, ರಾತ್ರಿಯನ್ನು ಅಲ್ಲೇ ಕಳೆದರು. ಬೆಳಿಗ್ಗೆ ಎದ್ದ ಮೇಲೆ ಅವನು, “ನನ್ನನ್ನು ನನ್ನ ಯಜಮಾನನ ಬಳಿಗೆ ಕಳುಹಿಸಿರಿ,” ಎಂದನು. ಅಧ್ಯಾಯವನ್ನು ನೋಡಿ |