Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:60 - ಪರಿಶುದ್ದ ಬೈಬಲ್‌

60 ಅವರು ಹೊರಡಲು ಸಿದ್ಧರಾಗಿದ್ದಾಗ ಅವರು ರೆಬೆಕ್ಕಳಿಗೆ, “ನಮ್ಮ ತಂಗಿಯೇ, ನೀನು ಕೋಟ್ಯಾನುಕೋಟಿ ಜನರ ತಾಯಿಯಾಗು. ನಿನ್ನ ಸಂತತಿಗಳವರು ತಮ್ಮ ಶತ್ರುಗಳನ್ನು ಸೋಲಿಸಿ ಅವರ ನಗರಗಳನ್ನು ವಶಮಾಡಿಕೊಳ್ಳಲಿ” ಎಂದು ಹೇಳಿ ಹರಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

60 ಮತ್ತು ರೆಬೆಕ್ಕಳಿಗೆ, “ತಂಗಿ, ನಿನ್ನಿಂದ ಸಾವಿರ, ಹತ್ತು ಸಾವಿರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಸ್ವತ್ತನ್ನು ಸ್ವಾಧೀನಮಾಡಿಕೊಳ್ಳಲಿ” ಎಂದು ಹೇಳಿ ಹರಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

60 “ಸಾವಿರ, ಹತ್ತು ಸಾವಿರ, ಸಂತತಿಯಾಗಲಿ, ಎಲೆ ತಂಗಿ ನಿನಗೆ; ವೈರಿಗಳ ನಗರಗಳು ಸ್ವಾಧೀನವಾಗಲಿ ನಿನ್ನ ಸಂತತಿಗೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

60 ಮತ್ತು ರೆಬೆಕ್ಕಳಿಗೆ - ತಂಗಿಯೇ, ನಿನ್ನಿಂದ ಲಕ್ಷಾಂತರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲಿ ಎಂದು ಹೇಳಿ ಹರಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

60 ಇದಲ್ಲದೆ ಅವರು ರೆಬೆಕ್ಕಳನ್ನು ಹೀಗೆಂದು ಆಶೀರ್ವದಿಸಿದರು: “ನಮ್ಮ ಸಹೋದರಿಯೇ, ನೀನು ಸಹಸ್ರ ಸಹಸ್ರ ಮಕ್ಕಳಿಗೆ ತಾಯಿಯಾಗು. ನಿನ್ನ ಸಂತಾನದವರು ತಮ್ಮ ವೈರಿಗಳ ಪ್ರದೇಶಗಳನ್ನು ಸ್ವಾಧೀನಮಾಡಿಕೊಳ್ಳಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:60
15 ತಿಳಿವುಗಳ ಹೋಲಿಕೆ  

ನಾನು ನಿನ್ನನ್ನು ಖಂಡಿತವಾಗಿಯೂ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಖಂಡಿತವಾಗಿಯೂ ಹೆಚ್ಚಿಸುವೆನು; ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಮರಳಿನಂತೆಯೂ ಅಸಂಖ್ಯಾತರನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ನಾನು ಆಕೆಯನ್ನು ಆಶೀರ್ವದಿಸಿ ಆಕೆಗೆ ಒಬ್ಬ ಮಗನನ್ನು ದಯಪಾಲಿಸುವೆನು; ನೀನೇ ಅವನ ತಂದೆ. ಅನೇಕ ಜನಾಂಗಗಳಿಗೂ ರಾಜರುಗಳಿಗೂ ಆಕೆಯು ಮೂಲಮಾತೆಯಾಗಿರುವಳು” ಎಂದು ಹೇಳಿದನು.


ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ, ನಿನಗೆ ಅನೇಕ ಮಕ್ಕಳನ್ನು ಕೊಡುವಂತೆಯೂ ನೀನು ಮಹಾಜನಾಂಗದ ತಂದೆಯಾಗುವಂತೆಯೂ ನಾನು ಪ್ರಾರ್ಥಿಸುವೆನು.


ದೇವರು ನೋಹನನ್ನೂ ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ, “ಅನೇಕ ಮಕ್ಕಳನ್ನು ಪಡೆದು ಭೂಮಿಯಲ್ಲೆಲ್ಲಾ ತುಂಬಿಕೊಳ್ಳಿರಿ.


ದೇವರು ಅವರನ್ನು ಆಶೀರ್ವದಿಸಿ, “ನೀವು ಅನೇಕ ಮಕ್ಕಳನ್ನು ಪಡೆದು ಭೂಮಿಯಲ್ಲೆಲ್ಲಾ ಹರಡಿಕೊಂಡು ಅದನ್ನು ಸ್ವಾಧೀನಪಡಿಸಿಕೊಳ್ಳಿರಿ. ಸಮುದ್ರದಲ್ಲಿರುವ ಮೀನುಗಳ ಮೇಲೆ, ಆಕಾಶದಲ್ಲಿರುವ ಪಕ್ಷಿಗಳ ಮೇಲೆ ಮತ್ತು ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆ ದೊರೆತನ ಮಾಡಿರಿ” ಅಂದನು.


ಗುಲಾಮರಾದ ಈ ಪರದೇಶಸ್ಥರನ್ನು ನೀವು ಸತ್ತನಂತರ ನಿಮ್ಮ ಮಕ್ಕಳಿಗೆ ಕೊಡಬೇಕು. ಹೀಗೆ ಅವರು ನಿಮ್ಮ ಮಕ್ಕಳಿಗೆ ಸೇರಿದವರಾಗುವರು. ಅವರು ಎಂದೆಂದೂ ನಿಮ್ಮ ಗುಲಾಮರಾಗಿರುವರು. ನಿಮ್ಮ ಈ ಪರದೇಶಸ್ಥರನ್ನು ಗುಲಾಮರನ್ನಾಗಿ ಮಾಡಿಕೊಳ್ಳಬಹುದು. ಆದರೆ ನೀವು ಇಸ್ರೇಲ್ ಜನರಾದ ನಿಮ್ಮ ಸ್ವಂತ ಸಹೋದರರ ಮೇಲೆ ಕ್ರೂರವಾದ ಒಡೆಯರಾಗಿರಬಾರದು.


ಅಂದು ಇಸ್ರೇಲನು ಅವರನ್ನು ಆಶೀರ್ವದಿಸಿ, “ಇಸ್ರೇಲರು ನಿಮ್ಮ ಹೆಸರುಗಳ ಮೂಲಕ ಬೇರೆಯವರನ್ನು ಆಶೀರ್ವದಿಸುವರು. ‘ದೇವರು ನಿನ್ನನ್ನು ಎಫ್ರಾಯೀಮನಂತೆಯೂ ಮನಸ್ಸೆಯಂತೆಯೂ ಮಾಡಲಿ’ ಎಂದು ಹೇಳುವರು” ಎಂದನು. ಹೀಗೆ, ಇಸ್ರೇಲನು ಎಫ್ರಾಯೀಮನನ್ನು ಮನಸ್ಸೆಗಿಂತ ದೊಡ್ಡವನನ್ನಾಗಿ ಮಾಡಿದನು.


ಆ ಪುರಾತನ ರಾಜನ ಮುಂದೆ ಬೆಂಕಿಯ ನದಿಯೊಂದು ಹರಿಯುತ್ತಿತ್ತು. ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು. ಕೋಟ್ಯಾನುಕೋಟಿ ಪರಲೋಕ ಸಮೂಹದವರು ಆತನ ಮುಂದೆ ನಿಂತಿದ್ದರು. ನ್ಯಾಯಾಲಯವು ಪ್ರಾರಂಭವಾಗುವುದಕ್ಕೆ ಎಲ್ಲ ಸಿದ್ಧತೆಗಳು ಆಗಿದ್ದವು ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.


ಆಗ ಅವನ ತಂದೆತಾಯಿಗಳು ಆ ಮಗನನ್ನು ಪಟ್ಟಣದ ಹಿರಿಯರು ಸೇರಿಬರುವ ಸ್ಥಳಕ್ಕೆ ಕರೆದುಕೊಂಡು ಹೋಗಿ


ಅಬ್ರಾಮನನ್ನು ಹೀಗೆ ಆಶೀರ್ವದಿಸಿದನು: “ಅಬ್ರಾಮನೇ, ಮಹೋನ್ನತನಾದ ದೇವರು ನಿನ್ನನ್ನು ಆಶೀರ್ವದಿಸಲಿ. ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದಾತನು ಆತನೇ.


ಆಮೇಲೆ ರೆಬೆಕ್ಕಳು ಮತ್ತು ಆಕೆಯ ಸೇವಕಿಯರು ಒಂಟೆಯ ಮೇಲೆ ಹತ್ತಿ ಕುಳಿತುಕೊಂಡು ಆ ಸೇವಕನನ್ನೂ ಅವನ ಸಂಗಡಿಗರನ್ನೂ ಹಿಂಬಾಲಿಸಿದರು. ಹೀಗೆ ಆ ಸೇವಕನು ರೆಬೆಕ್ಕಳನ್ನು ಕರೆದುಕೊಂಡು ಮನೆಗೆ ಮರಳಿ ಪ್ರಯಾಣಮಾಡಿದನು.


ಯಾಕೋಬನು ಅಲ್ಲಿಂದ ಹೊರಟು ಪ್ರಯಾಣ ಮಾಡುತ್ತಿರುವಾಗ ದೇವದೂತರನ್ನು ನೋಡಿದನು.


ಮದುವೆ ಮಾಡಿಕೊಳ್ಳಿರಿ; ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೂ ನಿಮ್ಮ ಹೆಣ್ಣುಮಕ್ಕಳಿಗೂ ಮದುವೆ ಮಾಡಿರಿ. ಅವರಿಗೂ ಗಂಡು ಮತ್ತು ಹೆಣ್ಣು ಮಕ್ಕಳಾಗಲಿ. ಅನೇಕ ಮಕ್ಕಳನ್ನು ಹೆತ್ತು ಬಾಬಿಲೋನಿನಲ್ಲಿ ಬಹುಸಂಖ್ಯಾತರಾಗಿ. ಅಲ್ಪಸಂಖ್ಯಾತರಾಗಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು